ಮೈಸೂರು: ಬಂಡೀಪುರ ರಾಷ್ಟ್ರೀಯ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಅಕಾಲಿಕ ಮಳೆ ಬಿದ್ದಿದ್ದು, ಈ ಮಳೆಯಿಂದ ಬೇಸಗೆಯಲ್ಲಿ ಸಂಭವಿಸುವ ಕಾಡ್ಗಿಚ್ಚನ್ನು ತಡೆಯಲು ಸಹಕಾರಿಯಾಗಿದೆ.
ಶನಿವಾರ ಮಧ್ಯಾಹ್ನ ಬಿರು ಬಿಸಿಲಿನ ನಡುವೆಯೂ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಸಫಾರಿ ಸ್ಥಳವಾದ ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿ ಅಕಾಲಿಕ ಮಳೆ ಸುರಿದಿದೆ.
ಈ ಮಳೆಯಿಂದ ಇನ್ನು ಪ್ರಾಣಿ ಪಕ್ಷಿಗಳಿಗೂ ನೀರಿನ ಸಮಸ್ಯೆ ಕಡಿಮೆ ಮಾಡಲು ಸಹಕಾರಿಯಾಗುತ್ತದೆ ಎನ್ನಲಾಗಿದೆ.