News Kannada
Tuesday, October 04 2022

ಮೈಸೂರು

ಯೋಗ ಆಚರಣೆ: ಮೈಸೂರು ಅರಮನೆ ಅವರಣದಲ್ಲಿ ಫೇಸ್ಬುಕ್ ಲೈವ್ ಪ್ರದರ್ಶನ - 1 min read

Photo Credit :

ಯೋಗ ಆಚರಣೆ: ಮೈಸೂರು ಅರಮನೆ ಅವರಣದಲ್ಲಿ ಫೇಸ್ಬುಕ್ ಲೈವ್ ಪ್ರದರ್ಶನ

ಮೈಸೂರು: ಕೋವಿಡ್-೧೯ ಹಿನ್ನಲೆಯಲ್ಲಿ ಮನೆ ಮನೆಗಳಲ್ಲೇ ಯೋಗಾಸನ ಮಾಡುವ ಮೂಲಕ ಮೈಸೂರಿನಲ್ಲಿ 6ನೇ ಅಂತಾರಾಷ್ಟ್ರೀಯ ಯೋಗದಿನ ಆಚರಿಸಲಾಯಿತು.

ಮನೆಗಳಲ್ಲಿ ಯೋಗಾಭ್ಯಾಸ ಮಾಡುವವರ ಅನುಕೂಲಕ್ಕಾಗಿ ಜಿಲ್ಲಾಡಳಿತ ಹಾಗೂ ಯೋಗ ಸಂಸ್ಥೆಗಳ ಸಹಯೋಗದಲ್ಲಿ ಅರಮನೆ ಆವರಣದಲ್ಲಿ ಭಾನುವಾರ ಯೋಗಾಸನ ಪ್ರದರ್ಶನ ಆಯೋಜಿಸಿ ಫೇಸ್ಬುಕ್ ನಲ್ಲಿ ನೇರ ಪ್ರಸಾರ ಮಾಡಲಾಯಿತು.

ಈ ವೇಳೆಯಲ್ಲಿ ಜಿಎಸ್‌ಎಸ್ ಯೋಗ ಫೌಂಡೇಶನ್‌ನ ಶ್ರೀಹರಿ ಅವರು ಮಾತನಾಡಿ, ಕಳೆದ ಐದು ವರ್ಷಗಳಿಂದ ಅರಮನೆಯ ಆವರಣದಲ್ಲಿ ಸಾವಿರಾರು ಯೋಗ ಪಟುಗಳೊಂದಿಗೆ ಯೋಗ ದಿನಾಚರಣೆ ಆಚರಿಸುತ್ತಾ ಬಂದಿದ್ದೇವೆ. ಆದರೆ ಈ ಬಾರಿ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಮನೆ ಮನೆಗಳಲ್ಲೇ ಆಚರಿಸುವಂತೆ ಮನವಿ ಮಾಡಲಾಗಿದೆ ಎಂದರು. ಮೈಸೂರು ನಗರವು ಯೋಗಭ್ಯಾಸಕ್ಕೆ ಹೆಸರುವಾಸಿಯಾಗಿದ್ದು, ರಾಜರ ಕಾಲದಿಂದಲೂ ಯೋಗಕ್ಕೆ ವಿಶೇಷವಾದ ಸ್ಥಾನಮಾನ ನೀಡಲಾಗಿದೆ. ಆದರೆ ಇಂದಿನ ಬಿಕ್ಕಟ್ಟಿನ ಸಂದರ್ಭದಲ್ಲಿ ಯೋಗಾಸ್ತಕರು ತಮ್ಮ ತಮ್ಮ ಮನೆಯಲ್ಲಿ ಯೋಗಾಭ್ಯಾಸ ಮಾಡುವ ಮೂಲಕ ದೇಹಕ್ಕೆ ಅವಶ್ಯಕವಿರುವ ರೋಗನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳಬೇಕು ಎಂದು ತಿಳಿಸಿದರು.

ಯೋಗಭ್ಯಾಸದಲ್ಲಿ ತಾಡಾಸನ, ವೃಕ್ಷಾಸನ, ಪಾದ ಹಸ್ತಾಸನ, ಅರ್ಧ ಚಕ್ರಾಸನ, ತ್ರಿಕೋಣಾಸನ, ಸಮದಂಡಾಸನ, ಭದ್ರಾಸನ, ವಜ್ರಾಸನ, ಅರ್ಧ ಉಷ್ಟ್ರಾಸನ, ಶಶಂಕಾಸನ, ಪವನ ಮುಕ್ತಾಸನ, ಮಕರಾಸನ, ಭುಜಂಗಾಸನ, ಸೇತು ಬಂದಾಸನ, ಅರ್ಧ ಹಲಾಸನ ಸೇರಿದಂತೆ ಇನ್ನಿತರ ಆಸನಗಳನ್ನು, ಪ್ರಾಣಾಯಾಮವನ್ನು ಸರ್ಕಾರದ ಶಿಷ್ಟಾಚಾರದಂತೆ ಅಭ್ಯಾಸ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ರವಿಶಂಕರ್, ಮೈಸೂರು ಯೋಗ ಸ್ಪೋರ್ಟ್ಸ್ ಫೌಂಡೇಶನ್‌ನ ಪಿ.ಗಣೇಶ್ ‌ಕುಮಾರ್, ಬಾಬಾ ರಾಮ್ ದೇವ್ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಶಿಕುಮಾರ್, ಮೈಸೂರು ಯೋಗ ಒಕ್ಕೂಟದ ಬಿ‌.ಪಿ.ಮೂರ್ತಿ ಸೇರಿದಂತೆ ಇತರರು ಭಾಗವಹಿಸಿದ್ದರು.

See also  ಸಿಎಂ ನಿವಾಸದ ಬಳಿ ನಾಪತ್ತೆಯಾಗಿದ್ದ ಮರಿಗೌಡ ಪತ್ತೆ?
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು