News Kannada
Friday, December 09 2022

ಮೈಸೂರು

ಅಂಗನವಾಡಿ ಬಾಗಿಲು ತೆರೆಯದ ಕಾರ್ಯಕರ್ತೆ

Photo Credit :

ಅಂಗನವಾಡಿ ಬಾಗಿಲು ತೆರೆಯದ ಕಾರ್ಯಕರ್ತೆ

ಮೈಸೂರು: ಕಳೆದ ಮೂರು ದಿನಗಳಿಂದ ಬಾಗಿಲು ತೆಗೆಯದ ಅಂಗನವಾಡಿ ಕೇಂದ್ರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಮತ್ತು ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ಕೆ.ಆರ್.ನಗರ ತಾಲೂಕಿನ ಕಂಚಿನಕೆರೆ ಗ್ರಾಮದಲ್ಲಿ ನಡೆದಿದೆ.

ಕಂಚಿನಕೆರೆ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ರಾಜಮ್ಮ ಎಂಬುವರು ಕಾರ್ಯ ನಿರ್ವಹಿಸುತ್ತಿದ್ದು, ಇವರು ಕಳೆದ ಮೂರು ದಿನಗಳಿಂದ ಕೇಂದ್ರದ ಬಾಗಿಲನ್ನು ತೆಗೆದಿರಲಿಲ್ಲ ಎನ್ನಲಾಗಿದೆ. ಇದರಿಂದ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ಸರ್ಕಾರದ ಮಾತೃಪೂರ್ಣ ಯೋಜನೆ ತಲುಪಿಲ್ಲ ಎಂದು ಗ್ರಾಮಸ್ಥರು ದೂರು ನೀಡಿದ್ದು ಹೀಗಾಗಿ ಸ್ಥಳಕ್ಕೆ ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಮತ್ತು ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಪಿ.ಯೋಗೇಶ್ ಅವರು ಅಂಗನವಾಡಿ ಕಾರ್ಯಕರ್ತೆಯ ವಿರುದ್ಧ ಜನ ದೂರು ನೀಡಿದ ಹಿನ್ನೆಲೆಯಲ್ಲಿ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಸುಮಿತ್ರ ಅವರ ಗಮನಕ್ಕೆ ತರಲಾಗಿದ್ದು, ಅವರೊಂದಿಗೆ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದಾಗ ಬೆಳಿಗ್ಗಿನಿಂದಲೇ ಬಾಗಿಲು ತೆರೆಯದಿರುವುದು ಗೋಚರಿಸಿತು. ಈ ಬಗ್ಗೆ ತನಿಖೆ ಮತ್ತು ಮಾಹಿತಿ ಪಡೆಯುವುದಾಗಿ ಹೇಳಿದರು.

ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಸುಮಿತ್ರ ಮಾತನಾಡಿ ಸರ್ಕಾರ ಮಾತೃಪೂರ್ಣ ಯೋಜನೆಯಲ್ಲಿ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ವಾರದಲ್ಲಿ ಐದರಿಂದ ಆರು ದಿನಗಳ ಊಟವನ್ನು ಕೇಂದ್ರದಲ್ಲಿ ಮಾಡಬೇಕು. ಆದರೆ ಇಲ್ಲಿ ಅದು ನಡೆದಿಲ್ಲ ಎಂಬ ದೂರುಗಳಿದ್ದು, ಮತ್ತೊಮ್ಮೆ ಭೇಟಿ ನೀಡಿ ಸೂಕ್ತ ಮಾಹಿತಿ ಪಡೆದು ಕ್ರಮವಹಿಸುವುದಾಗಿ ಹೇಳಿದ್ದಾರೆ.

See also  ನಂಜುಂಡೇಶ್ವರನ ರಥ ಶೃಂಗಾರ ಮಾಡುವವರಿಗೆ ಮೊದಲ ಬಾರಿಗೆ ವಿಮೆ ಭಾಗ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು