News Kannada
Friday, December 02 2022

ಮೈಸೂರು

ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ಮೃತ್ಯು

Photo Credit :

ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ಮೃತ್ಯು

ಗುಂಡ್ಲುಪೇಟೆ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ತಾಲೂಕಿನ ಬೇಗೂರು ಸಮೀಪ ನಡೆದಿದೆ.

ಚಾಮರಾಜನಗರ ತಾಲೂಕಿನ ಶಿವಪುರ ಗ್ರಾಮದ ಜಗದೀಶ್(30) ಮೃತಪಟ್ಟ ಸವಾರ. ಈತ ತಮ್ಮ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಕಾರು ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬೇಗೂರು ಠಾಣೆಯ ಪಿಎಸ್‍ಐ ಕಿರಣ್‍ಕುಮಾರ್ ಹಾಗೂ ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿ ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಊಟಿಯಿಂದ ಗುಂಡ್ಲುಪೇಟೆ ಪಟ್ಟಣದತ್ತ ಬರುತ್ತಿದ್ದ ಸರಕು ಸಾಗಣೆ ಲಾರಿಯ ಟಯರ್ ಸಿಡಿದು ಹಿಂದೆ ಬರುತ್ತಿದ್ದ ಸ್ಕೂಟರ್ ಗೆ ಬಡಿದ ಪರಿಣಾಮ ಹಿಂಬದಿ ಕುಳಿತಿದ್ದ ಮಹಿಳೆ ಮಂಜುಳಾ(35) ಎಂಬುವರು ಸಾವಿಗೀಡಾಗಿದ್ದಾರೆ.

ಬೈಕ್ ಚಾಲನೆ ಮಾಡುತ್ತಿದ್ದ ರೇಷ್ಮಾ ಎಂಬುವರಿಗೂ ತೀವ್ರ ಪೆಟ್ಟುಬಿದ್ದಿದ್ದು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

See also  ಮೈಸೂರಿನಲ್ಲಿ ನಿಲ್ಲದ ರೈತರ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು