News Kannada
Saturday, October 01 2022

ಮೈಸೂರು

ಚಾಮುಂಡೇಶ್ವರಿ ರಥೋತ್ಸವ ಜತೆಗೆ ಮೈಸೂರು ದಸರಾ ಸಮಾಪ್ತಿ - 1 min read

Photo Credit :

ಚಾಮುಂಡೇಶ್ವರಿ ರಥೋತ್ಸವ ಜತೆಗೆ ಮೈಸೂರು ದಸರಾ ಸಮಾಪ್ತಿ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಕೊನೆ ಘಟ್ಟವಾದ ಚಾಮುಂಡೇಶ್ವರಿ ದೇವಿಯ ರಥೋತ್ಸವ ಇಂದು ಸರಳ ಮತ್ತು ಸಾಂಪ್ರದಾಯಿಕವಾಗಿ ನೆರವೇರಿತು.

ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ದೊಡ್ಡ ರಥದ ಬದಲು ಈ ಬಾರಿ ಚಿಕ್ಕ ತೇರಿನಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ರಥೋತ್ಸವ ನೆರವೇರಿಸಲಾಯಿತು. ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರಥವನ್ನು ಎಳೆಯುವ ಮೂಲಕ ರಥೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದರು.

ದಸರಾ ಮುಗಿದ ನಂತರ ಜಾತ್ರೆ ಆಯೋಜನೆ ಮಾಡುತ್ತಿದ್ದ ಅಂದಿನ ಮಹಾರಾಜರು ರಥೋತ್ಸವದ ಮೂಲಕ ಭಕ್ತರಿಗೆ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡುತ್ತಿದ್ದರು. ಆದರೆ ಇತಿಹಾಸದಲ್ಲಿ ಇದೇ ಮೊದಲ ಬಾರಿ ಕೊರೊನಾ ರಥೋತ್ಸವದ ಅದ್ದೂರಿತನ ಮತ್ತು ವಿಜೃಂಭಣೆಯನ್ನು ಕಸಿದುಕೊಂಡಿದೆ. ಕೊರೊನಾ ವ್ಯಾಪಕವಾಗಿ ಹರಡಬಾರದೆಂಬ ದೃಷ್ಠಿಯಿಂದ ಈ ಬಾರಿ ಸಾರ್ವಜನಿಕರಿಲ್ಲದೆ ಬೆರಳಣಿಕೆಯಷ್ಟು ಜನರ ಮಧ್ಯೆ ನಡುವೆ ರಥೋತ್ಸವ ನಡೆಯಿತು. ಇದರಿಂದ ದೊಡ್ಡ ರಥ ಶೆಡ್ ನಲ್ಲೆ ಉಳಿಯಬೇಕಾಯಿತು. ಚಿಕ್ಕ ತೇರಿಗೆ ಸರಳವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು.

ಇದೇ ವೇಳೆ ಮಾತನಾಡಿದ ಯದುವೀರ್ ಅವರು, ಅರಮನೆಯ ಸಂಪ್ರದಾಯದಂತೆ ಈ ಕಷ್ಟದ ಸಮಯದಲ್ಲಿ ರಥೋತ್ಸವ ನಡೆದಿದೆ. ಜಗತ್ತಿಗೆ ಕಾಡುತ್ತಿರುವ ಕೊರೊನಾ ನಿವಾರಣೆ ಆಗಲಿ. ಇಡೀ ನಾಡಿನ ಜನತೆಗೆ ಶುಭವಾಗಲಿ ಎಂದು ಶುಭ ಕೋರಿದರು.

ಸಂಪ್ರದಾಯಕ್ಕೆ ಧಕ್ಕೆ ಬಾರದಂತೆ ರಥೋತ್ಸವ ನಡೆದಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ತೆಪೋತ್ಸವ ಇರುವುದಿಲ್ಲ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ತಿಳಿಸಿದರು.ರಥೋತ್ಸವದಲ್ಲಿ ಶಾಸಕರುಗಳಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಭಾಗಿಯಾಗಿದ್ದರು.

See also  ವಿಶ್ವವಿಖ್ಯಾತ ಮೈಸೂರು ದಸರಾ 2017: ಎರಡನೇ ತಂಡದ ದಸರಾ ಗಜಪಡೆ ಅರಮನೆಗೆ...
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು