News Kannada
Monday, October 03 2022

ಮೈಸೂರು

ಅಂಬಿಗೆ ಆಹ್ವಾನವಿತ್ತ ಕುಮಾರಸ್ವಾಮಿ - 1 min read

Photo Credit :

ಅಂಬಿಗೆ ಆಹ್ವಾನವಿತ್ತ ಕುಮಾರಸ್ವಾಮಿ

ಮಂಡ್ಯ: ಕಾಂಗ್ರೆಸ್ ನಲ್ಲಿ ತಟಸ್ಥರಾಗಿ ಜೆಡಿಎಸ್ ನತ್ತ ಒಲವು ತೋರಿದ್ದ ಮಾಜಿ ಸಚಿವ ಅಂಬರೀಶ್ ಅವರನ್ನು ಖುದ್ದು ಭೇಟಿ ಮಾಡಿದ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ನಡೆಯಲಿರುವ ಪ್ರಮಾಣ ವಚನ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.

ಸೋಮವಾರ ತಡರಾತ್ರಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಕುಮಾರಸ್ವಾಮಿ ಅವರು, ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ, ಶಾಸಕ ತಮ್ಮಣ್ಣ ಅವರ ಪುತ್ರ ಸಂತೋಷ್ ತಮ್ಮಣ್ಣ ಅವರೊಂದಿಗೆ ಅಂಬರೀಶ್ ಅವರ ನಿವಾಸಕ್ಕೆ ತೆರಳಿ ಆಹ್ವಾನ ನೀಡಿದ್ದಾರೆ.

ಈ ವೇಳೆ ಅಂಬರೀಶ್ ಅವರು ಕುಮಾರಸ್ವಾಮಿ ಅವರಿಗೆ ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ ಎನ್ನಲಾಗಿದೆ. ಅದೇನೆಂದರೆ ಮಂಡ್ಯದ ಎಲ್ಲ 7 ಕ್ಷೇತ್ರಗಳು ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮತದಾರರು ಸಹಕರಿಸಿದ್ದಾರೆ. ಅವರ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿ ನಡೆದುಕೊಳ್ಳುವಂತೆ ಕಿವಿಮಾತು ಹೇಳಿದರು ಎನ್ನಲಾಗಿದೆ.

ಜಿಲ್ಲೆಯಲ್ಲೇ ಅತಿ ಹೆಚ್ಚು ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು. ರಾಜ್ಯದಲ್ಲಿ ರೈತ ಪರವಾದ ಸರ್ಕಾರವನ್ನು ನೀಡುವುದರ ಜೊತೆಗೆ ಒಳ್ಳೆಯ ನಿರ್ಧಾರಗಳನ್ನು ಕೈಗೊಳ್ಳಿ ಎಂದು ಹೇಳಿದರು ಎಂದು ಹೇಳಲಾಗಿದೆ.

See also  ಬೆಟ್ಟದಪುರದಲ್ಲಿ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬ್ರಹ್ಮರಥೋತ್ಸವ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು