News Kannada
Friday, September 30 2022

ಮೈಸೂರು

ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ರೈತರ ಸಾಲ ಮನ್ನಾ: ಸಿಎಂ - 1 min read

Photo Credit :

ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ರೈತರ ಸಾಲ ಮನ್ನಾ: ಸಿಎಂ

ಬೆಳಗಾವಿ: ರೈತರ ಬೆಳೆ ಸಾಲ ಮನ್ನಾ ಯೋಜನೆಗೆ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ 6500 ಕೋಟಿ ರೂ. ಮೀಸಲಿರಿಸಲಾಗಿದ್ದು, ಸಹಕಾರಿ ಬ್ಯಾಂಕ್‍ಗಳು ಮಾತ್ರವಲ್ಲದೆ, ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ಬೆಳೆ ಸಾಲ ಮನ್ನಾಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ವಿಧಾನ ಸಭೆಯಲ್ಲಿ ಬುಧವಾರ ಪ್ರಕಟಿಸಿದರು. 

ಬರ ಕುರಿತು ನಡೆದ ಚರ್ಚೆಯ ಮೇಲೆ ಉತ್ತರ ನೀಡಿದ ಅವರು  ರೈತರ ಬೆಳೆ ಸಾಲ ಮನ್ನಾ ಯೋಜನೆಯಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ. ಆಯವ್ಯಯದಲ್ಲಿ ಹಂಚಿಕೆ ಮಾಡಲಾಗಿರುವ 6500 ಕೋಟಿ ರೂ. ಅನುದಾನವನ್ನು ಯಾವುದೇ ಕಾರಣಕ್ಕೂ ಬೇರೆ ಉದ್ದೇಶಕ್ಕೆ ವರ್ಗಾಯಿಸುವುದಿಲ್ಲ ಎಂದು ಅವರು ಘೋಷಿಸಿದರು. 

ರಾಷ್ಟ್ರೀಕೃತ ಬ್ಯಾಂಕ್‍ಗಳು ಹಾಗೂ ಸಹಕಾರಿ ಬ್ಯಾಂಕ್‍ಗಳಲ್ಲಿನ ಬೆಳೆ ಸಾಲ ಮನ್ನಾ ಯೋಜನೆಯ ಲಾಭ ರಾಜ್ಯದ 44 ಲಕ್ಷ ರೈತ ಕುಟುಂಬಗಳಿಗೆ ದೊರೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ 1.6 ಲಕ್ಷ ರೈತರ ಮಾಹಿತಿಯನ್ನು ಪರಿಶೀಲಿಸಲಾಗಿದೆ. ಬಾಕಿ ಇರುವ ರೈತರ ಮಾಹಿತಿಯ ಪರಿಶೀಲನಾ ಪ್ರಕ್ರಿಯೆ ಪ್ರಗತಿಯಲ್ಲಿದೆ. ಸಹಕಾರಿ ಬ್ಯಾಂಕ್‍ಗಳಲ್ಲಿನ ರೈತರ ಸಾಲ ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ರೈತರ ಸಾಲಗಳನ್ನು ಮನ್ನಾ ಮಾಡುವ ತೀರ್ಮಾನವನ್ನು ಈಗಾಗಲೇ ಕೈಗೊಂಡಿರುವುದರಿಂದ ಹಾಗೂ ಸಂಬಂಧಿಸಿದ ಅನುದಾನದ ಲಭ್ಯತೆ ಇರುವುದರಿಂದ  ಈ ಸಂದರ್ಭದಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ಗಳ ಅನುಮತಿ ಅಗತ್ಯವಿಲ್ಲ. ರೈತರ ಬೆಳೆ ಸಾಲ ಮನ್ನಾ ನಿರ್ಧಾರದಿಂದ ತಮ್ಮ ಸರ್ಕಾರವು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ   ಸ್ಪಷ್ಟಪಡಿಸಿದರು.  

ಸಾಲ ಮನ್ನಾ ಯೋಜನೆಯ ಸಮಪರ್ಕ ಅನುಷ್ಠಾನ ಸಲುವಾಗಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಾಲ ಮನ್ನಾ ಘಟಕವನ್ನು ರಚಿಸಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ಎರಡು ಲಕ್ಷ ರೂ. ವರೆಗಿನ ರೈತರ ಬೆಳೆ ಸಾಲ ಮನ್ನಾಕ್ಕೆ ಕ್ರಮ ಕೈಗೊಳ್ಳಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಸಾಲ ಪಡೆದಿರುವ 21,69,645 ರೈತರು ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ ಎಂದು ಅವರು ತಿಳಿಸಿದರು.

 

ಸಾಲ ಮನ್ನಾ ಯೋಜನೆಯ ಲಾಭ ಅರ್ಹ ಫಲಾನುಭವಿಗಳಿಗೆ ದೊರೆಯಬೇಕೆಂಬ ಸದುದ್ದೇಶದಿಂದ ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ಪಹಣಿ ಪತ್ರ ದಾಖಲೆಗಳನ್ನು ಸಲ್ಲಿಸುವ ನಿಬಂಧನೆಗಳನ್ನು ಅಳವಡಿಸಲಾಗಿದೆ. ಇದು ಯೋಜನೆಯ ಸಮರ್ಪಕ ಅನುಷ್ಠಾನದ ದೃಷ್ಟಿಯಿಂದ ಹಾಗೂ ಲೋಪಗಳನ್ನು ಸರಿಪಡಿಸುವ ಉದ್ದೇಶದಿಂದ ರೂಪಿಸಲಾಗಿದೆ ಎಂದರು.  

ಸಹಕಾರಿ ಬ್ಯಾಂಕ್‍ಗಳಲ್ಲಿನ ಒಂದು ಲಕ್ಷ ರೂ.ವರೆಗಿನ ರೈತರ ಸಾಲ ಮನ್ನಾಕ್ಕೆ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಅಷ್ಟೂ ಅನುದಾನವನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡುವ ಅಗತ್ಯವಿಲ್ಲ. ಮಾಸಿಕ ಕಂತಿನ ಆಧಾರದ ಮೇಲೆ ಬಿಡುಗಡೆ ಮಾಡಬಹುದಾಗಿದ್ದು, 2018 ನವೆಂಬರ್‍ವರೆಗೆ 800 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ.ಮುಂದಿನ ಜೂನ್‍ವರೆಗೆ 9458 ಕೋಟಿ ರೂ. ಬಿಡುಗಡೆ ಮಾಡಬೇಕಿದೆ. ಈ ಪೈಕಿ 2019ರ ಮಾರ್ಚ್‍ವರೆಗೆ 2600 ಕೋಟಿ ರೂ. ಸಹಕಾರಿ ಬ್ಯಾಂಕ್‍ಗಳಿಗೆ ಬಿಡುಗಡೆ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಸದನದಲ್ಲಿ ಅಂಕಿ-ಅಂಶಗಳನ್ನು ನೀಡಿದರು. 

See also  ಹಣ ಕೇಳಲು ಬಂದ ವ್ಯಕ್ತಿ ನಿಗೂಢ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು