News Kannada
Monday, December 05 2022

ಮೈಸೂರು

ರೈತನಾಯಕ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಇನ್ನಿಲ್ಲ

Photo Credit :

ರೈತನಾಯಕ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಇನ್ನಿಲ್ಲ

ಮಂಡ್ಯ: ರೈತನಾಯಕ. ಹೋರಾಟಗಾರ, ಮೇಲುಕೋಟೆ ಕ್ಷೇತ್ರದ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ(69) ಅವರು ಭಾನುವಾರ ರಾತ್ರಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಬಡ್ಡಿ ಪಂದ್ಯ ವೀಕ್ಷಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದು ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪುಟ್ಟಣ್ಣಯ್ಯ ನಿಧನದಿಂದ ಮಂಡ್ಯ ಮಾತ್ರವಲ್ಲದೆ ಇಡೀ ಕರ್ನಾಟಕದ ರೈತರು ಶೋಕ ಸಾಗರದಲ್ಲಿ ಮುಳುಗುವಂತಾಗಿದೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ಶ್ರೀಕಂಠೇಗೌಡ ಮತ್ತು ಶಾರದಮ್ಮ ದಂಪತಿಗಳ ಪುತ್ರರಾಗಿ 1949ರಲ್ಲಿ ಜನಿಸಿದರು. ಪ್ರೌಢಶಾಲಾ ವಿದ್ಯಾಭ್ಯಾಸವನ್ನು ಸ್ಥಳೀಯವಾಗಿ ಮುಗಿಸಿ ಕಾಲೇಜು ಶಿಕ್ಷಣವನ್ನು ಮೈಸೂರಿನ ಸೆಂಟ್ ಫಿಲೋಮಿನಾ ಮತ್ತು ಡಿ.ಬನುಮಯ್ಯ ಕಾಲೇಜಿನಲ್ಲಿ ಮುಗಿಸಿದ್ದರು.

ರೈತರ ಕುಟುಂಬದಲ್ಲಿ ಜನಿಸಿದ್ದರಿಂದ ರೈತರ ಸಂಕಷ್ಟಗಳನ್ನು ಚೆನ್ನಾಗಿಯೇ ಅರಿತಿದ್ದರು. ಅದಕ್ಕಾಗಿ ರೈತರ ಪರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರಲ್ಲದೆ, 1983ರಲ್ಲಿ ರೈತ ಸಂಘಕ್ಕೆ ಕಾರ್ಯಕರ್ತನಾಗಿ ಸೇರ್ಪಡೆಗೊಂಡರು. ಅಲ್ಲಿಂದ ಹೋರಾಟದ ಮುಂಚೂಣಿಯಲ್ಲಿದ್ದ ಅವರು ಹಂತಹಂತವಾಗಿ ಬೆಳೆಯುತ್ತಾ ಹೋದರಲ್ಲದೆ, ರೈತ ಸಂಘಟದ ಪ್ರಮುಖ ನಾಯಕನಾಗಿ ಗುರುತಿಸಿಕೊಳ್ಳುತ್ತಾ ರೈತಪರ ಹೋರಾಟವನ್ನು ಮಾಡುತ್ತಾ ರಾಜ್ಯದಲ್ಲಿ ಗುರುತಿಸಿಕೊಂಡಿದ್ದರು. 1994ರಲ್ಲಿ ರಾಜಕೀಯಕ್ಕೆ ಧುಮುಕಿದ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. ಆ ನಂತರ ಸೋಲು ಕಂಡರಾದರೂ 2013ರಲ್ಲಿ ಜೆಡಿಎಸ್ ನ ಪುಟ್ಟರಾಜು ಅವರನ್ನು ಸೋಲಿಸಿ ಗೆಲುವು ಪಡೆದಿದ್ದರು.

ಪುಟ್ಟಣ್ಣಯ್ಯ ಅವರ ಪುತ್ರಿ, ಮೊಮ್ಮಕ್ಕಳು ವಿದೇಶದಲ್ಲಿರುವ ಕಾರಣ ಪಾರ್ಥಿವ ಶರೀರವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿರಿಸಿ ಬುಧವಾರ ಅಂತ್ಯಕ್ರಿಯೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. ಪುಟ್ಟಣ್ಣಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ, ನಟ ಅಂಬರೀಶ್, ಸಂಸದ ಪುಟ್ಟರಾಜು, ಮಾಜಿ ಸಿಎಂ ಎಸ್.ಎಂ.ಕೃಷ್ಣ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ

See also  ಮೈಸೂರು ನಗರ ಪೊಲೀಸ್ ಆಯುಕ್ತರಿಂದ ರೌಡಿ ಶೀಟರ್ ಗಳಿಗೆ ನೀತಿಪಾಠ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು