News Kannada
Monday, September 26 2022

ಮೈಸೂರು

ಮಂಡ್ಯಕ್ಕೆ ಸಿಎಂ ಭೇಟಿ: ಬಿಜೆಪಿ ಕಾರ್ಯಕರ್ತನ ಬಂಧನ - 1 min read

Photo Credit :

ಮಂಡ್ಯಕ್ಕೆ ಸಿಎಂ ಭೇಟಿ: ಬಿಜೆಪಿ ಕಾರ್ಯಕರ್ತನ ಬಂಧನ

ಮಂಡ್ಯ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ನಗರಕ್ಕೆ ಭೇಟಿ ನೀಡಿ ಕೆಡಿಪಿ ಸಭೆಯಲ್ಲಿ ಭಾಗವಹಿಸಿದ್ದು ಈ ಸಂದರ್ಭದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡುವುದಾಗಿ ಎಚ್ಚರಿಕೆ ನೀಡಿದ್ದ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.

ಮೋದಿ ವಿಚಾರಮಂತ್ ವೇದಿಕೆ ಕಾರ್ಯದರ್ಶಿ ಸಿ.ಟಿ. ಮಂಜುನಾಥ್ ಬಂಧಿತ ಬಿಜೆಪಿ ಕಾರ್ಯಕರ್ತ. ಇವರು ರೈತರ ಸಮಸ್ಯೆಗೆ ಸ್ಪಂದಿಸಿ, ಅಕ್ರಮ ಗಣಿಗಾರಿಕೆಯನ್ನು ಜಿಲ್ಲೆಯಲ್ಲಿ ನಿಷೇಧಿಸದಿದ್ದರೆ ಮುಖ್ಯಂಮತ್ರಿಗಳ ಭೇಟಿ ಸಂದರ್ಭದಲ್ಲಿ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಎಚ್ಚರಿಕೆ ನೀಡಿದ್ದರು. ಹೀಗಾಗಿ ಅವರನ್ನು ಮುಂಜಾಗ್ರತಾ ಕ್ರಮವಾಗಿ ಮಂಡ್ಯದ ಸೆಂಟ್ರಲ್ ಪೊಲೀಸರು ಬಂಧಿಸಿದ್ದಾರೆ.

ಬುಧವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮಂಡ್ಯ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಮಂಡ್ಯದ ಕೆಡಿಪಿ ಸಭೆ ನಡೆದ ಜಿಲ್ಲಾ ಪಂಚಾಯತ್ ಸಭಾಂಗಣದ ಸುತ್ತ ಪೊಲೀಸ್ ಸರ್ಪಗಾವಲು ಹಾಕುವುದರ ಜೊತೆಗೆ ಜಿ.ಪಂ. ಕಚೇರಿ ರಸ್ತೆಯಲ್ಲಿ ವಾಹನಗಳ ಸಂಚಾರ ನಿಷೇಧಿಸಿ, ಅಧಿಕಾರಿಗಳು ಮತ್ತು ನೌಕರರಿಗೆ ಗುರುತಿನ ಚೀಟಿಯನ್ನು ಕಡ್ಡಾಯ ಮಾಡಲಾಗಿತ್ತು.

See also  ಅರಣ್ಯದಲ್ಲಿ ಆಹಾರ ಸಮಸ್ಯೆಗೆ ಪ್ರಾಣಿಗಳು ಬಲಿ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು