News Kannada
Sunday, November 27 2022

ಮೈಸೂರು

ಸಬ್ ಇನ್ಸ್ ಪೆಕ್ಟರ್ ಆರೋಗ್ಯ ವಿಚಾರಿಸಿದ ಕುಮಾರಸ್ವಾಮಿ - 1 min read

Photo Credit :

ಸಬ್ ಇನ್ಸ್ ಪೆಕ್ಟರ್ ಆರೋಗ್ಯ ವಿಚಾರಿಸಿದ ಕುಮಾರಸ್ವಾಮಿ

ಮೈಸೂರು: ಜೆಡಿಎಸ್ ಸಮಾವೇಶದಲ್ಲಿ ಜನರನ್ನು ನಿಯಂತ್ರಿಸುವ ವೇಳೆ ಸಬ್ ಇನ್ಸ್ ಪೆಕ್ಟರ್ ಕಾಲುಗಳಿಗೆ ಗಾಯಗೊಂಡಿರುವ ಘಟನೆ ಹುಣಸೂರಿನಲ್ಲಿ ನಡೆದಿದ್ದು, ಇಂದು ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ನಿನ್ನೆ ಹುಣಸೂರಿನಲ್ಲಿ ಜೆಡಿಎಸ್ ಸಮಾವೇಶ ಆಯೋಜನೆ ಮಾಡಿದ್ದ ಹಿನ್ನೆಲೆಯಲ್ಲಿ ಸಮಾವೇಶಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಜನರು ಬಂದಿದ್ದರು. ಸಮಾವೇಶಕ್ಕೆ ಬರುವ ಕಾರ್ಯಕರ್ತರನ್ನು ನಿಭಾಯಿಸುವ ವೇಳೆ ಬಿಳಿಕೆರೆಯ ಸಬ್ ಇನ್ಸ್ ಪೆಕ್ಟರ್ ಮಾದೇವನಾಯಕ್ ಕಾಲಿಗೆ ಪೆಟ್ಟು ಬಿದ್ದು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ವಿಷಯ ತಿಳಿದು ಇಂದು ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ, ಸಬ್ ಇನ್ಸ್ ಪೆಕ್ಟರ್ ಮಾದೇವನಾಯಕ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನನ್ನ ರಕ್ಷಣೆ ಮಾಡಲು ಬಂದ ಸಬ್ ಇನ್ಸ್ ಪೆಕ್ಟರ್ ಮಾದೇವನಾಯಕ್ ಅವರ ಎರಡು ಕಾಲುಗಳಿಗೂ ಪೆಟ್ಟು ಬಿದ್ದಿದೆ. ಎರಡು ಕಾಲುಗಳಿಗೂ ರಾಡು ಹಾಕಬೇಕು ಅಂದಿದ್ದಾರೆ. ಅದಕ್ಕಾಗಿ ಅವರ ಆರೋಗ್ಯ ವಿಚಾರಿಸಲು ಬಂದಿದ್ದೇನೆ ಎಂದರು.

ಇನ್ನೂ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಕಲಿ ಗುರುತಿನ ಚೀಟಿ ಪತ್ತೆ ವಿಚಾರಕ್ಕೆ ಪ್ರತ್ರಿಕ್ರಿಯಿಸಿದ ಕುಮಾರಸ್ವಾಮಿ, ಈಗಾಗಲೇ ಈ ವಿಷಯ ಚುನಾವಣಾ ಆಯೋಗಕ್ಕೆ ತಿಳಿದಿದ್ದೆ. ಚುನಾವಣಾ ಆಯೋಗದವರು ಯಾವ ತೀರ್ಮಾನ ತಗೆದುಕೊಳ್ಳುತ್ತಾರೆ ನೋಡಬೇಕಿದೆ ಎಂದರು.

See also  ಚುನಾವಣಾ ಪೂರ್ವದಲ್ಲಿಯೇ ಬಿಜೆಪಿ, ಜೆಡಿಎಸ್ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದೆ: ರಾಹುಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು