News Kannada
Friday, December 02 2022

ಮೈಸೂರು

ಆನೆದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

Photo Credit :

ಆನೆದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

ಮೈಸೂರು: ಆನೆದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಸಂಚಾರದಳದ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕೆ.ಆರ್.ನಗರ ನಿವಾಸಿ ಶನೋಜ್ ಕುಮಾರ್(39) ಎಂದು ಗುರುತಿಸಲಾಗಿದೆ. ಈತ ನಿನ್ನೆ ಬೆಳಿಗ್ಗೆ ಸುಭಾಷ್ ನಗರದ ಮುಖ್ಯ ರಸ್ತೆಯಲ್ಲಿ ತನ್ನ ಮತ್ತೋರ್ವ ಸಹಚರನ ಜೊತೆ ಆನೆದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಎನ್ನಲಾಗಿದೆ.

ಈ ಕುರಿತು ಖಚಿತ ಮಾಹಿತಿ ಪಡೆದ ಅರಣ್ಯ ಸಂಚಾರದಳದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈತನ ವಿರುದ್ಧ ಕುಮಟಾ ಅರಣ್ಯ ವಲಯದಲ್ಲಿ ಚಿರತೆ ಚರ್ಮ ಸಾಗಾಟ ಸಂಬಂಧ ಪ್ರಕರಣ ದಾಖಲಾಗಿತ್ತು. ಬಂಧಿತನಿಂದ ಆನೆದಂತ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಡಿಸಿಎಫ್ ಪೂವಯ್ಯ, ಆರ್ ಎಫ್ ಓಗಳಾದ ಮಧುಸೂದನ್, ಪ್ರಮೋದ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

See also  ಜೂಜು ಅಡ್ಡೆ ಮುಚ್ಚಿಸುವಂತೆ ಆಗ್ರಹಿಸಿ ರಸ್ತೆ ತಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು