News Kannada
Tuesday, October 04 2022

ಮೈಸೂರು

ಮೈಸೂರು ಉತ್ತರ ವಲಯದಲ್ಲಿ  ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಸಕಲ ಸಿದ್ಧತೆ - 1 min read

Photo Credit :

ಮೈಸೂರು ಉತ್ತರ ವಲಯದಲ್ಲಿ  ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಸಕಲ ಸಿದ್ಧತೆ

ಮೈಸೂರು: ಜೂನ್ 25 ರಿಂದ ಜುಲೈ 3 ರವರೆಗೆ ರಾಜ್ಯಾದ್ಯಂತ ನಡೆಯಲು ಯೋಜಿಸಿರುವ 2020-21 ರ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಮೈಸೂರು ಉತ್ತರ ವಲಯ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂಧು ಮೈಸೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ಉದಯಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, 9 ಸದಸ್ಯರುಗಳನ್ನೊಳಗೊಂಡ ತಾಲ್ಲೂಕು ನಿರ್ವಹಣಾ ಸಮಿತಿಯನ್ನು ರಚಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆ ಸಂದರ್ಭದಲ್ಲಿ ಎದುರಾಗುವ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಅದಕ್ಕೆ ಪರಿಹಾರ ನೀಡುವಂತಹ ಮಾರ್ಗೋಪಾಯಗಳನ್ನು ಸಮಿತಿ ತಯಾರು ಮಾಡಿಕೊಂಡಿದೆ. 13 ಸರ್ಕಾರಿ ಪ್ರೌಢಶಾಲೆಗಳು, 33 ಅನುದಾನಿತ ಪ್ರೌಢಶಾಲೆಗಳು, 71 ಅನುದಾನರಹಿತ ಪ್ರೌಢಶಾಲೆಗಳು, ಇತರ ಇಲಾಖೆಯ 2 ಪ್ರೌಢಶಾಲೆಗಳು ಸೇರಿದಂತೆ ಒಟ್ಟು 119 ಪ್ರೌಢಶಾಲೆಗಳ 6020 ವಿದ್ಯಾರ್ಥಿಗಳು ಹಾಗೂ ಸಿ.ಸಿ.ಇ. ಪುನರಾವರ್ತಿತ ವಿದ್ಯಾರ್ಥಿಗಳು, ಖಾಸಗಿ ಹೊಸ ಅಭ್ಯರ್ಥಿಗಳು, ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಎನ್.ಎಸ್.ಆರ್. ನ 693 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 6713 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ.

ಒಟ್ಟು 25 ಪರೀಕ್ಷಾ ಕೇಂದ್ರಗಳು ಮತ್ತು 2 ಹೆಚ್ಚುವರಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.  ಹೊರ ಜಿಲ್ಲೆಯಲ್ಲಿ 179 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಲು ಒಟ್ಟು 5 ಮಾರ್ಗಗಳ ನಕಾಶೆ ತಯಾರಿಸಲಾಗಿದ್ದು ಯಾವುದೇ ಸಂದರ್ಭದಲ್ಲಿಯೂ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಎದುರಿಸಲು ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಮತ್ತು ಉಪ ಮುಖ್ಯ ಅಧೀಕ್ಷಕರುಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ. ಪ್ರತಿಯೊಂದು ಕೇಂದ್ರಕ್ಕೂ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, ಮೊಬೈಲ್ ಸ್ವಾಧೀನ ಅಧಿಕಾರಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ  ಮತ್ತು ಆರಕ್ಷಕ ಸಿಬ್ಬಂದಿ  ನೇಮಿಸಿದ್ದು  ಪರೀಕ್ಷಾ ಕೇಂದ್ರದಲ್ಲಿ ಸರ್ಕಾರ ಸೂಚಿಸಿರುವ ಕೋವಿಡ್ 19  ನಿಯಮಗಳಾದ ಸಾಮಾಜಿಕ ಅಂತರ, ಸ್ಯಾನಿಟೈಜರ್, ಮಾಸ್ಕ್ ಗಳ ಬಳಕೆ, ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷಾ ಕೇಂದ್ರಕ್ಕೆ ಏನಾದರೂ ಸೋಂಕು ತಗಲಿದಲ್ಲಿ ಅದಕ್ಕೆ ಪರ್ಯಾಯವಾಗಿ ಪ್ರತಿ ಕೇಂದ್ರಕ್ಕೂ   ಮತ್ತೊಂದು ಪರೀಕ್ಷಾ ಕೇಂದ್ರ ಹಾಗೂ  ತುರ್ತು ಸಂದರ್ಭವನ್ನು ಎದುರಿಸಲು 10 ಖಾಸಗಿ ಶಾಲೆಗಳ ಬಸ್ ಗಳನ್ನು ಕಾಯ್ದಿರಿಸಲಾಗಿದೆ.  ಪ್ರತಿ ಪರೀಕ್ಷಾ ಕೇಂದ್ರವನ್ನು ಮೈಸೂರು ಮಹಾನಗರ ಪಾಲಿಕೆಯ ಸಹಕಾರದಿಂದ ಪರೀಕ್ಷೆ ನಡೆಯುವ ಹಿಂದಿನ ದಿನ ಸ್ಯಾನಿಟೈಜೇಷನ್ ಮಾಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು  ತಿಳಿಸಿದ್ದಾರೆ.

See also  ಕಳ್ಳಬೇಟೆ ತಡೆ ಶಿಬಿರ ಸಿಬ್ಬಂದಿಗೆ ನೆರವು ನೀಡಿದ ದರ್ಶನ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು