ಮೈಸೂರು: ಕೇಂದ್ರ ಸರ್ಕಾರ 4 ವರ್ಷಗಳಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದೆ. ಆ ಕೆಲಸಗಳನ್ನು ಪೂರ್ಣಗೊಳಿಸಲು ಅವರಿಗೆ 5 ವರ್ಷ ಸಾಲುವುದಿಲ್ಲ. ಇನ್ನಷ್ಟು ವರ್ಷಗಳ ಕಾಲ ಕೇಂದ್ರದಲ್ಲಿ ಅವರು ಅಧಿಕಾರಕ್ಕೆ ಬರಬೇಕು ಎಂದು ಯದುವೀರ್ ಕೃಷ್ಣದತ್ತ ಒಡೆಯರ್ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಬೆಂಬಲ ಸೂಚಿಸಿದರು.
ಇಂದು ಸಂಸದ ಪ್ರತಾಪ್ ಸಿಂಹ ಯದುವೀರ್ ಅವರನ್ನು ಅರಮನೆಯಲ್ಲಿ ಭೇಟಿ ಮಾಡಿ, ಕೇಂದ್ರ ಸರ್ಕಾರದ ನಾಲ್ಕು ವರ್ಷದ ಸಾಧನೆಯ ಪುಸ್ತಕ ನೀಡಿ ಮೈಸೂರಿಗೆ ಕೇಂದ್ರ ಸರ್ಕಾರ ನೀಡಿರುವ ಪ್ರತಿಯೊಂದು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯದುವೀರ್, ಕೇಂದ್ರ ಸರ್ಕಾರ 4 ವರ್ಷಗಳಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದೆ. ಅವುಗಳನ್ನು ಸಂಪೂರ್ಣಗೊಳಿಸಲು ಅವರಿಗೆ 5 ವರ್ಷ ಸಾಲುವುದಿಲ್ಲ. ಇನ್ನಷ್ಟು ವರ್ಷಗಳ ಕಾಲ ಕೇಂದ್ರದಲ್ಲಿ ಅವರು ಅಧಿಕಾರಕ್ಕೆ ಬರಬೇಕು. ಹೀಗಾದರೆ ಅವರು ಮಾಡಿರುವ ಕೆಲಸಗಳು ಪೂರ್ಣವಾಗುವುದು. ಆದ್ದರಿಂದ ನಾವೆಲ್ಲರೂ ಒಳ್ಳೆಯ ಕೆಲಸ ಮಾಡುವವರಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳುವ ಮೂಲಕ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಬೆಂಬಲ ಸೂಚಿಸಿದರು.