News Kannada
Sunday, September 25 2022

ಮೈಸೂರು

ಚಾಮುಂಡಿಬೆಟ್ಟದಲ್ಲಿ ಲಕ್ಷ ಸಸಿ ನೆಡುವ ಕಾರ್ಯಕ್ರಮ - 1 min read

Photo Credit :

ಚಾಮುಂಡಿಬೆಟ್ಟದಲ್ಲಿ ಲಕ್ಷ ಸಸಿ ನೆಡುವ ಕಾರ್ಯಕ್ರಮ

ಮೈಸೂರು: ಚಾಮುಂಡಿಬೆಟ್ಟದಲ್ಲಿ ಹಣ್ಣಿನ ಗಿಡ ಸೇರಿದಂತೆ ಒಂದು ಲಕ್ಷ ಸಸಿ ನೆಡುವ ತೀರ್ಮಾನ ಕೈಗೊಳ್ಳಲಾಗಿದೆ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಉಪಸ್ಥಿತಿಯಲ್ಲಿ ನಡೆದ ಪೂರ್ವಭಾವಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯಲ್ಲಿ  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಮೈಸೂರು ಹಸಿರೀಕರಣ ಆಗಬೇಕೆಂಬ ನಿಟ್ಟಿನಲ್ಲಿ ಚಾಮುಂಡಿ ಬೆಟ್ಟದಲ್ಲಿ ಲಕ್ಷಗಿಡ ನೆಡಲು ಅರಣ್ಯ ಇಲಾಖೆ ಸಹಯೋಗದೊಂದಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಇತರ ಇಲಾಖೆ ಸಹಕಾರ ಪಡೆದುಕೊಂಡು ಕಾರ್ಯ ನಿರ್ವಹಣೆ ಮಾಡಲಾಗುವುದಾಗಿ ಹೇಳಿದರು.

ನರೇಗಾ ಜಾಬ್ ಕಾರ್ಡ್ ಹೊಂದಿರುವವರನ್ನು ಚಾಮುಂಡಿಬೆಟ್ಟದಲ್ಲಿ ಗಿಡ ನೆಡಲು ಬಳಸಿಕೊಂಡು ಗುಂಡಿಗಳನ್ನು ತೆಗೆಸುವಂತಹ ಕಾರ್ಯದಲ್ಲಿ ತೊಡಗಿಸಿಕೊಳ್ಳಿ. ಈ ಮೂಲಕ ಉದ್ಯೋಗದ ಜೊತೆಗೆ ಹಸಿರೀಕರಣಕ್ಕೂ ಅನುಕೂಲವಾಗಲಿದೆ ಎಂದು ಸಲಹೆ ನೀಡಿದರು.

ಅರಣ್ಯ ಸಚಿವ ಆನಂದ್ ಸಿಂಗ್ ಮಾತನಾಡಿ, ಚಾಮುಂಡಿಬೆಟ್ಟದಲ್ಲಿನ 310 ಹೆಕ್ಟೇರ್ ಪ್ರದೇಶದಲ್ಲಿರುವ ನೀಲಗಿರಿ ಗಿಡಗಳನ್ನು ಸಂಪೂರ್ಣ ಕಡಿದು, ಆ ಜಾಗದಲ್ಲಿ ಹಣ್ಣಿನ ಗಿಡಗಳು ಹಾಗೂ ಇನ್ನಿತರ ಜಾತಿಯ ಸಸಿಗಳನ್ನು ನೆಡುವ ತೀರ್ಮಾನಕ್ಕೆ ಬರಲಾಗಿದೆ.    ಸದ್ಯಕ್ಕೆ ಈ ಪ್ರದೇಶದಲ್ಲಿ ಸಾಂಕೇತಿಕವಾಗಿ ಗಿಡಗಳನ್ನು ನೆಟ್ಟು, ರೂಪುರೇμÉಗಳನ್ನು ಸಿದ್ಧಪಡಿಸಿಕೊಂಡು ನರೇಗಾ ಯೋಜನೆಯಡಿ ಗುಂಡಿಗಳನ್ನು ತೆಗೆಯುವುದು ಸೇರಿದಂತೆ ನಿರ್ವಹಣೆ ಮಾಡುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಗಿಡಗಳನ್ನು ನೆಟ್ಟ ಮೇಲೆ ಅವುಗಳ ನಿರ್ವಹಣೆಗೆ ಸಮಸ್ಯೆಯಾಗಬಾರದು. ನೀರಿನ ವ್ಯವಸ್ಥೆಯನ್ನು ಹೇಗೆ ಮಾಡಿಕೊಳ್ಳಲಾಗುತ್ತದೆ ಎಂಬುದೇ ಬಹಳ ಮುಖ್ಯ. ಇದಾಗದಿದ್ದರೆ ನೀವು ಮಾಡಿದ ಶ್ರಮವೆಲ್ಲವೂ ವ್ಯರ್ಥವಾಗುತ್ತದೆ ಎಂದು ಹೇಳಿದರು.

ಪ್ರಸಕ್ತ ವರ್ಷದಲ್ಲಿ ಹೆಚ್ಚಿನ ಸಿದ್ಧತೆ ಮಾಡಿಕೊಳ್ಳದಿದ್ದರಿಂದ ಸಮತಟ್ಟು ಪ್ರದೇಶ ಹಾಗೂ ಅವಕಾಶ ಇರುವ ಜಾಗದಲ್ಲಿ ಗಿಡ ನೆಡಬೇಕು. ಜೊತೆಗೆ ನೆಟ್ಟ ಗಿಡಗಳನ್ನು ಚೆನ್ನಾಗಿ ಬೆಳೆಸಲು ಬೇಕಾದ ನೀರಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಸೌಲಭ್ಯಗಳತ್ತ ಗಮನಹರಿಸಬೇಕಾಗುತ್ತದೆ. ಇನ್ನು ಮುಂದಿನ ವರ್ಷದಲ್ಲಿ ಸಂಪೂರ್ಣ ಯೋಜನೆಗಳೊಂದಿಗೆ ಹಾಗೂ ಸಿದ್ಧತೆಗಳೊಂದಿಗೆ ಗಿಡವನ್ನು ನೆಡಬೇಕಿದೆ ಎಂಬ ಅಭಿಪ್ರಾಯಕ್ಕೆ ಸಭೆಯಲ್ಲಿ ಬರಲಾಯಿತು.

ಈಗ ನೀರಿನ ಬಳಕೆ ಆದ ಮೇಲೆ ಅದನ್ನು ಮರುಬಳಕೆ ಮಾಡುವುದು ಹಾಗೂ ಎಲ್ಲ ಗಿಡಗಳಿಗೆ ಆ ನೀರನ್ನು ಬಳಕೆ ಮಾಡುವ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿಯನ್ನು ಇದೇ ಸಂದರ್ಭದಲ್ಲಿ ಕೇಳಿ ಪಡೆಯಲಾಯಿತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಧಿಕಾರಿಗಳು, ಮೈಸೂರಿನ ಹೊರವಲಯದಲ್ಲಿ ಇನ್ಫೋಸಿಸ್ ಪ್ರತಿಷ್ಠಾನ ಕೈಗೊಂಡ ತ್ಯಾಜ್ಯ ನೀರು ಪುನರ್ ಬಳಕೆ ತಂತ್ರಜ್ಞಾನದ ಮಾದರಿಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿರ್ವಹಣೆ ಮಾಡಬಹುದಾಗಿದೆ. ಈ ಮೂಲಕ ನೀರಿನ ವ್ಯವಸ್ಥೆ ಮಾಡಿದರೆ ಇಡೀ ಚಾಮುಂಡಿ ಬೆಟ್ಟದಲ್ಲಿ ನೆಡಲಾಗುವ ಗಿಡಗಳಿಗೆ ಯಾವುದೇ ಕಾರಣಕ್ಕೂ ಬೇಸಿಗೆಯಲ್ಲೂ ಸಹ ನೀರಿನ ಕೊರತೆಯಾಗದು ಎಂದು ತಿಳಿಸಿದರು.

See also  ಎರಡು ವರ್ಷದ ಮಗುವಿನ ಮೇಲೆ ಹಂದಿ ದಾಳಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು