News Kannada
Monday, December 05 2022

ಮೈಸೂರು

ರಾಜ್ಯದಲ್ಲಿ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ: ಕುಮಾರಸ್ವಾಮಿ

Photo Credit :

ರಾಜ್ಯದಲ್ಲಿ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ: ಕುಮಾರಸ್ವಾಮಿ

ಮೈಸೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಇದುವರೆಗೆ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮುಂದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಸೋಮವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಯಾವುದೇ ಕೆಲಸ ವಹಿಸಲು, ಟೆಂಡರ್ ಕರೆಯಲು ಹಾಗೂ ಕೆಲಸದ ಹಣ ಬಿಡುಗಡೆ ಮಾಡಲು ಕಮಿಷನ್ ಪಡೆದಿದ್ದು, ಆ ಮೂಲಕ ಚುನಾವಣೆಯ ವೇಳೆಯಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಗುತ್ತಿಗೆದಾರರ ಬಳಿ ಚುನಾವಣೆಗೆ ಹಣವನ್ನು ಸಂಗ್ರಹಿಸಲಾಗಿದೆ. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋತು ಹೋದರೆ ಗುತ್ತಿಗೆದಾರರ ಪರಿಸ್ಥಿತಿ ಏನಾಗಬಹುದು ಎಂಬುದನ್ನು ಯೋಚಿಸಿ ಅವರು ಬೇರೆ ದಾರಿ ಕಾಣದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದ ದುಸ್ಥಿತಿ ಒದಗಿ ಬರಬಹುದೆಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ನುಡಿದಂತೆ ನಡೆದ ಸರ್ಕಾರ ಅಲ್ಲ, ನುಡಿದಂತೆ ಹೊಡೆದ ಸರ್ಕಾರ ಎಂದು ಲೇವಡಿ ಮಾಡಿದ ಅವರು, ಪಾರದರ್ಶಕತೆ ಬಗ್ಗೆ ಮಾತನಾಡುವ ಸಿದ್ದರಾಮಯ್ಯನವರು ಪಾರದರ್ಶಕತೆಯ ಆಡಳಿತ ಎಲ್ಲಿದೆ ಎಂಬುದನ್ನು ಮೊದಲಿಗೆ ತೋರಿಸಲಿ ಎಂದು ಸವಾಲ್ ಹಾಕಿದರು.

ಇವತ್ತು ಯಾವುದೇ ಗುತ್ತಿಗೆದಾರರನ್ನು ಕೇಳಿದರೆ ದಾಖಲೆ ಸಹಿತವಾಗಿ ಪಾರದರ್ಶಕತೆ ಏನು ಎಂಬುದನ್ನು ತೋರಿಸುತ್ತಾರೆ. ಅನ್ನಭಾಗ್ಯ ಯೋಜನೆ ಮೂಲಕ ಬಡವರಿಗೆ ಅಕ್ಕಿ ನೀಡುವುದಾಗಿ ಹೇಳುವ ಸಿಎಂ, ಮತ್ತೊಂದೆಡೆ ಅಬಕಾರಿ ಇಲಾಖೆ ಮೂಲಕ ಮದ್ಯದ ಮೇಲಿನ ತೆರಿಗೆ ಹೆಚ್ಚಿಸಿ ಬಡಕುಟುಂಬಗಳಿಂದ ಹೆಚ್ಚಿನ ತೆರಿಗೆ ಸಂಗ್ರಹಿಸುತ್ತಿದ್ದಾರೆ. ಇದರೊಂದಿಗೆ ರಾಜ್ಯದ ಜನರ ತೆರಿಗೆ ಹಣದಲ್ಲಿ ಎಷ್ಟು ಲೂಟಿ ಮಾಡಬೇಕೆಂದಿದ್ದರೋ ಅಷ್ಟನ್ನು ಲೂಟಿ ಹೊಡೆದಿದ್ದು, ಇದರಿಂದ ಮುಂದೆ ಯಾವುದೇ ಪಕ್ಷದವರು ಅಧಿಕಾರಕ್ಕೆ ಬಂದರೂ ಸುಲಭವಾಗಿ ಸರ್ಕಾರ ನಡೆಸಲು ಸಾಧ್ಯವಾಗದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣ ಮಾಡಿದ್ದಾರೆ ಎಂದು ಕಿಡಿಕಾರಿದರು.

See also  ಮೈಸೂರು ಜಿಲ್ಲಾಧಿಕಾರಿಯಿಂದ ರಾಜ್ಯ -ಕೇರಳ ಗಡಿ ಚೆಕ್‌ ಪೋಸ್ಟ್ ಪರಿಶೀಲನೆ 
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು