News Kannada
Sunday, September 25 2022

ಮೈಸೂರು

ಮೈಸೂರಲ್ಲಿ ಸಿಸಿಟಿವಿ ಅಳವಡಿಕೆಯತ್ತ ಜನರ ಚಿತ್ತ! - 1 min read

Photo Credit :

ಮೈಸೂರಲ್ಲಿ ಸಿಸಿಟಿವಿ ಅಳವಡಿಕೆಯತ್ತ ಜನರ ಚಿತ್ತ!

ಮೈಸೂರು: ನಗರದಲ್ಲಿ ಅಪರಾಧ ತಡೆ ಮತ್ತು ಪತ್ತೆ ಕಾರ್ಯದಲ್ಲಿ ಸಿಸಿ ಟಿವಿಗಳು ಮಹತ್ವದ ಕಾರ್ಯನಿರ್ವಹಿಸುತ್ತಿರುವುದನ್ನು ಅಲ್ಲಗಳೆಯುವಂತಿಲ್ಲ. ಈಗಾಗಲೇ ಹಲವು ಪ್ರಕರಣಗಳಲ್ಲಿ ಸಿಸಿಟಿವಿಯಿಂದಾಗಿ ದುಷ್ಕರ್ಮಿಗಳನ್ನು ಸೆರೆ ಹಿಡಿಯಲು ಪೊಲೀಸರಿಗೆ ಅನುಕೂಲವಾಗಿರುವುದನ್ನು ನಾವು ಕಾಣಬಹುದಾಗಿದೆ.

ಆರ್ಥಿಕವಾಗಿ ಅನುಕೂಲವಾಗಿರುವವರು ತಮ್ಮ ಮನೆಯ ಮುಂಭಾಗದಲ್ಲಿ ಸಿಸಿಟಿವಿ ಅಳವಡಿಸುವುದರಿಂದ ಹತ್ತು ಹಲವು ಅನುಕೂಲವಾಗುವುದರಲ್ಲಿ ಎರಡು ಮಾತಿಲ್ಲ. ಇತ್ತೀಚೆಗಿನ ದಿನಗಳಲ್ಲಿ ಯಾರನ್ನೂ ನಂಬಲಾರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾರು ಯಾವಾಗ ಏನು ಮಾಡುತ್ತಾರೆ ಎಂಬುದನ್ನು ತಿಳಿಯುವುದೇ ಕಷ್ಟವಾಗಿದೆ. ಹೀಗಾಗಿ ಸಿಸಿಟಿವಿ ಅಳವಡಿಕೆ ಬಹುಪಯೋಗಿ ಎಂದರೆ ತಪ್ಪಾಗಲಾರದು.

ಮೈಸೂರು ನಗರದಲ್ಲಿ ಈಗಾಗಲೇ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅದರಲ್ಲಿ ಸಿಸಿಟಿವಿ ಅಳವಡಿಕೆ ಕುರಿತ ಅರಿವು ಕಾರ್ಯಕ್ರಮವೂ ಒಂದಾಗಿದೆ.

ಸುಧಾರಿತ ಗಸ್ತು ವ್ಯವಸ್ಥೆ ಮೂಲಕ ಪ್ರತಿ ಬೀಟ್ ಪೊಲೀಸರು ಸಹ ತಮ್ಮ ಬೀಟ್ ವ್ಯಾಪ್ತಿಯ ಸಾರ್ವಜನಿಕರ ಸಭೆ ನಡೆಸಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳುತಿದ್ದು, ಬಡಾವಣೆ, ವಾರ್ಡ್ ಗಳಲ್ಲಿನ ನಿವಾಸಿಗಳ ಸಭೆ ನಡೆಸಿ ಅಪರಾಧ ತಡೆ ಮತ್ತು ಪತ್ತೆ ಕಾರ್ಯದಲ್ಲಿ ಸಿಸಿಟಿವಿ ಕ್ಯಾಮರಾಗಳ ಪ್ರಾಮುಖ್ಯತೆ ಬಗ್ಗೆ ತಿಳುವಳಿಕೆ ನೀಡುವ ಮೂಲಕ ಮನೆಗಳಲ್ಲಿ ಸಿಸಿಟಿವಿ ಅಳವಡಿಕೆ ಕುರಿತ ಮಾಹಿತಿ ನೀಡಲಾಗುತ್ತಿದ್ದು, ಇದಕ್ಕೆ ಸಾರ್ವಜನಿಕರು ಸ್ಪಂದಿಸಿ ತಮ್ಮ ಮನೆಗಳಲ್ಲಿ ಸಿಸಿಟಿವಿ ಅಳವಡಿಸಿಕೊಳ್ಳಲು ಮುಂದಾಗಿರುವುದು ಕಂಡು ಬರುತ್ತಿದೆ.

ಸಿಸಿ ಟಿವಿ ಕ್ಯಾಮರಾಗಳು ಅಪರಾಧ ತಡೆ ಮತ್ತು ಪತ್ತೆ ಕಾರ್ಯದಲ್ಲಿ ಪ್ರಾಮುಖ್ಯತೆಯನ್ನು ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಇಲಾಖೆಯಿಂದ ಸಿ.ಸಿ. ಟಿ.ವಿ. ಕ್ಯಾಮರಾಗಳನ್ನು ಅಳವಡಿಸುವುದರ ಜೊತೆಗೆ ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಈಗಾಗಲೇ ನಗರದ ಬಡಾವಣೆಗಳಲ್ಲಿ ಸಾರ್ವಜನಿಕ ಸಹಯೋಗದೊಂದಿಗೆ ಸಿ.ಸಿ. ಟಿ.ವಿ. ಕ್ಯಾಮರಾಗಳನ್ನು ಅಳವಡಿಸಲಾಗಿರುವುದನ್ನು ನಾವು ಕಾಣಬಹುದಾಗಿದೆ. ಒಟ್ಟಾರೆ ಮೈಸೂರು ನಗರದ ಪೊಲೀಸ್ ಆಯುಕ್ತರಾದ ಡಾ. ಎ. ಸುಬ್ರಮಣ್ಯೇಶ್ವರ ರಾವ್ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಿಂದಾಗಿ ಹೆಚ್ಚಿನ ಬಡಾವಣೆಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸುವಂತಾದರೆ ಅದರಿಂದ ಅಪರಾಧ ತಡೆಗಟ್ಟಲು ಸಾಧ್ಯವಾಗಬಹುದು.

See also  ಯುವ ಸಮೂಹ ಗಾಂಧೀಜಿ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು: ಸಚಿವ ಜಿ.ಟಿ.ದೇವೇಗೌಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು