News Kannada
Monday, October 03 2022

ಮೈಸೂರು

ಮುಖ್ಯ ಮಂತ್ರಿ ಭೇಟಿ ಹಿನ್ನೆಲೆ ; ಚಾಮುಂಡಿ ಬೆಟ್ಟದಲ್ಲಿ ಬಿಗಿ ಬಂದೋಬಸ್ತ್‌ - 1 min read

Photo Credit :

ಮುಖ್ಯ ಮಂತ್ರಿ ಭೇಟಿ ಹಿನ್ನೆಲೆ ; ಚಾಮುಂಡಿ ಬೆಟ್ಟದಲ್ಲಿ ಬಿಗಿ ಬಂದೋಬಸ್ತ್‌

ಮೈಸೂರು: ದಸರಾ ಹಬ್ಬದ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಂದು ಚಾಮುಂಡಿಬೆಟ್ಟಕ್ಕೆ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಭೇಟಿ ನೀಡಿ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.

ಅಕ್ಟೋಬರ್ 17 ರಂದು ಚಾಮುಂಡಿಬೆಟ್ಟದಲ್ಲಿ ಮೈಸೂರು ದಸರಾ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ವೇಳೆ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಕೆಲವು ಸಚಿವರುಗಳು ಭಾಗಿಯಾಗಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೆ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಲಾಗುತ್ತಿದ್ದು, ಈಗಾಗಲೇ ಮೈಸೂರು ಜಿಲ್ಲಾಡಳಿತ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಚಾಮುಂಡಿಬೆಟ್ಟದ ಮೇಲೆ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನಾಳೆ ಸಂಜೆ 6.05ಕ್ಕೆ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಬಳಿಕ ಮೈಸೂರಿಗೆ ಆಗಮಿಸಿ 6.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಕೋವಿಡ್-19 ನಿಯಂತ್ರಣ ಮತ್ತು ದಸರಾ ಸಂಬಂಧ ಸಭೆ ನಡೆಸಲಿದ್ದಾರೆ. ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಿ ಅ.17ರಂದು ಬೆಳಿಗ್ಗೆ 7.35ಕ್ಕೆ ಚಾಮುಂಡಿಬೆಟ್ಟಕ್ಕೆ ತೆರಳಿ ದಸರಾ ಮಹೋತ್ಸವ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ.

See also  ಮೈಸೂರಲ್ಲಿ ವರ್ಷಾಚರಣೆಯ ಹುಚ್ಚಾಟಕ್ಕೆ ಬ್ರೇಕ್!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು