ಮೈಸೂರು: ಚಿರತೆಯ ಮೃತ ದೇಹವೊಂದು ಕಬಿನಿ ಜಲಾಶಯದ ಅಣೆಕಟ್ಟೆ ಬಳಿ ಪತ್ತೆಯಾಗಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯದ ಅಣೆಕಟ್ಟು ಬಳಿ ಚಿರತೆಯ ಮೃತದೇಹವೊಂದು ಪತ್ತೆಯಾಗಿದ್ದು, ಈ ಚಿರತೆಯ ಮೃತದೇಹ ಕಬಿನಿ ಹಿನ್ನೀರಿನಲ್ಲಿ ತೇಲಿಕೊಂಡು ಬಂದು ದಡ ಸೇರಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಚಿರತೆ ಮೂರು ದಿನಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಅರಣ್ಯ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದರು.