ಮೈಸೂರು: ಒಂದುವರೆ ವರ್ಷದ ಮಗು ಖಾಸಗಿ ಆಸ್ಪತ್ರೆಯಲ್ಲಿ ಸಾವ್ನಪ್ಪಿರುವ ಘಟನೆ ಹೆಚ್.ಡಿ ಕೋಟೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವ್ನಪ್ಪಿದೆ ಎಂದು ಫೋಷಕರು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆದಿದೆ.
ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಸೆಂಟ್ ಮೇರಿಸ್ ಆಸ್ಪತ್ರೆಗೆ ಒಂದುವರೆ ವರ್ಷ ಸುಭಾಗ್ ಎಂಬ ಹೆಸರಿನ ಗಂಡು ಮಗು ಜ್ವರ ಮತ್ತು ಕೆಮ್ಮಿನಿಂದ ಆಸ್ಪತ್ರೆಗೆ ದಾಖಲಾಗಿತ್ತು. ಈ ಮಗು ಸಂಜೆ ವೇಳೆಗೆ ಸಾವ್ನಪ್ಪಿದ್ದು ಇದರಿಂದ ಪೋಷಕರ ವೈದ್ಯರ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣ ಎಂದು ಆಸ್ಪತ್ರೆಯೊಳಗೆ ಗಲಾಟೆ ನಡೆಸಿ, ವೈದ್ಯರೊಂದಿಗೆ ಮಾತಿನ ಚಕಮಕಿ ನಡೆಸಿದರು.
ಈ ಬಗ್ಗೆ ವೈದ್ಯರು ಮಗುವಿಗೆ ಉಸಿರಾಟದ ತೊಂದರೆಯಿಂದ ಸಾವ್ನಪ್ಪಿದೆ ಇದರಲ್ಲಿ ವೈದ್ಯರ ನಿರ್ಲಕ್ಷ್ಯವಿಲ್ಲ ಎಂದು ಸಮಜಾಯಿಷಿ ನೀಡಿದರೂ ಪೋಷಕರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಸ್ಥಳಕ್ಕೆ ಹೆಚ್.ಡಿ ಕೋಟೆ ಪೊಲೀಸರು ಧಾವಿಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದು, ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.