News Kannada
Monday, December 05 2022

ಮೈಸೂರು

ಕೀಲಾರದಲ್ಲಿ ಸುಮಲತಾಗೆ ಕೈ-ಕಮಲ ನಾಯಕರ ಸಾಥ್

Photo Credit :

ಕೀಲಾರದಲ್ಲಿ ಸುಮಲತಾಗೆ ಕೈ-ಕಮಲ ನಾಯಕರ ಸಾಥ್

ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ತಾಲೂಕಿನ ಕೀಲಾರ ಗ್ರಾಮದಲ್ಲಿ ತಮಗೆ ಸಿಕ್ಕಿರುವ ಕಹಳೆಯನ್ನು ಊದಿ ಪ್ರಚಾರ ನಡೆಸಿದರೆ ಅವರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬಾವುಟಗಳೊಂದಿಗೆ ಆಗಮಿಸಿ ಸಾಥ್ ನೀಡಿದರು.

ರೋಡ್ ಶೋ ವೇಳೆ ಸುಮಲತಾ ಅವರಿಗೆ ಗ್ರಾಮಸ್ಥರು ಅದ್ಧೂರಿ ಸ್ವಾಗತ ಕೋರಿದರು. ಬಿಜೆಪಿ ಜಿಲ್ಲೆಯಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಸುಮಲತಾರನ್ನು ಬೆಂಬಲಿಸುತ್ತಿದೆ. ಅದೇ ರೀತಿಯಲ್ಲಿ ಕಾಂಗ್ರೆಸ್‍ಗೆ ಲೋಕಸಭಾ ಅಭ್ಯರ್ಥಿಗೆ ಸ್ಪರ್ಧಿಸಲು ಅವಕಾಶ ಕೊಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಒಂದಾಗಿ ಹೈಕಮಾಂಡ್ ಮೇಲೆ ಸೇಡು ತೀರಿಸಿಕೊಳ್ಳಲು ಪಕ್ಷೇತರ ಅಭ್ಯರ್ಥಿಯನ್ನು ಬೆಂಬಲಿಸಿದೆ.

ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಕಹಳೆ ಊದುತ್ತಿರುವ ವ್ಯಕ್ತಿಯ ಚಿಹ್ನೆ ದೊರಕಿದೆ. ಈ ಹಿನ್ನೆಲೆ ಸುಮಲತಾ ಪ್ರಚಾರದ ವೇಳೆ ಕಹಳೆ ಹಿಡಿದು ಊದಿದರು. ಕಾರ್ಯಕರ್ತರು ಹರ್ಷೋದ್ಘಾರ ಹಾಕಿ ಜೈಕಾರ ಕೂಗಿದರು.
ನಂತರ ರೋಡ್ ಶೋನಲ್ಲಿ ಸುಮಲತಾ ಮತಯಾಚಿಸಿ ಮಾತನಾಡಿ ಕುರ್ಚಿಗೆ ಗೌರವ ಕೊಡದೆ, ಮಹಿಳೆ ಎನ್ನುವುದನ್ನು ನೋಡದೆ ಮುಖ್ಯಮಂತ್ರಿ, ಸಚಿವರು ಮಾತನಾಡ್ತಿದ್ದಾರೆ. ನನ್ನ ಮುಖದಲ್ಲಿ ನೋವಿಲ್ಲ ಅಂತಾರೆ, ನಾನು ನೋವು ಮರೆಯಲು ಜನರ ಮುಂದೆ ಬಂದಿದ್ದೇನೆ. ನನಗೆ ಅನುಕಂಪ ಬೇಡ, ಜನರ ಪ್ರೀತಿ ಬೇಕು, ಆ ನೋವನ್ನು ಕಳೆದುಕೊಳ್ಳಲು ನಾನು ಜನರ ಮುಂದೆ ನಿಂತಿದ್ದೇನೆ. ನಾನು ಯಾರ ಮುಂದೇನು ಕಣ್ಣೀರು ಹಾಕಲ್ಲ. ನನಗೆ ನೋವಾದಾಗ ನನ್ನ ಜೊತೆಗಿದ್ದವರು ಮಂಡ್ಯ ಜನರು ಎಂಬುದನ್ನು ನಾನು ಮರೆಯುವುದಿಲ್ಲ ಎಂದು ಹೇಳಿದರು.

See also  ಹದಗೆಟ್ಟ ಕಂಚಗಾರಕೊಪ್ಪಲು ರಸ್ತೆಗಿಲ್ಲ ಅಭಿವೃದ್ಧಿ ಭಾಗ್ಯ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು