News Kannada
Tuesday, November 29 2022

ಮೈಸೂರು

ಕಿಡಿಗೇಡಿಗಳಿಂದ ಕಾಲೇಜು ಪ್ರಾಂಶುಪಾಲರ ಕೊಠಡಿಗೆ ಬೆಂಕಿ - 1 min read

Photo Credit :

ಕಿಡಿಗೇಡಿಗಳಿಂದ ಕಾಲೇಜು ಪ್ರಾಂಶುಪಾಲರ ಕೊಠಡಿಗೆ ಬೆಂಕಿ

ಪಿರಿಯಾಪಟ್ಟಣ: ತಾಲೂಕಿನ ಬೆಟ್ಟದಪುರ ಹೋಬಳಿಯ ಕಿತ್ತೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೊಠಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ದಾಖಲೆಗಳು ಸೇರಿದಂತೆ ಇತರೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.

ರಾತ್ರಿವೇಳೆ ಕಾಲೇಜು ಆವರಣದಲ್ಲಿ ಕೆಲವು ಕಿಡಿಗೇಡಿಗಳು ಜೂಜಾಟ ಆಡುವುದು, ಮದ್ಯಸೇವಿಸುವುದು, ಹೀಗೆ ಅನೈತಿಕ ಚಟುವಟಿಕೆಗಳನ್ನು ನಡೆಸುತ್ತಿದ್ದು, ಪ್ರತಿ ದಿನವೂ ಬೆಳಗ್ಗೆ ಮದ್ಯದ ಬಾಟಲಿ ಸೇರಿದಂತೆ ಇಸ್ಪೀಟ್ ಹಾಳೆಗಳನ್ನು ಎಸೆದು ಹೋಗುತ್ತಿರುವುದು ಮಾಮೂಲಿಯಾಗಿದೆ. ಈ ಬಗ್ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಸಿಪಿಐ ಸಿದ್ದಯ್ಯ, ಪಿಎಸ್‍ಐ ಚಿಕ್ಕಸ್ವಾಮಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಿಡಿಗೇಡಿಗಳನ್ನು ಶೀಘ್ರವೇ ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದಾರೆ.

 

See also  ರಣಜಿ: ಕರ್ನಾಟಕಕ್ಕೆ ಮಹಾರಾಷ್ಟ್ರ ವಿರುದ್ಧ ಗೆಲುವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು