News Kannada
Monday, December 05 2022

ಮೈಸೂರು

ಶ್ರೀಲಂಕಾದ ಬಾಂಬ್ ಸ್ಫೋಟದಲ್ಲಿ ಮಡಿದವರಿಗೆ ಮೈಸೂರಲ್ಲಿ ಶ್ರದ್ಧಾಂಜಲಿ

Photo Credit :

ಶ್ರೀಲಂಕಾದ ಬಾಂಬ್ ಸ್ಫೋಟದಲ್ಲಿ ಮಡಿದವರಿಗೆ ಮೈಸೂರಲ್ಲಿ ಶ್ರದ್ಧಾಂಜಲಿ

ಮೈಸೂರು: ಶ್ರೀಲಂಕಾದ ಕೊಲೊಂಬೊದಲ್ಲಿ ನಡೆದ ಸರಣಿ ಬಾಂಬ್ ಸ್ಪೋಟ ಸಂಭವಿಸಿದ ಬೆನ್ನಲ್ಲೇ ಇತಿಹಾಸ ಪ್ರಸಿದ್ಧ ಸಂತಫಿಲೋಮಿನಾ ಚರ್ಚ್ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೆ ಸಂಶಯಾಸ್ಪದವಾಗಿ ಓಡಾಡುವ ವ್ಯಕ್ತಿಗಳ ಮೇಲೆಯೂ ನಿಗಾಯಿಡಲಾಗಿದೆ.

ಇನ್ನೊಂದೆಡೆ ಬಾಂಬ್ ಸ್ಪೋಟದಲ್ಲಿ ಮೃತಪಟ್ಟವರಿಗೆ ಸಂತಫಿಲೋಮಿನಾ ಚರ್ಚ್ ನಲ್ಲಿ ಬುಧವಾರ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ವೇಳೆ ಸೆಂಟ್ ಫಿಲೋಮಿನಾಸ್ ಚರ್ಚ್ ನ ಬಿಷಪ್ ಕೆ.ಎ.ವಿಲಿಯಂ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಶ್ರೀಲಂಕಾದಲ್ಲಿ ನಡೆದ ಘಟನೆ ಖಂಡನೀಯ. ಯಾರು ಹೀನ ಕೃತ್ಯ ನಡೆಸಿದ್ದರೋ ಅವರನ್ನು ದೇವರು ಕ್ಷಮಿಸಲಿ ಮತ್ತು ಅವರಿಗೆ ಮಾನವೀಯತೆಯುಳ್ಳ ಮನಸ್ಸು ಬರುವಂತಾಗಲಿ. ಇನ್ನೆಂದೂ ಇಂತಹ ಘೋರ ಕೃತ್ಯವನ್ನು ಅವರು ಎಸಗದಂತೆ ಅವರ ಮನಸ್ಸು ದೇವರು ಪರಿವರ್ತನೆಗೊಳಿಸಲಿ ಎಂದು ಆಶಿಸಿದರು.

ಘಟನೆಯಲ್ಲಿ ಮೃತಪಟ್ಟವರು ಕುಟುಂಬಕ್ಕೆ ದೇವರು ದುಃಖವನ್ನು ಭರಿಸುವ ಶಕ್ತಿ ನೀಡಲಿ. 2013ನೇ ಈಸ್ಟರ್ ಸಂಡೇಯಲ್ಲೂ ಇದೇ ರೀತಿ ಘಟನೆ ನಡೆದಿತ್ತು. ಈಸ್ಟರ್ ಸಂಡೇ ಕ್ರೈಸ್ತ ಬಂಧುಗಳಿಗೆ ಶುಭ ದಿನ, ಇಂತಹ ದಿನದಲ್ಲಿ ಈ ರೀತಿಯ ಕೃತ್ಯ ನಡೆದಿರುವುದು ಬೇಸರದ ಸಂಗತಿಯಾಗಿದೆ ಎಂದು ಹೇಳಿದರು. ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಬಿಷಪ್ ಹಾಗೂ ಮೈಸೂರು ಪ್ರಾಂತ್ಯದ ಎಲ್ಲ ಕ್ರೈಸ್ತ ಧರ್ಮಗುರುಗಳು ಪಾಲ್ಗೊಂಡಿದ್ದರು.

See also  ಪಾಕಿಸ್ತಾನದ ಪರ ಘೋಷಣೆ ಕೂಗಿದ ಕಾರ್ಯಕರ್ತರ ವಿರುದ್ಧ ದೂರು ನೀಡಿದ ರಾಷ್ಟ್ರೀಯ ಹಿಂದೂ ಸಮಿತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು