News Kannada
Tuesday, November 29 2022

ಮೈಸೂರು

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರ ಬಗ್ಗೆ ಹೇಳಲು ಏಳು ದಿನ ಬೇಕು: ಅಮಿತ್ ಶಾ - 1 min read

Photo Credit :

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರ ಬಗ್ಗೆ ಹೇಳಲು ಏಳು ದಿನ ಬೇಕು: ಅಮಿತ್ ಶಾ

ಮೈಸೂರು: ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರ ಪ್ರಕರಣಗಳನ್ನು ಹೇಳುತ್ತ ಹೋದರೆ ಒಂದು ವಾರ ಬೇಕಾಗುತ್ತದೆ. ಅಷ್ಟು ಮಾಹಿತಿ ನನ್ನ ಬಳಿ ಇದೆ, ಭ್ರಷ್ಟ ಸಿದ್ದರಾಮಯ್ಯ ಸರ್ಕಾರವನ್ನು ಕಿತ್ತೊಗೆಯಲೇಬೇಕೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಕರೆ ನೀಡಿದ್ದಾರೆ.

ಇಂದು ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅಮಿತ್ ಶಾ, ಭಾರತ್ ಮಾತಾ ಕೀ ಜಯ್ ಎಂಬ ಘೋಷಣೆಯೊಂದಿಗೆ ಭಾಷಣ ಆರಂಭಿಸಿ ಭಾವೀ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ತಮ್ಮ ಭಾಷಣ ಆರಂಭಿಸಿದರು. ಮುಖ್ಯಮಂತ್ರಿಗಳ ಬಂದ್ ನಡುವೆ ಸಾಕಷ್ಟು ಸಂಖ್ಯೆಗಳಲ್ಲಿ ಜನರು ಆಗಮಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರ ಪ್ರಕರಣಗಳನ್ನು ಹೇಳುತ್ತಾ ಹೋದರೆ 7 ದಿನ ಬೇಕಾಗುತ್ತದೆ. ಅಷ್ಟು ಮಾಹಿತಿ ನನ್ನ ಬಳಿ ಇದೆ. ಇಂತಹ ಭ್ರಷ್ಟಾಚಾರಿ, ದುರಂಹಕಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವನ್ನು ಕಿತ್ತೊಗೆಯಬೇಕೆಂದು ಕರ್ನಾಟಕದ ಜನತೆಗೆ ಸಿಎಂ ತವರು ಜಿಲ್ಲೆಯಲ್ಲಿ ಕರೆ ನೀಡಿ ಸಿಎಂಗೆ ಸವಾಲೆಸೆದರು.

ಈ ಸರ್ಕಾರ ರೈತರ ಮಿತ್ರ ಸರ್ಕಾರ ಅಂಥ ಹೇಳುತ್ತೆ. ಆದರೆ 2500 ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಉತ್ತರ ನೀಡುವುದಿಲ್ಲ. ಸರ್ಕಾರ ಹಿಂದೂಗಳ ಹಿತ ಬಯಸುವ ಸರ್ಕಾರ ಎಂದು ಹೇಳತ್ತೆ. ಆದರೆ ಕಾಂಗ್ರೆಸ್ ಜನಪರ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ. ಇವತ್ತಿನ ಸರ್ಕಾರ ಯಾತ್ರೆಗೆ ಹೆದರಿ ಬಂದ್ ಗೆ ಕರೆ ನೀಡಿ ತೊಂದರೆಗೆ ಉಂಟು ಮಾಡಿದೆ ಎಂದು ಆರೋಪಿಸಿದರು.

ಸರ್ಕಾರಕ್ಕೆ ನಾನು ಚಾಲೆಂಜ್ ಮಾಡುತ್ತೇನೆ. ಮುಂದಿನ ಸಲ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬರುತ್ತದೆ. ಫೆ. 4ರಂದು ಮೋದಿ ಅವರ ರ‍್ಯಾಲಿ ತಡೆಯಲು ಬಂದ್ ಮಾಡಲು ಯತ್ನಿಸುತ್ತಿದ್ದಾರೆ. ನನಗೆ ವಿಶ್ವಾಸವಿದೆ ಫೆ. 4ರಂದು ನಡೆಯುವ ರ‍್ಯಾಲಿಯಲ್ಲಿ ಬೆಂಗಳೂರಿನ ಯಾತ್ರೆಗೆ ಜನರು ಬರುತ್ತಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಇವತ್ತು ನಾನು ಮೈಸೂರಿನ ಪವಿತ್ರ ಭೂವಿಯಲ್ಲಿದ್ದೇನೆ. ಚಾಮುಂಡೇಶ್ವರಿ ಮಹಿಷಾಸುರನನ್ನು ಸಂಹರಿಸಿದ ನಾಡು ಇದು. ಕರ್ನಾಟಕ ಭಷ್ಟಾಚಾರಿ, ದುರಂಹಕಾರಿ ಮುಖ್ಯಮಂತ್ರಿಯನ್ನು ಕಿತ್ತೊಗೆಯಬೇಕಾಗಿದೆ. ಯಡಿಯೂಪರಪ್ಪನವರು 224 ಕ್ಷೇತ್ರಗಳಲ್ಲಿ 8 ಸಾವಿರ ಕಿ.ಮೀ ಯಾತ್ರೆ ಮುಗಿಸಿ ಮೈಸೂರಿಗೆ ಬಂದಿದ್ದಾರೆ. ಕರ್ನಾಟಕದ ಯಾವ ರಾಜಕಾರಣಿಯೂ ಸಹ ಈ ತರಹದ ಯಾತ್ರೆ ಮಾಡಿರಲಿಲ್ಲ. ಆದ್ದರಿಂದ ಯಡಿಯೂರಪ್ಪನವರನ್ನೆ ಅಭಿನಂದಿಸುತ್ತೇನೆ ಎಂದರು.

ಕರ್ನಾಟಕ ನಿರ್ಮಾಣಕ್ಕಾಗಿ ಶ್ರಮಿಸಿರುವವರ ಜಯಂತಿ ಬಿಟ್ಟು ಕರ್ನಾಟಕದಲ್ಲಿ ಟಿಪ್ಪು ಜಯಂತಿಯನ್ನು ಮಾಡಿದ್ದೀರಿ. ಈ ಮೂಲಕ ಸಮಾಜ ಒಡೆಯುವ ಕೆಲಸ ಮಾಡಿದರು. ನರೇಂದ್ರ ಮೋದಿ ಹಲವಾರು ಘೋಷಣೆ ಕೊಟ್ಟಿದ್ದಾರೆ. ಸಮಾಜ ಒಡೆಯುವ ಕೆಲಸ ಮಾಡುವುದಿಲ್ಲ, ಎಲ್ಲರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತದೆ. ಕಾಂಗ್ರೆಸ್ ಸರ್ಕಾರದ ತಾರತಮ್ಯ ನೀತಿಯಿಂದ ಇಲ್ಲಿಯವರೆಗೆ ಕರ್ನಾಟಕದಲ್ಲಿ 20 ಜನ ಆರ್ ಎಸ್ ಎಸ್ ಕಾರ್ಯಕರ್ತರ ಕೊಲೆ ನಡೆದಿದೆ. ಎಸ್ ಡಿಪಿಐ ಮೇಲೆ ಇದ್ದಂತಹ ಎಲ್ಲಾ ಕೇಸ್ ಗಳನ್ನು ಹಿಂದೆ ತೆಗೆದುಕೊಂಡಿದ್ದಾರೆ. ನಾವು ಪ್ರಶ್ನೆ ಮಾಡುತ್ತೇವೆ. ನೀವು ಅವರನ್ನು ಬೆಂಬಲಿಸುತ್ತೀರಾ? ಗಣೇಶ ಚತುರ್ಥಿಯ ಸಂದರ್ಭದಲ್ಲಿ ಅನುಮತಿ ಕೊಡುವುದಿಲ್ಲ. ಆದರೆ ಬೇರೆ ಕೆಲಸಗಳಿಗೆ ಅನುಮತಿ ನೀಡುತ್ತೀರಾ ಎಂದು ಪ್ರಶ್ನಿಸಿದರು.

See also  ಸಿಬ್ಬಂದಿಗೆ ಲೈಗಿಂಕ ಕಿರುಕುಳ: ವೃದ್ಧ ಪ್ರಾಂಶುಪಾಲರ ವಿರುದ್ಧ ಎಫ್ಐಆರ್

ಇದೇ ಸಂಧರ್ಭದಲ್ಲಿ ಮೈಸೂರು ನಗರ ಬಿಜೆಪಿ ಘಟಕದ ವತಿಯಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಬೃಹತ್ ಗಾತ್ರದ ಹಾರ ಹಾಕಿ ಚಾಮುಂಡೇಶ್ವರಿ ವಿಗ್ರಹ ನೀಡಿ ಸನ್ಮಾನಿಸಲಾಯಿತು. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು