News Kannada
Monday, December 05 2022

ಮೈಸೂರು

ಪೊಲೀಸ್ ವಸತಿಗೃಹದಲ್ಲಿ ಸಿಲಿಂಡರ್ ಸ್ಪೋಟ: ತಪ್ಪಿದ ಅನಾಹುತ

Photo Credit :

ಪೊಲೀಸ್ ವಸತಿಗೃಹದಲ್ಲಿ ಸಿಲಿಂಡರ್ ಸ್ಪೋಟ: ತಪ್ಪಿದ ಅನಾಹುತ

ರಾಮನಗರ: ತಾಲೂಕಿನ ಬಿಡದಿ ಪೊಲೀಸ್ ವಸತಿ ಗೃಹದಲ್ಲಿ ಏಕಾಏಕಿ ಅಡುಗೆ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ನಡೆದಿದೆ.

ಬಿಡದಿ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ರಮೇಶ್ ಅವರ ಕುಟುಂಬ ವಾಸವಿದ್ದ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಮನೆಯಲ್ಲಿನ ಗೃಹಪಯೋಗಿ ವಸ್ತುಗಳು ಸಂಪೂರ್ಣ ಭಸ್ಮವಾಗಿ ಬೆಂಕಿಗಾಹುತಿಯಾಗಿವೆ.

ಬಿಡದಿ ಪಟ್ಟಣದಲ್ಲಿರುವ ಪೊಲೀಸ್ ವಸತಿ ಗೃಹಗಳ ಸಂಕೀರ್ಣದಲ್ಲಿ ಬಿಡದಿ ಠಾಣೆಯ ಎಎಸ್‍ಐ ರಮೇಶ್ ಅವರು ವಾಸವಿರುವ ಮನೆಯಲ್ಲಿ ಮಧ್ಯಾಹ್ನದ ಸಮಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ, ಗೃಹಪಯೋಗಿ ಸಿಲಿಂಡರ್‍ ನಲ್ಲಿದ್ದ ರೆಗ್ಯುಲೇಟರ್ ಆಕಸ್ಮಿಕವಾಗಿ ಕಳಚಿ ಗ್ಯಾಸ್ ಸೋರಲಾರಂಭಿಸಿದಾಗ ಮನೆಯಲ್ಲಿದ್ದವರು ಎಚ್ಚೆತ್ತು ಹೊರಗೆ ಓಡಿ ಬಂದಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಮನೆಯಲ್ಲಿದ್ದ ರೆಫ್ರಿಜರೇಟರ್ ಅಥವಾ ಯುಪಿಎಸ್‍ನಿಂದ ಶಾರ್ಟ್ ಸರ್ಕ್ಯೂಟ್ ಆಗಿ ಏಕಾಏಕಿ ದೊಡ್ಡ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು ಗೃಹಪಯೋಗಿ ಅನಿಲ ಸಿಲಿಂಡರ್ ಸ್ಪೋಟಗೊಂಡಿದೆ ಎಂದು ಹೇಳಲಾಗಿದ್ದು, ಇದರಿಂದ ಮನೆಯಲ್ಲಿದ್ದ ಪಾತ್ರೆಗಳು, ಬಟ್ಟೆಗಳು ಇತರೆ ವಸ್ತುಗಳು ಹಾಗೂ ಪೀಠೋಪಕರಣಗಳು ಸಂಪೂರ್ಣ ಸುಟ್ಟು ನಾಶವಾಗಿವೆ.

ಘಟನೆ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಗ್ಯಾಸ್ ಎಜೆನ್ಸಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

See also  ಇದುವರೆಗೆ ಮಳೆಗೆ ರಾಜ್ಯದಲ್ಲಿ 96 ಮಂದಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು