ಮಂಡ್ಯ: ಅಪರಿಚಿತ ವ್ಯಕ್ತಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಾಗಮಂಗಲ ತಾಲೂಕಿನ ಅವ್ವೇರಹಳ್ಳಿ ಬಳಿ ಬುಧವಾರ ಬೆಳಗ್ಗೆ ನಡೆದಿದೆ.
ಸುಮಾರು 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ನೋಡಿದ ಸಾರ್ವಜನಿಕರು ಮಾಹಿತಿ ನೀಡಿದ ಮೇರೆಗೆ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಈತ ಯಾರು ಎಂಬುದು ಗೊತ್ತಾಗದಷ್ಟು ಮೃತದೇಹ ಭೀಕರವಾಗಿದೆ. ಈತ ಆತ್ಮಹತ್ಯೆ ಮಾಡಿಕೊಳ್ಳಲೆಂದೇ ಇಲ್ಲಿಗೆ ಬಂದಿರಬಹುದೆಂದು ಶಂಕಿಸಲಾಗಿದೆ. ಈತ ಸ್ಥಳೀಯ ನಿವಾಸಿಯೇ ಅಥವಾ ಬೇರೆ ಕಡೆಯಿಂದ ಬಂದು ಇಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೇ ಹೀಗೆ ಹಲವು ಅನುಮಾನಗಳು ಕಾಡುತ್ತಿವೆ.
ರೈಲು ಕಂಬಿಗೆ ತಲೆಕೊಟ್ಟ ಪರಿಣಾಮ ತಲೆ ಹಾಗೂ ದೇಹ ತುಂಡರಿದಿದೆ, ಘಟನಾ ಸ್ಥಳಕ್ಕೆ ಬಿಂಡಿಗನವಿಲೆ ಪೊಲೀ ಸರುಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.