News Kannada
Sunday, November 27 2022

ಮೈಸೂರು

ಸಿದ್ದರಾಮಯ್ಯ ನಿವಾಸ  ಸೀಲ್‌ ಡೌನ್‌ - 1 min read

Photo Credit :

ಸಿದ್ದರಾಮಯ್ಯ ನಿವಾಸ  ಸೀಲ್‌ ಡೌನ್‌

ಮೈಸೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾ  ಪಾಸಿಟಿವ್ ಧೃಡಪಟ್ಟಿರುವ  ಹಿನ್ನೆಲೆಯಲ್ಲಿ ಅವರ ನಿವಾಸವನ್ನು ಸೀಲ್‍ಡೌನ್ ಮಾಡಲಾಗಿದೆ.

ಇತ್ತೀಚೆಗೆ ಮೈಸೂರಿಗೆ ಆಗಮಿಸಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು  ಟಿ.ಕೆ.ಲೇಔಟ್‍ನಲ್ಲಿರುವ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದರು. ಈ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು  ಸಿದ್ದರಾಮಯ್ಯ ಅವರ ನಿವಾಸದ ಸುತ್ತಮುತ್ತ ಸೀಲ್‍ಡೌನ್ ಮಾಡಿದ್ದು, ಮುಂದಿನ 14 ದಿನಗಳು ಸಿದ್ದರಾಮಯ್ಯ ಅವರ ನಿವಾಸವನ್ನು ಸಂಪೂರ್ಣ ಸೀಲ್‍ಡೌನ್ ಆಗಲಿದೆ. ಅಲ್ಲದೇ ಸಿದ್ದರಾಮಯ್ಯ ಅವರ ನಿವಾಸದ ಸುತ್ತಮುತ್ತ ಪಾಲಿಕೆ ವತಿಯಿಂದ ಔಷಧಿ ಸಿಂಪಡಣೆ ಮಾಡಲಾಗಿದೆ.

ಸಿದ್ದರಾಮಯ್ಯ ಅವರು  ಜು.30ರಂದು ಜಿಲ್ಲಾ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ  ಪಾಲ್ಗೊಂಡಿದ್ದರು. ಸಂವಾದದಲ್ಲಿ ಮೈಸೂರಿನ ಹಲವು ಮಂದಿ  ವರದಿಗಾರರು, ಛಾಯಾಗ್ರಾಹಕರು ಪಾಲ್ಗೊಂಡಿದ್ದರು.  ಈ ನಡುವೆ ಸಂವಾದದಲ್ಲಿ ಪಾಲ್ಗೊಂಡಿದ್ದ ಪ್ರತಿಯೊಬ್ಬರು ಸೆಲ್ಫ್ ಕ್ವಾರಂಟೈನ್ ಆಗುವಂತೆ ಕೋರಿ ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್‍ ಬಾಬು ಅವರು ಆಡಿಯೋ ಸಂದೇಶ ರವಾನಿಸಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ನಗರದ ಅಗ್ರಹಾರದ ತ್ಯಾಗರಾಜ ರಸ್ತೆಯಲ್ಲಿರುವ ಜಿಲ್ಲಾ ಪತ್ರಕರ್ತರ ಸಂಘದ ಕಟ್ಟಡಕ್ಕೆ ಸ್ಯಾನಿಟೈಜ್‍ ಮಾಡಿ, ಸಂಘದ ಕಟ್ಟಡವನ್ನು ಬಂದ್ ಮಾಡಲಾಗಿದೆ. ಮೈಸೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ, ಜು.31ರಂದು ಮಂಡ್ಯದಲ್ಲಿ ಸಹ ಪತ್ರಿಕಾಗೋಷ್ಠಿ ನಡೆಸಿದ್ದರು. ಹೀಗಾಗಿ ಮಂಡ್ಯ ಪತ್ರಕರ್ತರ ವಲಯದಲ್ಲೂ ಕೊರೊನಾ ಭೀತಿ ಎದುರಾಗಿದ್ದು  ಇನ್ನಷ್ಟೆ ಸೂಕ್ತ  ಕ್ರಮ ಕೈಗೊಳ್ಳಬೇಕಿದೆ.

See also  ಪಿಜಿ ಹಾಸ್ಟೆಲ್‌ ಸೌಲಭ್ಯ ಸರಿಪಡಿಸಲು ವಿದ್ಯಾರ್ಥಿಗಳ ಧರಣಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು