News Kannada
Thursday, December 08 2022

ಮೈಸೂರು

ಪಕೋಡ ಮಾರಾಟ ಮಾಡಿ ಪ್ರಧಾನಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Photo Credit :

ಪಕೋಡ ಮಾರಾಟ ಮಾಡಿ ಪ್ರಧಾನಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಮಂಡ್ಯ: ದೇಶದ ಯುವಜನರಿಗೆ ಪಕೋಡ ತಯಾರಿಸಿ ಮಾರಾಟ ಮಾಡಲು ಸಲಹೆ ನೀಡಿದ್ದಾರೆಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪಕೋಡ ಮಾರಾಟ ಮಾಡುವ ಮೂಲಕ ಪ್ರತಿಭಟಿಸಿದರು.

ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಮಾವಣೆಗೊಂಡ ಕಾರ್ಯಕರ್ತರು, ಸ್ಥಳದಲ್ಲೇ ಪಕೋಡ ತಯಾರಿಸಿ ಸಾರ್ವಜನಿಕರಿಗೆ ಮಾರಾಟ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

2014ರ ಲೋಕಸಭಾ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಪ್ರಕಟಿಸಿದ್ದ ಭರವಸೆಗಳನ್ನು ಕಂಡು ದೇಶದ ಯುವ ಜನರು ನಂಬಿ ಮತ ಹಾಕಿದರು. ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಅಧಿಕಾರ ವಹಿಸಿಕೊಂಡ ನಂತರ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುತ್ತಾರೆಂಬ ನಿರೀಕ್ಷೆಯಲ್ಲಿದ್ದರು. ಆದರೆ, ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡದಿರುವುದರಿಂದ ಯುವಜನರು ಪರದಾಡುವ ಸ್ಥಿತಿಗೆ ಬಂದಿದ್ದಾರೆ.

ಕೃಷಿ, ಕೈಗಾರಿಕೆಯಲ್ಲಿ ಮುನ್ನಡೆಯಲ್ಲಿದ್ದ ಭಾರತ, ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡ ಬಳಿಕ ಹಿಂದೆ ಬಿದ್ದಿದೆ. ನೋಟು ಅಮಾನೀಕರಣದ ನಂತರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಿಡಿಪಿ ದರ ಕುಸಿತ ಕಂಡಿದೆ. ಇದೆಲ್ಲದರ ಜತೆಗೆ ದಿನನಿತ್ಯ ಬಳಕೆ ವಸ್ತುಗಳ ಬೆಲೆಯೂ ಏರಿಕೆಯಾಗಿದ್ದು, ಜನರು ಕುಗ್ಗಿಹೋಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲೋಕೇಶ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾಧ್ಯಕ್ಷೆ ಅಂಜನಾ ಶ್ರೀಕಾಂತ್, ಎಪಿಎಂಸಿ ಅಧ್ಯಕ್ಷೆ ಪಲ್ಲವಿ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

See also  ಹಿಂದುಳಿದ ವರ್ಗಗಳ ಮೀಸಲಾತಿ ಹಿಂಬಡ್ತಿ ತೀರ್ಪನ್ನು ವಿರೋಧಿಸಿ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು