News Kannada
Tuesday, December 06 2022

ಮೈಸೂರು

ಕೆ.ಆರ್.ಎಸ್- ಕಬಿನಿ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಣೆ

Photo Credit :

ಕೆ.ಆರ್.ಎಸ್- ಕಬಿನಿ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಣೆ

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡ್ಯದಲ್ಲಿರುವ ಕೆ.ಆರ್.ಎಸ್ ಜಲಾಶಯ ಹಾಗೂ ಮೈಸೂರಿನ ಕಬಿನಿ ಜಲಾಶಯಕ್ಕೆ ಶುಕ್ರವಾರ ಬಾಗಿನ ಅರ್ಪಿಸಿದರು.

ಕೆ.ಆರ್.ಎಸ್ ಜಲಾಶಯಕ್ಕೆ ಐದನೇ ಬಾರಿಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಎಂಬ ಖ್ಯಾತಿಗೆ ಬಿ.ಎಸ್.ಯಡಿಯೂರಪ್ಪ ಬಾಜನರಾಗಿದ್ದಾರೆ. ಮೊದಲಿಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕೆ.ಆರ್.ಎಸ್.ಗೆ ಆಗಮಿಸಿದ ಕೆ.ಆರ್.ಎಸ್‍ಗೆ ತೆರಳಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಲ್ಲಿನ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಮಧ್ಯಾಹ್ನ 12-30ರ ಅಭಿಜಿನ್ ಲಗ್ನದಲ್ಲಿ ಬಾಗಿನ ಅರ್ಪಿಸಿದರು.

ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ವೇ.ಬ್ರ. ಡಾ. ಬಾನುಪ್ರಕಾಶ್ ಶರ್ಮಾ ಅವರು ಮೊದಲಿಗೆ ವಿಶೇಷ ಪೂಜಾ ಕೈಂಕರ್ಯವನ್ನು ನೆರವೇರಿಸಿದರು. ಈ ಸಂದರ್ಭ  ಕಾವೇರಿ ಮಾತೆಗೆ ಅರಿಶಿನ, ಕುಂಕುಮ, ಪುಷ್ಪಹಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅರ್ಪಿಸಿ ನಂತರ ಬಾಗಿನ ಅರ್ಪಿಸಿ ಮಂಗಳಾರತಿ ಮಾಡಿದರು. ನಂತರ ಮಾತನಾಡಿದ  ಅವರು, ಮುಂಗಾರು ಉತ್ತಮವಾಗಿದ್ದು, ಮಳೆ ಸುರಿದಿದ್ದರಿಂದ ರಾಜ್ಯದಲ್ಲಿರುವ ಕೆರೆ ಕಟ್ಟೆ, ಜಲಾಶಯಗಳೆಲ್ಲ ಭರ್ತಿಯಾಗಿವೆ. ಇದರಿಂದ ಅಂತರ್ಜಲ ಕುಸಿಯುವುದು ತಪ್ಪಿದೆಯಲ್ಲದೆ, ಈ ವರ್ಷ ನಮ್ಮ ನಿರೀಕ್ಷೆ ಮೀರಿದ ಉತ್ತಮ ಬೆಳೆಯೂ ಬೆಳೆದಿದೆ. ಪ್ರತಿ ವರ್ಷವೂ ಇದೇ ರೀತಿ ವರುಣ ದೇವನ ಕೃಪೆ ತೋರಿದರೆ ಒಳ್ಳೆ ಮಳೆ ಬೆಳೆ ಆಗಿ ಜನ ಸಮೃದ್ಧಿಯಿಂದ ಬಾಳುವಂತಾಗಲಿ ಎಂದು ಪ್ರಾರ್ಥಿಸಿದರು. ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ, ಸಂಸದರಾದ ಸುಮಲತಾ ಅಂಬರೀಶ್, ಪ್ರತಾಪಸಿಂಹ, ಶ್ರೀರಂಗಪಟ್ಟಣ ವಿಧಾನ ಸಭಾ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಮೊದಲಾದವರಿದ್ದರು.

ಕಬಿನಿ ಜಲಾಶಯಕ್ಕೆ ಬಾಗಿನ

ಇದಾದ ನಂತರ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೂರನೇ ಬಾರಿಗೆ ಬಾಗಿನ ಅರ್ಪಿಸಿದರು. ಬಳಿಕ ಕಬಿನಿ ಜಲಾಶಯದ ಕೆಳಭಾಗದಲ್ಲಿ ಮೇಲ್ಮಟ್ಟದ ಸೇತುವೆ ಹಾಗೂ ಸಂಪರ್ಕ ರಸ್ತೆ ಕಾಂಕ್ರಿಟ್ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ರೈತ ಸಂಘದಿಂದ ರಸ್ತೆ ತಡೆ ಪ್ರತಿಭಟನೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಹಿನ್ನೆಲೆಯಲ್ಲಿ ರೈತ ಹಾಗೂ ದಲಿತ ಪರ ಸಂಘಟನೆಗಳು ರೈತ ವಿರೋಧಿ ಕಾಯ್ದೆಗಳಾದ ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನ್ಯಾಯವಾಗಿದೆ ಎಂದು ಸರ್ಕಾರದ ಕ್ರಮವನ್ನು ಖಂಡಿಸಿ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಕಪ್ಪು ಬಾವುಟ ಪ್ರದರ್ಶನ ಮಾಡುವುದಾಗಿ ಎಚ್ವರಿಸಿದ್ದರಿಂದ ಸಂಘಟನೆಗಳ ಹೋರಾಟವನ್ನು ತಡೆಯಲು ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತು ಏರ್ಪಡಿಸಿ ಪ್ರತಿಭಟನಾಕಾರರು ಕಬಿನಿ ಜಲಾಶಯಕ್ಕೆ ತೆರಳದಂತೆ ನಿರ್ಬಂಧಿಸಿತ್ತು.

ಹೀಗಾಗಿ ಪ್ರತಿಭಟನಾಕಾರರು ಕಬಿನಿ ಜಲಾಶಯಕ್ಕೆ ತೆರಳಲು ಅವಕಾಶ ಕೊಡಿ ಎಂದು ತಾಲೂಕಿನ ಕೊಲ್ಲೇಗೌಡನಹಳ್ಳಿ ವೃತದ ಬಳಿ ಕೆಲ ಕಾಲ ರಸ್ತೆ ತಡೆ ನಡೆಸಿದರು. ಮುಖ್ಯಮಂತ್ರಿ ಆಗಮನದ ಸಂದರ್ಭದಲ್ಲಿ ಪ್ರತಿಭಟನಾಕಾರನ್ನು ಪೆÇಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು. ಪ್ರತಿಭಟನೆಯಲ್ಲಿ  ಕುರುಬೂರು ಶಾಂತಕುಮಾರ್, ಬೆಟ್ಟಯ್ಯಕೋಟೆ, ಆಲಗೂಡು ಶಿವಕುಮಾರ್, ಹೆಗ್ಗನೂರು ನಿಂಗರಾಜು, ಶಂಭುಲಿಂಗಸ್ವಾಮಿ, ರತ್ನಪುರ ಪುಟ್ಟಸ್ವಾಮಿ, ಮುತ್ತು ಉಯ್ಯಂಬಳ್ಳಿ, ಹೊಳೆಹುಂಡಿ ದಾಸಯ್ಯ, ಬೀರಂಬಳ್ಳಿ ಪ್ರಭಾಕರ್ ಇದ್ದರು.

See also  ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ನವೆಂಬರ್ 9ಕ್ಕೆ ಬಿಜೆಪಿ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು