News Kannada
Saturday, October 01 2022

ಮೈಸೂರು

ಸುತ್ತೂರು ಮಠಕ್ಕೆ ಅಮಿತ್ ಶಾ ಭೇಟಿ - 1 min read

Photo Credit :

ಸುತ್ತೂರು ಮಠಕ್ಕೆ ಅಮಿತ್ ಶಾ ಭೇಟಿ

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಕಾವು ದಿನೇ ದಿನೇ ಜೋರಾಗುತ್ತಿದ್ದು, ರಾಷ್ಟ್ರೀಯ ಪಕ್ಷದ ನಾಯಕರು ಮೇಲಿಂದ ಮೇಲೆ ರಾಜ್ಯ ಪ್ರವಾಸ ನಡೆಸುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಕಮಲ ಅರಳಿಸಲು ಮಿಂಚಿನ ಸಂಚಾರ ನಡೆಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು.

ಇಂದು ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲಾಗಳಲ್ಲಿ ಪ್ರವಾಸ ಕೈಗೊಂಡಿರುವ ಅಮಿತ್ ಶಾ, ತಡರಾತ್ರಿ 1.40ಕ್ಕೆ ಮೈಸೂರಿಗೆ ಆಗಮಿಸಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದ ಅವರು ಬೆಳಗ್ಗೆ ಸುತ್ತೂರು ಮಠಕ್ಕೆ ಭೇಟಿ ನೀಡಿದರು.

ಸುತ್ತೂರು ಮಠದಿಂದ ಅಮಿತ್ ಶಾ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ನಂತರ ಶ್ರೀಗಳ ಆಶೀರ್ವಾದ ಪಡೆದು ಗುಪ್ತ ಸಮಾಲೋಚನೆ ನಡೆಸಿದರು. ಶಾ ಅವರಿಗೆ ಕೇಂದ್ರ ಸಚಿವ ಅನಂತ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದರು.

See also  ಯುಜಿಸಿ ವಿರುದ್ದ ಹೈಕೋರ್ಟ್ ನಲ್ಲಿ ಕೇಸ್ ದಾಖಲಿಸಿದ ಕೆಎಸ್ಓಯು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು