News Kannada
Friday, January 27 2023

ಮೈಸೂರು

ಪರಸ್ಪರ ಕಚ್ಚಾಡಿಕೊಂಡು ಸರ್ಕಾರ ಬಿದ್ದು ಹೋಗುತ್ತದೆ: ಕೆ.ಎಸ್ ಈಶ್ವರಪ್ಪ

Photo Credit :

ಪರಸ್ಪರ ಕಚ್ಚಾಡಿಕೊಂಡು ಸರ್ಕಾರ ಬಿದ್ದು ಹೋಗುತ್ತದೆ: ಕೆ.ಎಸ್ ಈಶ್ವರಪ್ಪ

ಮೈಸೂರು: ನಾವು ಯಾರನ್ನು ಪಕ್ಷಕ್ಕೆ ಬನ್ನಿ ಎಂದು ಕರೆದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ದುರ್ಬಲರಾಗಿದ್ದಾರೆ. ಅವರೇ ಪರಸ್ಪರ ಕಚ್ಚಾಡಿಕೊಂಡು ಸರ್ಕಾರವೇ ಬಿದ್ದು ಹೋಗುತ್ತದೆ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಕೆ.ಎಸ್ ಈಶ್ವರಪ್ಪ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಇಂದು ರಾಜ್ಯಾಧ್ಯಂತ ಮೂರು ತಂಡಗಳು ಲೋಕಸಭಾ ಚುನಾವಣೆಯ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನ ಸಂಘಟಿಸು ದೃಷ್ಟಿಯಿಂದ ಪ್ರವಾಸ ಕೈಗೊಂಡಿದ್ದು, ಅದರಲ್ಲಿ ಈಶ್ವರಪ್ಪ ನೇತೃತ್ವದ ತಂಡ ಮೈಸೂರು ಭಾಗದ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಪ್ರವಾಸ ಮಾಡಲಿದೆ. ಈ ಹಿನ್ನಲ್ಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಶಾಸಕ ಕೆ.ಎಸ್ ಈಶ್ವರಪ್ಪ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಮಾತನಾಡಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ, ಬಿಜೆಪಿ ಕರೆದ ತಕ್ಷಣ ಬಿಜೆಪಿಗೆ ಬರುವಷ್ಟು ಕಾಂಗ್ರೆಸ್ ಶಾಸಕರು ದುರ್ಬಲರಾಗಿದ್ದಾರಾ? ಬಿಜೆಪಿಯ 104 ಶಾಸಕರು ಸಿಂಹದ ರೀತಿಯಲ್ಲಿದ್ದಾರೆ. ಯಾರನ್ನ ನಮ್ಮ ಪಕ್ಷಕ್ಕೆ ಬನ್ನಿ ಎಂದು ಕರೆಯುವುದಿಲ್ಲ. ಕಾಂಗ್ರೆಸ್ ಶಾಸಕರ ಬಗ್ಗೆ ಅವರ ಅಧ್ಯಕ್ಷರಿಗೆ ನಂಬಿಕೆ ಇಲ್ಲದಂತಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ.

ಕಾಂಗ್ರೆಸ್ ನ ಶಾಸಕರು ಮಾರಟದ ವಸ್ತುಗಳಾಗಿದ್ದಾರೆ ಎಂದು ನಾನು ಹೇಳುತ್ತಿಲ್ಲ, ಕಾಂಗ್ರೆಸ್ ನ ಅಧ್ಯಕ್ಷರು ಮಂತ್ರಿಗಳು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ದುರ್ಬಲರಾಗಿದ್ದಾರೆ. ಇಬ್ಬರು ಕಚ್ಚಾಡಿಕೊಂಡು ಸರ್ಕಾರ ಬಿದ್ದು ಹೋಗುತ್ತದೆ ಎಂದು ಭವಿಷ್ಯ ನುಡಿದರು.

ರಾಜ್ಯದಲ್ಲಿ ಸರ್ಕಾರವೇ ಇಲ್ಲ, ಯಾವುದೇ ಸರ್ಕಾರಿ ಅಧಿಕಾರಿಗಳನ್ನ ಕೇಳಿದರೆ ಸರ್ ಯಾವತ್ತು ಈ ಸರ್ಕಾರ ಹೋಗುತ್ತೊ ಗೊತ್ತಿಲ್ಲ ಎಂದು ಹೇಳುತ್ತಾರೆ. ಯಾವತ್ತು ನನನ್ನ ವರ್ಗಾವಣೆ ಮಾಡುತ್ತಾರೋ ಗೊತ್ತಿಲ್ಲ ಎಂದು ಆತಂಕ ವ್ಯಕ್ತ ಪಡಿಸಿಸುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ವರ್ಗಾವಣೆಯಲ್ಲಿ ಇಷ್ಟೊಂದು ಭ್ರಷ್ಟಾಚರ ನಡೆದಿಯೇ ಇಲ್ಲ. ಮೊದಲ ಬಾರಿಗೆ ಇಷ್ಟೊಂದು ವರ್ಗಾವಣೆಯಲ್ಲಿ ಭ್ರಷ್ಟಾಚರ ನಡೆದಿದೆ. ಸಾರ್ವಜನಿಕರಿಗೆ ಈ ಸರ್ಕಾರ ಇದೆಯಾ ಎಂಬ ಬಗ್ಗೆ ಪ್ರಶ್ನೆ ಕೇಳುತ್ತಿದ್ದಾರೆ. ಐಎಎಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಭಾರಿ ದಂಧೆ ನಡೆಯುತ್ತಿದೆ. ಮಂತ್ರಿಗಳು ವರ್ಗಾವಣೆಯ ಕಮಿಷನ್ ದಂಧೆಯಲ್ಲಿ ಭಾಗಿಯಾಗಿದ್ದಾರೆ.

ಸರ್ಕಾರದಲ್ಲಿ ನೆಡೆಯುತ್ತಿರುವ ಭ್ರಷ್ಟಾಚರದ ಬಗ್ಗೆ ಮುಖ್ಯಮಂತ್ರಿಗಳು ಗಮನಿಸಬೇಕು. ಕಾಂಗ್ರೆಸ್ ಶಾಸಕರನ್ನ ನಮ್ಮ ಪಕ್ಷಕ್ಕೆ ಬನ್ನಿ ಎಂದು ಕರೆಯುವುದಿಲ್ಲ. ಅವರೇ ಕುಸಿದು ಬೀಳುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಆದಷ್ಟು ಬೇಗ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಮತ್ತು ಹಿಂದುಳಿದ ವರ್ಗದ ಜನರಿಗೆ ಎಷ್ಟು ಕೆಲಸ ಮಾಡಿದ್ದಾರೆ. ಕೇಂದ್ರ ಸರ್ಕಾರದ ಸಾಧನೆಯ ಬಗ್ಗೆ ರಾಜ್ಯದ ಜನರಿಗೆ ಮನವರಿಕೆ ಮಾಡಲು ರಾಜ್ಯದ ಪ್ರವಾ ಹೊರದ್ದೇವೆ. ೧೨ ಬೆಳೆಗಳಿಗೆ ಮೊದಲ ಬಾರಿಗೆ ಬೆಂಬಲ ಬೆಲೆಯನ್ನ ಘೋಷಣೆ ಮಾಡಿದ ದೇಶದ ಮೊದಲ ಪ್ರಧಾನಿ ನರೇಂದ್ರ ಮೋದಿ. ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಆಯ್ಕೆಯಾಗಬೇಕೆ ಎಂದರು.

See also  ದಾಂಪತ್ಯಕ್ಕೆ ಕಾಲಿಟ್ಟ ಮೈಸೂರಿನ ಹುಡ್ಗಿ-ನೆದರ್‌ಲ್ಯಾಂಡ್ ಹುಡ್ಗ

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

181
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು