News Kannada
Friday, December 09 2022

ಮೈಸೂರು

ಪಡಿತರ ಅಕ್ಕಿ ಅಕ್ರಮ ಸಾಗಾಟ: ಲಾರಿ ಸಹಿತ ಓರ್ವನ ಬಂಧನ

Photo Credit :

ಪಡಿತರ ಅಕ್ಕಿ ಅಕ್ರಮ ಸಾಗಾಟ: ಲಾರಿ ಸಹಿತ ಓರ್ವನ ಬಂಧನ

ಮೈಸೂರು: ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸೇರಿದ ಪಡಿತರ ಅಕ್ಕಿಯನ್ನು  ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯ ಸಹಿತ ಓರ್ವನನ್ನು ಬಂಧಿಸುವಲ್ಲಿ  ನಂಜನಗೂಡು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

ಇಂದು ಬೆಳಗಿನ ಜಾವ ಕೇರಳ ಮೂಲದ ಲಾರಿಯಲ್ಲಿ ಬಡವರಿಗೆ ಸೇರಬೇಕಾದ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ಖದೀಮರು ನಂಜನಗೂಡಿನ ಹೆಜ್ಜಿಗೆ ಸೇತುವೆ ಬಳಿ ಅಕ್ಕಿ ಮೂಟೆ ಸಾಗಿಸುತ್ತಿದ್ದ ಲಾರಿಯನ್ನು ಸೀಜ್ ಮಾಡಲಾಗಿದೆ.

ನಂಜನಗೂಡು ಮಾರ್ಗವಾಗಿ  ಕೇರಳಕ್ಕೆ ಸಾಗಣೆಯಾಗುತ್ತಿದ್ದ ಇದು ಅಕ್ರಮ ಪಡಿತರ ಅಕ್ಕಿ ಎಂದು ಹೇಳಲಾಗಿದೆ. ನಂಜನಗೂಡಿನ ಆಹಾರ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು  250 ಅಕ್ಕಿ ಮೂಟೆ ವಶಪಡಿಸಿಕೊಳ್ಳಲಾಗಿದೆ. ಇದನ್ನು  ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ರೈಸ್ ಮಿಲ್ ನಿಂದ  ಸಾಗಾಟ ಮಾಡಲಾಗುತಿದ್ದು, ಈ ಸಂಬಂಧ  ಕೇರಳದ ನಿಜಾಮುದ್ದೀನ್  ಎಂಬಾತನನ್ನು  ಬಂದಿಸಲಾಗಿದೆ.  ದಾಳಿಯ ವೇಳೆ ಲಾರಿಯಲ್ಲಿದ್ದ  ಇನ್ನಿಬ್ಬರು  ಪರಾರಿಯಾಗಿದ್ದಾರೆ.

ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

See also  ಕೊರೋನಾ ಹತ್ತಿಕ್ಕುವುದು ಮೈಸೂರು ನೂತನ ಜಿಲ್ಲಾಧಿಕಾರಿಯ ಆದ್ಯತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು