News Kannada
Sunday, September 25 2022

ಮೈಸೂರು

ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ ಇಂದು - 1 min read

Photo Credit :

ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ ಇಂದು

ಮೈಸೂರು: ಮೈಸೂರು ವಿಶ್ವವಿದ್ಯಾ ಲಯದ 100ನೇ ಘಟಿಕೋತ್ಸವ ಸಮಾರಂಭ ಸೋಮವಾರ ಬೆಳಿಗ್ಗೆ 10.30ಕ್ಕೆ ಕ್ರಾಫರ್ಡ್‌ ಭವನದಲ್ಲಿ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯಲ್ಲಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಪ್ರಧಾನಿ ಭಾಷಣ ಬೆಳಿಗ್ಗೆ 11.15 ರಿಂದ 11.40ರ ವರೆಗೆ ಇರಲಿದೆ. ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಇನ್ಫೊಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.

ಕೊರೊನಾ ಮಾರ್ಗಸೂಚಿಯಂತೆ ಕಾರ್ಯಕ್ರಮ ರೂಪಿಸಲಾಗಿದ್ದು, ಕ್ರಾಫರ್ಡ್‌ ಹಾಲ್‌ಗೆ 100 ಮಂದಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ವಿವಿಧ ಬ್ಯಾಚ್‌ಗಳಲ್ಲಿ ಪದಕ ಹಾಗೂ ಪದವಿ ಪ್ರದಾನ ಮಾಡಲಾಗುತ್ತದೆ.

ಈ ಬಾರಿ 392 ಚಿನ್ನದ ಪದಕ ಮತ್ತು 198 ನಗದು ಬಹುಮಾನಗಳನ್ನು 230 ಮಂದಿ ಹಂಚಿಕೊಂಡಿದ್ದಾರೆ. 29,018 ಅಭ್ಯರ್ಥಿಗಳು ವಿವಿಧ ಪದವಿಗಳನ್ನು ಪಡೆಯಲಿದ್ದಾರೆ. 264 ಮಹಿಳೆಯರು ಮತ್ತು 390 ಪುರುಷರು ಒಳಗೊಂಡಂತೆ ಒಟ್ಟು 654 ಮಂದಿಗೆ ಪಿಎಚ್‌.ಡಿ ಪದವಿ ಪ್ರದಾನ ಮಾಡಲಾಗುತ್ತದೆ.

See also  ಕರ್ನಾಟಕ ಆಡಳಿತ ಮಂಡಳಿಗೆ ಐದು ಸದಸ್ಯರ ಭರ್ತಿ: ಕೃಷ್ಣಭೈರೇಗೌಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು