News Kannada
Monday, September 26 2022

ಮೈಸೂರು

ಸುಳ್ವಾಡಿ ಪ್ರಕರಣ: ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ - 1 min read

Photo Credit :

ಸುಳ್ವಾಡಿ ಪ್ರಕರಣ: ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ

ಚಾಮರಾಜನಗರ: ಹನೂರು ತಾಲೂಕಿನ ಸುಳ್ವಾಡಿಯ ಕಿಚ್ಚುಗುತ್ತು ಮಾರಮ್ಮನ ದೇವಾಲಯದ ಪ್ರಸಾದ ಸೇವನೆ ಪ್ರಕರಣದಲ್ಲಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಸುಳ್ವಾಡಿ ಗ್ರಾಮದ ನಾಗೇಶ್ ಹಾಗೂ ಶನಿವಾರ ಮೃತಪಟ್ಟ ದೊರೆಸ್ವಾಮಿ ಮೇಡು ಗ್ರಾಮದ ರಂಗನ್ ಹಾಗೂ ಕುಟುಂಬವರ್ಗಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಆರ್. ನರೇಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಹಾಗೂ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸಾಂತ್ವನ ಹೇಳಿದರು.

ಸುಳ್ವಾಡಿ ಗ್ರಾಮಕ್ಕೆ ತೆರಳಿ ನಾಗೇಶ್ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಸಾಂತ್ವನ ಹೇಳಿ ವೈಯಕ್ತಿಕ ಪರಿಹಾರ ವಿತರಿಸಿದರು. ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮನ ದೇವಾಲಯದ ಪ್ರಸಾದ ಸೇವನೆ ಪ್ರಕರಣ ಘೋರ ದುರಂತ. ಈಗಾಗಲೇ 17 ಮಂದಿ ಸಾವನಪ್ಪಿದ್ದಾರೆ. ಪ್ರಕರಣದಲ್ಲಿ ಗಂಭೀರವಾಗಿ ಅಸ್ವಸ್ಥಗೊಂಡಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 35 ಜನ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾಡಳಿತ ಪ್ರತಿಯೊಂದು ಆಸ್ಪತ್ರೆಗೂ ನೋಡೆಲ್ ಅಧಿಕಾರಿಗಳನ್ನು ನೇಮಿಸಿ ದಾಖಲಾಗಿರುವವರ ಆರೋಗ್ಯ ಹಾಗೂ ಇನ್ನಿತರೆ ಎಲ್ಲಾ ಅಗತ್ಯ ನೆರವಿಗಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು.

ಮೃತಪಟ್ಟ ಸರ್ಕಾರದಿಂದ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಅಸ್ಪತ್ರೆಯಲ್ಲಿ ದಾಖಲಾಗಿರುವವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲರಿಗೂ ಅವಶ್ಯಕ ವೈದ್ಯಕೀಯ ಚಿಕಿತ್ಸೆ ನೀಡುವ ಕಾರ್ಯ ನಡೆಯುತ್ತಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.

ಪ್ರಕರಣದಲ್ಲಿ ಮೃತಪಟ್ಟವರ ಹಾಗೂ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಸಂತ್ರಸ್ತ ಕುಟುಂಬಗಳಿಗೆ ದಿನನಿತ್ಯ ಬಳಕೆಯ ಪಡಿತರ ಪದಾರ್ಥಗಳನ್ನು ವಿತರಿಸಲಾಗುತ್ತಿದೆ. ಕೆಲವರು ಚೇತರಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಳ್ಳಬಹುದು. ಆದರೂ ನಿರಂತರವಾಗಿ ಅವರ ಕುಟುಂಬಕ್ಕೆ ನೀಡಬೇಕಿರುವ ಎಲ್ಲಾ ಸಹಾಯವನ್ನು ಒದಗಿಸಲಿದ್ದೇವೆ. ಮಾನವೀಯ ನೆಲೆಯಲ್ಲಿ ಸ್ಪಂದಿಸಲೆಬೇಕಿದೆ ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು.

ಶಾಸಕರಾದ ಆರ್. ನರೇಂದ್ರ ಅವರು ಮಾತನಾಡಿ ಪರಿಹಾರ ನೀಡುವುದಷ್ಟೆ ನಮ್ಮ ಕೆಲಸವಲ್ಲ. ಸಂತ್ರಸ್ತರ ಬದುಕಿಗೆ ಶಾಶ್ವತವಾಗಿ ನೆರವು ನೀಡಿ ಅವರು ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಅವಕಾಶ ಕಲ್ಪಿಸಬೇಕಾಗಿದೆ ಎಂದರು.

See also  ಕೊಂಡೋತ್ಸವದಲ್ಲಿ ಭಾಗವಹಿಸಿ ಹರಕೆ ತೀರಿಸಿದ ಜನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು