News Kannada
Sunday, September 25 2022

ಮೈಸೂರು

ಐತಿಹಾಸಿಕ ಜಂಬೂಸವಾರಿಗೆ ಸಾಕ್ಷಿಯಾಗಲಿದೆ ಮೈಸೂರು - 1 min read

Photo Credit :

ಐತಿಹಾಸಿಕ ಜಂಬೂಸವಾರಿಗೆ ಸಾಕ್ಷಿಯಾಗಲಿದೆ ಮೈಸೂರು

ಮೈಸೂರು: ಐತಿಹಾಸಿಕ ವಿಶ್ವವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಮೈಸೂರು ನಗರ ಸರ್ವ ರೀತಿಯಿಂದಲೂ ಸಜ್ಜಾಗುತ್ತಿದ್ದು, ಕ್ಷಣಗಣನೆ ಆರಂಭವಾಗಿದೆ.

ಸಂಪ್ರದಾಯದಂತೆ ಬೆಳಗ್ಗೆ ಅರಮನೆ ದರ್ಬಾರ್ ಹಾಲ್‍ನಲ್ಲಿ ಸಾಂಪ್ರದಾಯಿಕ ವಿಧಿವಿಧಾನ ಮುಗಿಸಿದ ಯದುವೀರರು ಸಂಪ್ರದಾಯದಂತೆ ಅರಮನೆಯಿಂದ ವಿಜಯಾತ್ರೆಯಲ್ಲಿ ತೆರಳಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಲಿದ್ದು. ಇದೇ ವೇಳೆ ಕರಿತೊಟ್ಟಿಯಲ್ಲಿ ವಜ್ರಮುಷ್ಠಿ ಕಾಳಗ ನಡೆಯಲಿದೆ.

ಮಧ್ಯಾಹ್ನ 2.30ರಿಂದ 3.16ರವರೆಗೆ ಸಲ್ಲುವ ಶುಭ ಕುಂಭಲಗ್ನದಲ್ಲಿ ಅರಮನೆ ಬಲರಾಮದ್ವಾರದಲ್ಲಿ ನಂದೀಧ್ವಜಕ್ಕೆ ಪೂಜೆ ಮಾಡುವ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಂದೀದ್ವಜ ಮತ್ತು ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 3.40ರಿಂದ 4.10ಗಂಟೆಗೆ ಸಲ್ಲುವ ಶುಭ ಕುಂಭಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿ ಕಂಗೊಳಿಸುವ ಶ್ರೀಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ಈ ಬಾರಿ ಸುಮಾರು ಒಂದೂವರೆ ಗಂಟೆಗಳ ಕಾಲ ತಡವಾಗಿ ಚಿನ್ನದ ಅಂಬಾರಿ ಹೊತ್ತ ಅರ್ಜುನ ಹೊರಡಲಿದ್ದಾನೆ. ಮೆರವಣಿಗೆಯಲ್ಲಿ 30 ಜಿಲ್ಲಾ ಪಂಚಾಯತ್, ರಾಜ್ಯಮಟ್ಟದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು, ಸ್ತಬ್ಧಚಿತ್ರ ಉಪಸಮಿತಿ ಸೇರಿ 42 ಸ್ತಬ್ಧಚಿತ್ರಗಳು, ಹೆಸರಾಂತ ಕಲಾ ತಂಡಗಳು ಸೇರಿ ಒಟ್ಟು 40ಕ್ಕೂ ಹೆಚ್ಚು ಜಾನಪದ ತಂಡಗಳು ಭಾಗವಹಿಸಲಿವೆ. ಇದರೊಂದಿಗೆ ಚಿನ್ನದ ಅಂಬಾರಿ ಹೊತ್ತ ಅರ್ಜುನ ಸೇರಿ 12 ಗಜಪಡೆ, ಅಶ್ವರೋಹಿಪಡೆಗಳು, ಆನೆಗಾಡಿಗಳು ಮೆರವಣಿಗೆಯಲ್ಲಿ ಸಾಗಲಿವೆ.

ಅರಮನೆ ಆವರಣದಲ್ಲಿ 30 ಸಾವಿರ ಮಂದಿ ಕೂರಲು ಆಸನ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಪೆಂಡಾಲ್ ಹಾಕಿ ಆಸನದ ವ್ಯವಸ್ಥೆ ಮಾಡಲಾಗಿದೆ. ಗೋಲ್ಡ್ ಕಾರ್ಡ್, ವಿವಿಐಪಿ, ವಿಐಪಿ ಪಾಸ್‍ವುಳ್ಳವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಜಂಬೂ ಸವಾರಿ ವೇಳೆ ಸಾರ್ವಜನಿಕರು ರಸ್ತೆಗೆ ಬರದಂತೆ ಎರಡೂ ಕಡೆ ಮರದ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಕೆ.ಆರ್.ವೃತ್ತ, ಆಯುರ್ವೇದ ಕಾಲೇಜು ವೃತ್ತ, ಹೈವೈ ಸರ್ಕಲ್ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಈಗಾಗಲೇ ಸಿಸಿ ಟಿವಿಗಳಿದ್ದು ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿ ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ. ಅಲ್ಲದೆ ಎಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ..

ಐವರಿಗೆ ಮಾತ್ರ ಅವಕಾಶ: ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ವೇಳೆ ಶಿಷ್ಟಾಚಾರದ ಪ್ರಕಾರ ಐವರು ಗಣ್ಯರಿಗೆ ಮಾತ್ರಅವಕಾಶವಿದೆ. ಮುಖ್ಯಮಂತ್ರಿ, ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರು, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ವೇದಿಕೆ ಏರಲು ಸಾಧ್ಯವಿದೆ.

ಬನ್ನಿಮಂಟಪದ ಮೈದಾನದಲ್ಲಿ ನಡೆಯುವ ಪಂಜಿನ ಕವಾಯತಿನ ಮೂಲಕ ಮುಗಿಯಲಿದ್ದು ಪಂಜಿನ ಪವಾಯತಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾತ್ರಿ 7 ಗಂಟೆಗೆ ಪಂಜಿನಕವಾಯತು(ಟಾರ್ಚ್‍ಲೈಟ್ ಪೆರೇಡ್) ಆರಂಭವಾಗಲಿದ್ದು, ರಾಜ್ಯಪಾಲ ವಜುಭಾಯಿ ರುಡಾಭಾಯಿ ವಾಲಾ ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸುವರು. ನಾಡಗೀತೆ ಬಳಿಕ ಎರಡು ಗಂಟೆಗಳ ಕಾಲ ಪೊಲೀಸ್ ಸಿಬ್ಬಂದಿ ಸಾಹಸಮಯ ಪ್ರದರ್ಶನ ನೀಡಲಿದ್ದು, ಮೈನವೀರಿಳಿಸುವ ಬೈಕ್, ಅಶ್ವಾರೋಹಿ ಪಡೆಗಳ ಸಾಹಸ ಪ್ರದರ್ಶನ ಮಾಡಲಿದ್ದಾರೆ. ಕೊನೆಗೆ ಪಂಜಿನ ಕವಾಯತಿನ ಮೂಲಕ ಹತ್ತುದಿನಗಳ ನವರಾತ್ರಿ ಉತ್ಸವಕ್ಕೆ ತೆರೆ ಬೀಳಲಿದೆ.

See also  ಮಂತ್ರಿಸಿದ ನಿಂಬೆಹಣ್ಣನ್ನು ಕೈಯಲ್ಲಿ ಹಿಡಿದ ಸಿಎಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು