News Kannada
Thursday, October 06 2022

ಮೈಸೂರು

ಬಿ ಸಿ ಪಾಟೀಲರೇ ನಿಜವಾದ ಊಸರವಳ್ಳಿ: ಸಾರಾ ಮಹೇಶ್‌ ತಿರುಗೇಟು - 1 min read

Photo Credit :

ಬಿ ಸಿ ಪಾಟೀಲರೇ ನಿಜವಾದ ಊಸರವಳ್ಳಿ: ಸಾರಾ ಮಹೇಶ್‌ ತಿರುಗೇಟು

ಮೈಸೂರು: ಮಾಜಿ ಮುಖ್ಯ ಮಂತ್ರಿಕುಮಾರ ಸ್ವಾಮಿ ವಿರುದ್ದ ಆರೋಪ ಮಾಡಿರುವ ಬಿ ಸಿ ಪಾಟೀಲರೇ ನಿಜವಾದ ಊಸರವಳ್ಳಿ ಎಂದು ಶಾಸಕ ಸಾರಾ ಮಹೇಶ್‌ ತಿರುಗೇಟು ನೀಡಿದ್ದಾರೆ.

ಪಾಟೀಲರ ಅರೋಪದ ಹಿನ್ನೆಲೆಯಲ್ಲಿ ಸುದ್ದಿಗಾರರು ಪ್ರತಿಕ್ರಿಯೆ ಕೇಳಿದಾಗ ಉತ್ತರಿಸಿದ ಅವರು ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಬಗ್ಗೆ ಮೊದಲು ಧ್ವನಿ ಎತ್ತಿದ್ದೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು. ಈ ಜಾಲದಲ್ಲಿ ಸಿಕ್ಕಿ ಬೀಳುತ್ತಿರುವವರು ಬಿಜೆಪಿಯ ಆಪ್ತರೇ ಅಗಿರುವುದರಿಂದ ಕನಲಿ ಹೋಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲರು ಬಾಲ ಸುಟ್ಟ ಬೆಕ್ಕಿನಂತೆ ಆಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಕ್ರಿಕೆಟ್ ಬೆಟ್ಟಿಂಗ್, ಡ್ರಗ್ ಮಾಫಿಯಾ ಮಟ್ಟಹಾಕಲು ಕುಮಾರಸ್ವಾಮಿ ಅವರು ಮಂತ್ರಿಯಾಗಿದ್ದಾಗ ಬಿಸಿ ಮುಟ್ಟಿಸಿದ್ದರಿಂದಲೇ ದೇಶಾಂತರ ಓಡಿಹೋಗಿ ತಲೆಮರೆಸಿಕೊಂಡಿದ್ದವರು ಜಾಮೀನು ಪಡೆದು ಬಂದಿದ್ದು, ಇದಕ್ಕೆ ತೆರೆಮರೆಯಲ್ಲಿ ನಿಂತು ವ್ಯವಸ್ಥೆ ಮಾಡಿದವರು ಗೊತ್ತಿದೆ ಎಂದು ಬಿಜೆಪಿ ಹೆಸರು ಹೇಳದೆ ಟೀಕಿಸಿದರು. ಅಧಿಕಾರದ ಆಸೆಗಾಗಿ ವೇಷ ಬದಲಿಸುವ ಜಾಯಮಾನ ಕೃಷಿ ಸಚಿವರಿಗೆ ಕರಗತವಾಗಿದೆ. ಉಸರವಳ್ಳಿಯನ್ನು ನಾಚಿಸುವಂತೆ ನಾಲಗೆಯ ಬಣ್ಣವನ್ನೂ ಬದಲಿಸುವ ಇಂತಹ ಬೃಹಸ್ಪತಿಗಳು ಕುಮಾರಸ್ವಾಮಿ ಅವರ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಲಿ ಎಂದು ಎಚ್ಚರಿಸಿದ್ದಾರೆ.

ಪೂರ್ವಾಶ್ರಮದಲ್ಲಿ ಪೊಲೀಸ್ ಇಲಾಖೆಯಲ್ಲಿದ್ದ ಪಾಟೀಲರಿಗೆ ಇಂತಹ ಮಾಫಿಯಾಗಳ ಬಗ್ಗೆ ಅರಿವಿಲ್ಲ ಎಂದರೆ ಅವರು ಪಾಲಿಸಿದ ವೃತ್ತಿನಿಷ್ಠೆ ಏನೆಂಬುದು ನಗೆಪಾಟಲಿನ ಸಂಗತಿ. ಎಂತೆಂತಹ ಊಸರವಳ್ಳಿಗಳು ಪೊಲೀಸ್ ಇಲಾಖೆಯಲ್ಲಿ ಇದ್ದರು ಎಂಬ ಬಗ್ಗೆ ಮರುಕವಿದೆ ಎಂದು ಸಾ.ರಾ.ಮಹೇಶ್ ಕುಟುಕಿದ್ದಾರೆ. ಖಾವಿ ತೊಟ್ಟ ಮಾರ್ಜಾಲ ಸನ್ಯಾಸಿಯಂತೆ ಖಾಕಿ ಕಳಚಿ ಖಾದಿ ಧರಿಸಿದ ನಂತರ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸಬೇಕಾಗಿಲ್ಲ ಎಂಬ ಉಡಾಫೆಯ ಪ್ರತಿಕ್ರಿಯೆ ನೀಡುತ್ತಿರುವ ಪಾಟೀಲರು ನಿಜವಾದ ಊಸರವಳ್ಳಿ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆ ಇರುವುದು ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ ಎಂದು ಹೇಳುತ್ತಿರುವ ಪಾಟೀಲರು ಎಷ್ಟು ಮಂದಿ ವಿರುದ್ಧ ಕೇಸು ಹಾಕಿದ್ದಾರೆ? ಎಂಬ ವಿವರವನ್ನು ಜನತೆಯ ಮುಂದಿಟ್ಟು ನಂತರ ಮಾತಾಡಲಿ ಎಂದರು.

See also  2018 ಕ್ಕೆ ಜೆಡಿಎಸ್ ಅಧಿಕಾರ ಖಚಿತ: ಹೆಚ್ ಡಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು