News Kannada
Sunday, November 27 2022

ಮೈಸೂರು

ಕೆಎಸ್‍ಒಯು ಅಕಾಡೆಮಿಕ್ ಭವನವೀಗ ಮಾದರಿ ಕೋವಿಡ್ ಕೇರ್ ಸೆಂಟರ್ - 1 min read

Photo Credit :

ಕೆಎಸ್‍ಒಯು ಅಕಾಡೆಮಿಕ್ ಭವನವೀಗ ಮಾದರಿ ಕೋವಿಡ್ ಕೇರ್ ಸೆಂಟರ್

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ಸಕಲ ಪ್ರಯತ್ನ ಮಾಡುತ್ತಿದ್ದು, ಅದಾಗ್ಯೂ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಪ್ರತಿದಿನ ಪತ್ತೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸೋಂಕಿತರಿಗೆ ಹಾಸಿಗೆಗಳ ಕೊರತೆ ಉಂಟಾಬಾರದೆಂಬ ಮುಂದಾಲೋಚನೆಯಿಂದ ಜಿಲ್ಲೆಯಲ್ಲಿ ಅನೇಕ ಕೋವಿಡ್ ಕೇರ್ ಸೆಂಟರ್‍ ಗಳನ್ನು ಸ್ಥಾಪಿಸಲಾಗಿದೆ.

ಮೈಸೂರಿನ ಹೊರವಲಯದ ಮಂಡಕಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅಕಾಡೆಮಿಕ್ ಭವನದಲ್ಲೂ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದ್ದು, ಇಲ್ಲಿ ಗುಣಲಕ್ಷಣವಿಲ್ಲದ ಕೊರೊನಾ ಸೋಂಕಿತ ವ್ಯಕ್ತಿಗಳನ್ನು ದಾಖಲಿಸಿಕೊಂಡು ರುಚಿಯಾದ ಊಟೋಪಚಾರ, ಮನರಂಜನಾ ವ್ಯವಸ್ಥೆ ಮುಂತಾದ ಸೌಲಭ್ಯಗಳ ಜೊತೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕೇಂದ್ರದಲ್ಲಿ ದಾಖಲಾಗಿರುವ ವ್ಯಕ್ತಿಗಳು ಆರಾಮದಾಯಕವಾಗಿ ಗುಣಪಡಿಸಿಕೊಂಡು ಬರುತ್ತಿದ್ದಾರೆ.

ಅಕಾಡೆಮಿಕ್ ಭವನದಲ್ಲಿ ಸುಮಾರು 53 ಸಭಾಂಗಣಗಳಿದ್ದು, ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಎರಡು ಮೀಟರ್ ಅಂತರದಲ್ಲಿ ಒಂದೊಂದರಲ್ಲಿ 15 ರಿಂದ 20 ಹಾಸಿಗೆಯನ್ನು ವ್ಯವಸ್ಥೆ ಮಾಡಲಾಗಿದೆ. ಹಾಸಿಗೆ, ಹೊದಿಕೆ, ತಲೆದಿಂಬು, ಸ್ನಾನದ ಕೊಠಡಿ, ಶೌಚಾಲಯ, ಬಟ್ಟೆ ಸ್ವಚ್ಚಗೊಳಿಸಲು ಅಗತ್ಯ ವ್ಯವಸ್ಥೆ ಎಲ್ಲವೂ ಇವೆ. ಸ್ನಾನಕ್ಕೆ ಬಿಸಿಬಿಸಿ ನೀರು ಇರುತ್ತದೆ. ಎಲ್ಲಾ ಮೂಲಭೂತ ಸೌಕರ್ಯಗಳನ್ನೂ ಒದಗಿಸಲಾಗಿದೆ.

ಕೊರೊನಾ ಸೋಂಕಿಗೆ ಒಳಗಾಗಿ ದಾಖಲಾದ ವ್ಯಕ್ತಿಗಳು ಅಲ್ಲೇ ಇರಬೇಕಾಗುವುದರಿಂದ ಏಕತಾನತೆ, ಬೇಸರ ಉಂಟಾಗಬಹುದು. ಅವರಿಗೆ ಯಾವುದೇ ರೀತಿಯಲ್ಲಿ ಬೇಸರ ಉಂಟಾಗಬಾರದು ಎಂಬ ಉದ್ದೇಶದಿಂದ ಮನರಂಜನೆಗಾಗಿ ಅಗತ್ಯವಿರುವ ಪೂರಕ ವಾತಾವರಣವನ್ನು ಮೈಸೂರು ಜಿಲ್ಲಾಡಳಿತ ಕಲ್ಪಿಸಿದೆ. ಸಭಾಂಗಣದಲ್ಲಿ ಒಳಾಂಗಣ ಕ್ರೀಡಾಪರಿಕರಗಳಾದ ಕೇರಂ ಬೋರ್ಡ್, ಚೆಸ್ ಹಾಗೂ ಬ್ಯಾಡ್ಮಿಂಟನ್ ಪರಿಕರಗಳನ್ನು ನೀಡಲಾಗಿದೆ. ಪ್ರತಿಯೊಂದು ಕೊಠಡಿಯಲ್ಲೂ ಕೇಬಲ್ ಸಂಪರ್ಕವಿರುವ ಟಿ.ವಿ, ವೈಫೈ ವ್ಯವಸ್ಥೆ ಒಳಗೊಂಡಿದೆ.

ರೋಗಿಗಳು ಸುರಕ್ಷತೆಯಷ್ಟೆ, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಸುರಕ್ಷತೆಗೂ ಪ್ರಾಧಾನ್ಯತೆ ನೀಡಲಾಗಿದೆ. ಕೆಳ ಮಹಡಿಯಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆಂದೇ ಪ್ರತ್ಯೇಕ ವಿಭಾಗವನ್ನು ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಗ್ರೀನ್ ಜೋನ್ ಎಂದು ಹೆಸರಿಡಲಾಗಿದೆ. ಇಲ್ಲಿ ವೈದ್ಯರು, ಸ್ಟಾಫ್ ನರ್ಸ್ ಹಾಗೂ ಆಡಳಿತ ಸಿಬ್ಬಂದಿ ಇರಲಿದ್ದಾರೆ. ಶುಚಿತ್ವದ ಕೊರತೆ ನಿಭಾಯಿಸಲು ಪ್ರತ್ಯೇಕ ಅಧಿಕಾರಿಗಳನ್ನು ನೇಮಿಸಲಾಗಿದೆ. ಶೌಚಾಲಯ ನಿರ್ವಹಣೆ ಸೇರಿದಂತೆ ಕೊವೀಡ್ ಔಷಧೀಯ ತ್ಯಾಜ್ಯವನ್ನು ಅತ್ಯಂತ ಜಾಗರೂಕತೆಯಿಂದ ವಿಲೇವಾರಿ ಮಾಡಲಾಗುತ್ತಿದೆ.

ಈ ಕುರಿತಂತೆ ಮಾತನಾಡಿದ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು, ಈ ಕೋವಿಡ್ ಕೇರ್ ಸೆಂಟರ್‍ನಲ್ಲಿ ಅತ್ಯುತ್ತಮವಾದ ವ್ಯವಸ್ಥೆ ಇದ್ದು, ಅತ್ಯಂತ ಕಡಿಮೆ ಅವಧಿಯಲ್ಲಿ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ ಶ್ರೇಯಸ್ಸು ಇಲ್ಲಿನ ನೋಡಲ್ ಅಧಿಕಾರಿ ಡಾ.ಅಶೋಕ್ ಹಾಗೂ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಎಂ.ಟಿ.ಮಂಜುನಾಥ್ ಹಾಗೂ ಈ ಕೇಂದ್ರದಲ್ಲಿ ಕೆಲಸ ನಿರ್ವಹಿಸುವ ಎಲ್ಲರಿಗೂ ಸಲ್ಲಬೇಕು ಎಂದು ಹೇಳಿದರು.

See also  ಇದೊಂದು ಲಾಕಪ್ ಡೆತ್: ಗ್ರಾಮಸ್ಥರ ಆಕ್ರೋಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು