News Kannada
Monday, October 03 2022

ಮೈಸೂರು

ಟ್ರ್ಯಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು - 1 min read

Photo Credit :

ಟ್ರ್ಯಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

ಕೆ.ಆರ್.ಪೇಟೆ: ಜಮೀನಿಗೆ ಮಣ್ಣು ಸಾಗಿಸುತ್ತಿದ್ದಾಗ ಟ್ರ್ಯಾಕ್ಟರ್ ಹಿಮ್ಮುಖವಾಗಿ ಮಗುಚಿಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಕೊಟಗಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ತೆಂಗಿನಘಟ್ಟ ಗ್ರಾಮದ ನಿವಾಸಿ ಯೋಗೇಶ್(28) ಮೃತಪಟ್ಟ ಚಾಲಕ. ಈತ ಮಧು ಎಂಬುವರಿಗೆ ಸೇರಿದ ಟ್ರ್ಯಾಕ್ಟರ್ ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಕೊಟಗಹಳ್ಳಿ ಗ್ರಾಮದ ರಾಮಕೃಷ್ಣೇಗೌಡ ಅವರ ಜಮೀನಿಗೆ ಮಣ್ಣು ಸಾಗಿಸುವ ಕೆಲಸ ಮಾಡುವಾಗ ದುರ್ಘಟನೆ ನಡೆದಿದೆ. ಮಧ್ಯಾಹ್ನದ ವೇಳೆ ಟ್ರ್ಯಾಕ್ಟರ್ ನಲ್ಲಿ ಮಣ್ಣು ಸಾಗಿಸುತ್ತಿದ್ದಾಗ ಟ್ರ್ಯಾಕ್ಟರ್ ನಲ್ಲಿ ಇಂಜಿನ್ ಹಿಮ್ಮುಖವಾಗಿ ಮಗುಚಿದ್ದು, ಪರಿಣಾಮ ಚಾಲಕ ಯೋಗೇಶ್ ಟ್ರ್ಯ್ರಾಕ್ಟರ್ ಟ್ರೈಲರ್ ಮತ್ತು ಇಂಜಿನ್ ನ ನಡುವೆ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ.

ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪಟ್ಟಣ ಪೊಲೀಸ್ ಠಾಣೆಯ ಸಬ್ಇನ್ಸ್ ಪೆಕ್ಟರ್ ವೆಂಕಟೇಶ್, ಜಿ.ಪಂ. ಮಾಜಿ ಉಪಾಧ್ಯಕ್ಷ ಕೆ.ಎಸ್.ಪ್ರಭಾಕರ್, ತಾಪಂ ಮಾಜಿ ಅಧ್ಯಕ್ಷ ಕಿಕ್ಕೇರಿ ಸುರೇಶ್, ಮನ್ಮುಲ್ ನಿರ್ದೇಶಕ ಡಾಲು ರವಿ, ಗ್ರಾ.ಪಂ.ಸದಸ್ಯ ನಾರಾಯಣ್ ಮತ್ತಿತರರು ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಘಟನೆ ಕುರಿತು ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಜೆಡಿಎಸ್ ಮುಖಂಡ ಎಂ.ಸಿ ಸುಂದರೇಶನ್ ಇನ್ನಿಲ್ಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು