News Kannada
Wednesday, November 30 2022

ಮೈಸೂರು

ನಿಷೇಧಾಜ್ಞೆ ನಡುವೆಯೂ ಕೆಲವೆಡೆ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ - 1 min read

Photo Credit :

ನಿಷೇಧಾಜ್ಞೆ ನಡುವೆಯೂ ಕೆಲವೆಡೆ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ

ಮೈಸೂರು: ಮೈಸೂರಿನಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನಲೆಯಲ್ಲಿ  ಈಗಾಗಲೇ ಮೈಸೂರಿನ ಪುರಭವನದ ಎದುರು ಮೂರು ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಜತೆಗೆ ಈ ವ್ಯಾಪ್ತಿಯ ರಸ್ತೆಬದಿ ವ್ಯಾಪಾರಸ್ಥರನ್ನು ಸುತ್ತಲಿನ ಪರಿಸರದಲ್ಲಿ ವ್ಯಾಪಾರ ಸ್ಥಗಿತಗೊಳಿಸುವಂತೆ ತಿಳಿಸಲಾಗಿದೆ.

ತಳ್ಳುಗಾಡಿಯಲ್ಲಿ ಕೂಡ ಯಾವುದೇ ವ್ಯಾಪಾರಕ್ಕೆ ಅವಕಾಶವಿಲ್ಲ. ಯಾವುದೇ ವಾಹನಗಳ ನಿಲುಗಡೆಗೆ ಅವಕಾಶ ಇಲ್ಲ. ಆವರಣಕ್ಕೆ ಪ್ರವೇಶ ಮಾಡುತ್ತಿದ್ದ ಮೂರು ಗೇಟ್‍ಗಳಿಗೂ ಕಾವಲು ಹಾಕಲಾಗಿದ್ದು, ಕೆಎಸ್‍ಆರ್ಪಿ, ಸಿಎಆರ್ ತುಕಡಿ, ಮೌಂಟೆಡ್, ಕಮಾಂಡೋ ಪಡೆಗಳನ್ನು ಕರೆಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ತಯಾರಿ ಮಾಡಿಕೊಳ್ಳುವಂತೆ ನಗರ ಪೊಲೀಸ್ ಆಯುಕ್ತರಾದ ಕೆ.ಟಿ.ಬಾಲಕೃಷ್ಣ ಅವರು ಸೂಚನೆ ನೀಡಿದ್ದಾರೆ.

ಯಾವುದೇ ರೀತಿಯ ಬಂದ್, ರಸ್ತೆ ತಡೆ, ಧರಣಿ, ಬೈಕ್ ರ್ಯಾಲಿ ಮೆರವಣಿಗೆ, ಸಮಾರಂಭ, ವಿಜಯೋತ್ಸವ, ಧರಣಿ, ಪ್ರತಿಭಟನಾ ಮೆರವಣಿಗೆ, ಸಾರ್ವಜನಿಕರು ಗುಂಪು ಕಟ್ಟಿಕೊಳ್ಳುವುದು, ಇತರೆ ವಿದ್ವಂಸಕ ಕೃತ್ಯಗಳಲ್ಲಿ ತೊಡಗದಂತೆ, ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡದಂತೆ, ಯಾವುದೇ ಪ್ರದೇಶದಲ್ಲಿ ಪಟಾಕಿ, ಸಿಡಿಮದ್ದು, ಇತರೆ ಸೋಟಕ ವಸ್ತುಗಳನ್ನು ಉಪಯೋಗಿಸದಂತೆ  ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದು, ಜಿಲ್ಲೆಯಾದ್ಯಂತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸದ್ಯ ಇಲ್ಲಿನ ಜನ ಜೀವನ ಎಂದಿನಂತೆ ಸಾಗುತ್ತಿದೆ.

ರಾಜ್ಯದ ವಿವಿಧೆಡೆ ಪೌರತ್ವ ಕಾಯಿದೆ ವಿರೋಧಿಸಿ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವುದರಿಂದ ಆತಂಕದ ಪರಿಸ್ಥಿತಿ ಎದುರಾಗಿದೆ. ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಮೂರು ದಿನಗಳ ಕಾಲ 144 ಸೆಕ್ಷನ್ ಜಾರಿಮಾಡಿದ್ದರೂ ಅದಕ್ಕೆ ಸೊಪ್ಪು ಹಾಕದೆ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆಗಿಳಿದ ಕಾರಣ ಪೊಲೀಸರು ಹಲವರನ್ನು ಬಂಧಿಸಿದ್ದಾರೆ.

 

ಬೆಂಗಳೂರಿನ ಪುರಭವನದ ಬಳಿ  ಪ್ರತಿಭಟನೆ ಮಾಡುತ್ತಿದ್ದವರನ್ನು ಬಂಧಿಸಿ ಸಿಕ್ಕ ಸಿಕ್ಕ ವಾಹನಗಳಲ್ಲಿ ಕರೆದೊಯ್ಯಲಾಗಿದೆ. ಜತೆಗೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘುಲಾಠಿ ಚಾರ್ಜ್ ಮಾಡಿರುವ ಘಟನೆಯೂ ನಡೆದಿದೆ. ಸಂಘಟನೆಗಳ ಮುಖಂಡರು ರಸ್ತೆ ಮೇಲೆ ಮಲಗಿ ಪ್ರತಿಭಟಿಸಿದರು. ಅವರನ್ನು ಎಳೆದು ವಾಹನಕ್ಕೆ ತುಂಬಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಹೋರಾಟ ನಡೆಯುತಿದ್ದು, ರಾಜ್ಯದಲ್ಲಿಯೂ ಹಲವೆಡೆ ಪ್ರತಿಭಟನೆಗಳು ನಡೆದಿವೆ. ಇದರ ತೀವ್ರತೆಯನ್ನು ಅರಿತ ಸರ್ಕಾರ 144 ಸೆಕ್ಷನ್ ಜಾರಿ ಮಾಡಿತ್ತು. ಅಲ್ಲದೆ ಪ್ರತಿಭಟನೆ ನಡೆಸದಂತೆ ಸೂಚನೆ ನೀಡಿತ್ತು ಆದರೆ ಕಲಬುರಗಿ, ಬಳ್ಳಾರಿ ಹಾಗೂ ಬೆಂಗಳೂರಲ್ಲಿ ಏಕಾಏಕಿ ಪ್ರತಿಭಟನೆಗಿಳಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆಯುವಲ್ಲಿ ಹರ ಸಾಹಸ ಪಡುವಂತಾಯಿತು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದಗಳು ನಡೆದವು.  ಇನ್ನು ಬಿಎಂಟಿಸಿ ಬಸ್‍ಗೆ ಅಡ್ಡಲಾಗಿ ಮಲಗಿದ ಪ್ರತಿಭಟನಾಕಾರರನ್ನು ಚದುರಿಸಲು ಲಘಲಾಠಿ ಪ್ರಹಾರವನ್ನು ಪೊಲೀಸರು ಮಾಡುವಂತಾಗಿದೆ ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ರಾಜ್ಯದ ಹುಬ್ಬಳ್ಳಿ-ಧಾರವಾಡದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಜತೆಗೆ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿತ್ತು. ಅನ್ನು ಲೆಕ್ಕಿಸದೆ ಪ್ರತಿಭಟನೆ ತೀವ್ರಗೊಂಡಿದೆ.  ಸದ್ಯ ಕಲಬುರಗಿ, ಹುಬ್ಬಳ್ಳಿ ಧಾರವಾಡ, ಬಳ್ಳಾರಿ, ಬೆಂಗಳೂರಲ್ಲಿ ತೀವ್ರಗೊಂಡಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.

See also  15 ಜನರ ಮೇಲೆ ಹುಚ್ಚು ನಾಯಿ ದಾಳಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು