News Kannada
Monday, December 05 2022

ಮೈಸೂರು

ಬಂಡೀಪುರದಲ್ಲಿ ಫ್ಲೈಓವರ್ ನಿರ್ಮಾಣ ಮಾಡದಂತೆ ಪ್ರತಿಭಟನೆ

Photo Credit :

ಬಂಡೀಪುರದಲ್ಲಿ ಫ್ಲೈಓವರ್ ನಿರ್ಮಾಣ ಮಾಡದಂತೆ ಪ್ರತಿಭಟನೆ

ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನದಲ್ಲಿ ರಾತ್ರಿ ಸಂಚಾರ ಹಾಗೂ ಫ್ಲೈಓವರ್ ನಿರ್ಮಾಣ ಮಾಡಬಾರದು ಎಂದು ಒತ್ತಾಯಿಸಿ ಪರಿಸರ ಪ್ರೇಮಿಗಳು, ರೈತಸಂಘಟನೆಗಳು, ರಾಜ್ಯ ಹಾಗೂ ಕೇರಳದ ಸ್ವಯಂ ಸೇವಾ ಸಂಸ್ಥೆಗಳವರು ಬಂಡೀಪುರ ಹುಲಿಯೋಜನೆಯ ಮದ್ದೂರು ಚೆಕ್‍ಪೋಸ್ಟ್ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಪರಿಸರವಾದಿ ಜೋಸೆಫ್ ಅವರು, ಸದ್ಯ ಬಂಡೀಪುರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ಸಂಚಾರ ನಿಶೇಧಿಸಿದ್ದರೂ ಕೇರಳ ರಾಜ್ಯದ ಒತ್ತಾಯಕ್ಕೆ ಮಣಿದು ರಾಜ್ಯ ಸರ್ಕಾರವು ಮತ್ತೆ ಸಂಚಾರ ಪ್ರಾರಂಭಿಸಲು ಪ್ರಯತ್ನ ನಡೆಸಿವೆ.

ನೆಲಂಬೂರಿಗೆ ರೈಲ್ವೇ ಸಂಪರ್ಕಕ್ಕೆ ಅರಣ್ಯ ಪ್ರದೇಶದಲ್ಲಿ ಫ್ಲೈಓವರ್ ನಿರ್ಮಾಣ ಮಾಡಲು ಅವಕಾಶ ಕೊಟ್ಟರೆ ಪರಿಸರ, ಅರಣ್ಯ ಹಾಗೂ ವನ್ಯಜೀವಿಗಳ ನಾಶಕ್ಕೆ ಕಾರಣವಾಗುತ್ತದೆ. ಅರಣ್ಯ ಪ್ರದೇಶದಲ್ಲಿರುವ ಸಾವಿರಾರು ಮರಗಳನ್ನು ಕಡಿಯುವುದರಿಂದ ಪರಿಸರ ಹಾಗೂ ಅರಣ್ಯನಾಶವಾಗುವ ಜತೆಗೆ ಮಡಿಕೇರಿಯಲ್ಲಿ ಸಂಭವಿಸಿದ ದುರಂತವು ಇಲ್ಲಿಯೂ ಸಂಭವಿಸಲಿದೆ. ರಾತ್ರಿ ವಾಹನ ಸಂಚಾರ ನಿಷೇಧ ವನ್ಯಜೀವಿಗಳ ಸಂತತಿ ಹೆಚ್ಚಾಗುತ್ತಿದೆ. ಆದ್ದರಿಂದ ಸಂಜೆ 6ರಿಂದಲೇ ಹೆದ್ದಾರಿಗಳಲ್ಲಿ ವಾಹನ ಸಂಚಾರ ನಿಲ್ಲಿಸಬೇಕು. ಅಲ್ಲದೆ ಯಾವುದೇ ಕಾರಣಕ್ಕೂ ಕೇರಳದ ಒತ್ತಡಕ್ಕೆ ಮಣಿದು ಮೇಲುಸೇತುವೆ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

ಪರಿಸರವಾದಿಗಳಾದ ಪುಣಜನೂರು ದೊರೆಸ್ವಾಮಿ, ರಾಜಕುಮಾರ್, ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ವನ್ಯಜೀವಿ ಛಾಯಾಗ್ರಾಹಕ ಆರ್.ಕೆ.ಮಧು, ಹಿಮಗಿರಿ ವನ್ಯಜೀವಿ ಹಿತರಕ್ಷಣಾ ಸಮಿತಿಯ ರಘುರಾಂ, ವೈನಾಡು ಪ್ರಕೃತಿ ಸಂರಕ್ಷಣಾ ಸಮಿತಿಯ ಥಾಮಸ್ ಅಬಾಲಿನ್, ತನುಜಾ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರ

See also  ಪಿರಿಯಾಪಟ್ಟಣದಲ್ಲಿ ಬಾಡೂಟ: 25 ಮಂದಿ ವಿರುದ್ಧ ಪ್ರಕರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು