News Kannada
Tuesday, September 27 2022

ಮೈಸೂರು

ಮೈಸೂರಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ - 1 min read

Photo Credit :

ಮೈಸೂರಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ

ಮೈಸೂರು: ಬೇಸಿಗೆ ಕಾಲದ ಈ ಸಮಯದಲ್ಲಿ ಜಿಲ್ಲೆಯಲ್ಲಿ  ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆಯಿದ್ದು, ಇದನ್ನು ತಡೆಗಟ್ಟುವ ಸಲುವಾಗಿ ಇಲಾಖೆಗಳು ಪರಸ್ಪರ ಸಹಕಾರ ಹಾಗೂ ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಜಿ. ಕಲ್ಪನಾ ಅವರು ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, ಬರ ಪರಿಹಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ಅವುಗಳನ್ನು ಪರಿಹರಿಸಲು ಬೇಕಿರುವ ಅನುಮೋದನೆ ಪಡೆದುಕೊಂಡು ಶೀಘ್ರವಾಗಿ ಕೈಗೊಳ್ಳಬೇಕು, ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗದಂತೆ ನೋಡಿಕೊಳ್ಳಬೇಕು, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ನರೇಗಾ ಯೋಜನೆಯಡಿ ನೀಡಲಾಗುವ ಉದ್ಯೋಗಗಳ ಬಗ್ಗೆ ಸತತವಾಗಿ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಮೈಸೂರು ಜಿಲ್ಲೆಯಲ್ಲಿ ವಾಡಿಕೆ ಮಳೆಯ ವಿವರವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಪಡೆದರು. ಬಳಿಕ ಕಳೆದ ಹಿಂದಿನ ಮೂರು ಸಾಲುಗಳಲ್ಲಿ ಏಪ್ರಿಲ್ ತಿಂಗಳವರೆಗೆ ಬಿದ್ದಿರುವ ಮಳೆಗೆ ಹೋಲಿಸಿ ಜಿಲ್ಲೆಯಲ್ಲಿ ಉಂಟಾಗಬಹುದಾದ ತೊಂದರೆಗಳಿಗೆ ಸರಿಯಾದ ರೀತಿಯಲ್ಲಿ ಸ್ಪಂದಿಸಲು ಸಜ್ಜಾಗುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಹಿನಕಲ್‍ಗ್ರಾಮ, ಹೊಂಗಳ್ಳಿ, ಮೇಗಳಾಪುರ, ವಿಜಯನಗರ 3 ನೇ ಹಂತ, ವಿಜಯನಗರ 4ನೇ ಹಂತ, ಹೂಟಗಳ್ಳಿ, ಕೆ.ಹೆಚ್.ಬಿ ಕಾಲೋನಿ, ಚಾಮುಂಡಿ ಬೆಟ್ಟ, ಏಕಲವ್ಯ ನಗರಕ್ಕೆ ಹೊಂದಿಕೊಂಡಂತೆ ಇರುವ ರೈಲ್ವೆ ಬಡಾವಣೆಗಳಲ್ಲಿ ಉಂಟಾಗುತ್ತಿರುವ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಯಿತು.

ಹಿನ್‍ಕಲ್ ಗ್ರಾಮಕ್ಕೆ ಸಮಪರ್ಕವಾಗಿ ಕುಡಿಯುವ ನೀರು ಸರಬರಾಜಾಗುತ್ತಿಲ್ಲ. ಈ ಭಾಗದಲ್ಲಿ ಗ್ರಾಮಪಂಚಾಯಿತಿ ಹಾಗೂ ಮೈಸೂರು ಮಹಾನಗರಪಾಲಿಕೆ ಅವರು ಸಮನ್ವಯವಾಗಿ ಕಾರ್ಯನಿರ್ವಹಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

See also  ದೇಶದ ಅಕ್ರಮ ವಲಸಿಗರನ್ನು ಹೊರಹಾಕಿ: ಆರೆಸ್ಸೆಸ್ ಅಭಿಮತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು