News Kannada
Friday, October 07 2022

ಮೈಸೂರು

ಮೈಸೂರು ದಸರಾಗೆ ಗಜಪಡೆಯ ಸ್ವಾಗತಿಸಿದ ಉಸ್ತುವಾರಿ ಸಚಿವ ಸೋಮಶೇಖರ್ - 1 min read

Photo Credit :

ಮೈಸೂರು ದಸರಾಗೆ ಗಜಪಡೆಯ ಸ್ವಾಗತಿಸಿದ ಉಸ್ತುವಾರಿ ಸಚಿವ ಸೋಮಶೇಖರ್

ಮೈಸೂರು: ಅರಮನೆಯ ಪೂರ್ವದಿಕ್ಕಿನ ಜಯಮಾರ್ತಾಂಡ ಮಹಾದ್ವಾರದಲ್ಲಿ ಕಾಡಿನಿಂದ ನಾಡಿಗೆ ಬಂದ ಗಜಪಡೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ನೇತೃತ್ವದಲ್ಲಿ ಆತ್ಮೀಯ ಸ್ವಾಗತ ನೀಡಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪಾಲಿಕೆ ಮೇಯರ್ ತಸ್ನಿಂ, ಪಾಲಿಕೆ ಆಯುಕ್ತರಾರ ಗುರುದತ್ತ ಹೆಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬಳಿಕ ಪೊಲೀಸ್ ಇಲಾಖೆ ವತಿಯಿಂದ ಜಯಮಾರ್ತಾಂಡ ದ್ವಾರದಲ್ಲಿ ಗಜಪಡೆಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು. ಅಲ್ಲಿಂದ ಮಧ್ಯಾಹ್ನ 12.45 ರ ಸುಮಾರಿಗೆ ನಾದಸ್ವರ ಹಾಗೂ ಪೂರ್ಣಕುಂಭದ ಮೂಲಕ ನಾಡಹಬ್ಬ ದಸರಾವನ್ನು ಯಶಸ್ವಿಯಾಗಿ ನಡೆಸಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪ್ರಮುಖ ಅಧಿಕಾರಿಗಳಿಗೆ ಫಲತಾಂಬೂಲಗಳನ್ನು ವಿತರಣೆ ಮಾಡಿದರು.

ಗಜಪಡೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮಾವುತರು ಹಾಗೂ ಕಾವಾಡಿಗರಿಗೆ ಆಹ್ವಾನಿತ ಗಣ್ಯವ್ಯಕ್ತಿಗಳಿಂದ ಮೂಲಭೂತ ಸೌಕರ್ಯಗಳ ವಿತರಣೆ ಮಾಡಲಾಯಿತು.

ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರು, ಬಳಿಕ ಅರಮನೆಯ ಗೊಂಬೆ ತೊಟ್ಟಿಲಿಗೆ ಪೂಜೆ ನೆರವೇರಿಸಿದರು.

ಅಂಬಾರಿ ಆನೆ ಅಭಿಮನ್ಯು, ವಿಕ್ರಮ, ಗೋಪಿ, ವಿಜಯ, ಕಾವೇರಿ ಆನೆಗಳು ಯಾವುದೇ ಅಂಜಿಕೆ ಇಲ್ಲದೆ, ಶಿಸ್ತುಬದ್ಧವಾಗಿ ಪೂಜೆ ಹಾಗೂ ಮೆರವಣಿಗೆಗೆ ಸಹಕರಿಸಿದವು.

See also  ದಸರಾಗೆ 35 ದಿನ ಬಾಕಿ: ಮೈಸೂರು ಜಿಲ್ಲಾಧಿಕಾರಿ ಅಭಿರಾಂ ವರ್ಗಾವಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು