News Kannada
Friday, September 30 2022

ಮೈಸೂರು

ಹೆಚ್ ಡಿಕೆ ಪ್ರಮಾಣ ವಚನ: ಮಂಡ್ಯದಲ್ಲಿ ಹಾಲಿನಾಭಿಷೇಕ - 1 min read

Photo Credit :

ಹೆಚ್ ಡಿಕೆ ಪ್ರಮಾಣ ವಚನ: ಮಂಡ್ಯದಲ್ಲಿ ಹಾಲಿನಾಭಿಷೇಕ

ಮಂಡ್ಯ: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಬಸರಾಳು ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಕುಮಾರಸ್ವಾಮಿ ಅವರ ಫ್ಲೆಕ್ಸ್ ಗೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸಿದರು.

ಬಸರಾಳು ಹೋಬಳಿಯ ಜೆಡಿಎಸ್ ಕಾರ್ಯಕರ್ತರು ತಾಲೂಕು ಜೆಡಿಎಸ್ ಅಧ್ಯಕ್ಷ ಎಂ.ಜಿ.ತಿಮ್ಮೇಗೌಡ ನೇತೃತ್ವದಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದ ದೃಶ್ಯಾವಳಿಗಳನ್ನು ಎಲ್ಇಡಿ ಮೂಲಕ ಸಾರ್ವಜನಿಕರು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು.

ತಾಲೂಕು ಜೆಡಿಎಸ್ ಅಧ್ಯಕ್ಷ ಎಂ.ಜಿ.ತಿಮ್ಮೇಗೌಡ ಮಾತನಾಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಸಮನ್ವಯ ಸಾಧಿಸಿಕೊಂಡು ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡಲು ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮುಂದಾಗಬೇಕು ಎಂದು ಮನವಿ ಮಾಡಿದರು. ರೈತರ ಅಭಿವೃದ್ಧಿಗಾಗಿ ಆಶಾದಾಯಕ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಷ್ಟ್ರದಲ್ಲಿ ಬಲಿಷ್ಠ ಮುಖ್ಯಮಂತ್ರಿಯಾಗಬೇಕು. ರೈತರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಬೇಕು. ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡಬೇಕು. ಕೃಷಿ ಯಂತ್ರೋಪಕರಣಗಳಲ್ಲಿ ಆಧುನಿಕತೆಯನ್ನು ಪರಿಚಯಿಸಬೇಕು ಎಂದು ತಿಳಿಸಿದರು.

See also  ಕೊಲೆ, ಅತ್ಯಾಚಾರ ದೌರ್ಜನ್ಯ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಬೃಹತ್ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು