ಮೈಸೂರು: ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದೇ ಸೆಪ್ಟೆಂಬರ್ 21ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಶಾಸಕ ಕೋವಿಡ್ ತಪಾಸಣೆಗೆ ಒಳಪಟ್ಟಿದ್ದರು.
ಕೋವಿಡ್ ಸಂಬಂಧ ಯಾವುದೇ ಲಕ್ಷಣಗಳಿಲ್ಲದಿದ್ದರೂ ಪಾಸಿಟಿವ್ ಬಂದಿದೆ. ಹೀಗಾಗಿ, ಶಾಸಕರು ಹೋಂ ಐಸೋಲೇಷನ್ ಆಗಿದ್ದಾರೆ.