News Kannada
Sunday, October 02 2022

ಮೈಸೂರು

ಪೊಲೀಸರೊಂದಿಗೆ ಪ್ರತಿಭಟನಾನಿರತ ರೈತರ ವಾಗ್ವಾದ   - 1 min read

Photo Credit :

ಪೊಲೀಸರೊಂದಿಗೆ ಪ್ರತಿಭಟನಾನಿರತ ರೈತರ ವಾಗ್ವಾದ  

ಮೈಸೂರು: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ರೈತರು ಜಿಲ್ಲಾಧಿಕಾರಿಗಳ ಕಚೇರಿ ಮುಂದಿನ ರಸ್ತೆಯಲ್ಲೇ ಮಲಗಿ ಪ್ರತಿಭಟನೆಗೆ ಮುಂದಾದರು. ಈ ನಡುವೆ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ತಡೆ ಹಿಡಿದಿದ್ದು ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ತಳ್ಳಾಟ ನಡೆಯಿತು. ಈ ಸಮಯದಲ್ಲಿ ಪೊಲೀಸ್ ವಿರುದ್ಧವೇ ರೈತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಮ್ಮನ್ನು ಬಿಡಿ ನಾವು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಬೇಕು ಎಂದು ರೈತರು ಪಟ್ಟು ಹಿಡಿದರು. ಆದರೆ ಇದಕ್ಕೆ ಬಗ್ಗದ ಪೊಲೀಸರು ಯಾವುದೇ ಕಾರಣಕ್ಕೂ ಜಿಲ್ಲಾಧಿಕಾರಿಗಳ ಕಚೇರಿ ಒಳಗಡೆ ಬಿಡಲ್ಲ ಎಂದು ವಾದ ಮಾಡಿದರು.

ಈ ವಿಚಾರ ತಿಳಿಯುತ್ತಿದ್ದಂತೆ ಕೂಡಲೇ ರೈತರ ಪ್ರತಿಭಟನಾ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಮಂಜುನಾಥ ಸ್ವಾಮಿ ಭೇಟಿ ನೀಡಿದರು, ಈ ವೇಳೆ ಅಪರ ಜಿಲ್ಲಾಧಿಕಾರಿ ಮಂಜುನಾಥ ಸ್ವಾಮಿ ಅವರ ಮುಂದೆಯೇ ರೈತರು ವಾಗ್ವಾದಕ್ಕಿಳಿದ ದೃಶ್ಯ ಕಂಡು ಬಂತು. ರೈತರ ಕೊರಳ ಪಟ್ಟಿ ಹಿಡಿದು ಪೊಲೀಸರು ಮಾತನಾಡುತ್ತಾರೆ. ಪೊಲೀಸರು ಮೊದಲು ಕ್ಷಮೆ ಕೇಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ಅವರ ಮುಂದೆ ರೈತರು ಒತ್ತಾಯಿಸಿದರು.

ಕಬ್ಬಿನ ಎಫ್ ಆರ್ ಪಿ ದರ ಅವೈಜ್ಞಾನಿಕ ಎಫ್ ಎ ಪಿ ಬೆಲೆ ನಿಗದಿಪಡಿಸಲು ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಪ್ರತಿಭಟನಾ ಧರಣಿ ನಡೆದಿದ್ದು ಮನವಿ ಪತ್ರ ಸಲ್ಲಿಸಿದರು. ಬಣ್ಣಾರಿ ಸಕ್ಕರೆ ಕಾರ್ಖಾನೆ ಕಬ್ಬಿನಿಂದ ಬರುವ ಸಕ್ಕರೆ ಇಳುವರಿ ಕಡಿಮೆ ತೋರಿಸುತ್ತಿರುವ ಕಾರಣ ಕಬ್ಬಿನ ಎಫ್ ಆರ್ ಪಿ ದರ ನಿಗದಿ ಹಿಂದಿನ ವರ್ಷಕ್ಕಿಂತ ಪ್ರಸಕ್ತ ಸಾಲಿಗೆ ಕಡಿಮೆ ಆಗಿದೆ. ರಾಜ್ಯದಲ್ಲಿ ಎಸ್ ಎ ಪಿ ಕಾಯ್ದೆ ಜಾರಿಗೆ ಬಂದ ಮೇಲೆ ಕಳೆದ ಮೂರು ವರ್ಷಗಳಿಂದ ಸಕ್ಕರೆ ಕಾರ್ಖಾನೆಗಳು ಸಕ್ಕರೆ ಇಳುವರಿ ಕಡಿಮೆ ತೋರಿಸಿ ರೈತರಿಗೆ ಅನ್ಯಾಯ ಮಾಡುತ್ತಿವೆ. ಇದೇ ತಿಂಗಳ 15ರಂದು ನಡೆದ ಕಬ್ಬು ಖರೀದಿ ಮಂಡಳಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿರುವಂತೆ ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಸಿಎಂ ಜೊತೆ ಚರ್ಚಿಸಿ 10ದಿನದ ಒಳಗಾಗಿ ರಾಜ್ಯದಲ್ಲಿ ಎಸ್ ಎ ಪಿ ಬೆಲೆ ನಿಗದಿ ಮಾಡುವುದಾಗಿ ಒಪ್ಪಿ 15ದಿನಗಳಾದರೂ ಯಾವುದೇ ತೀರ್ಮಾನ ಪ್ರಕಟಿಸದೆ ನಿರ್ಕ್ಷ್ಯಿಸಿದ್ದಾರೆಂದು ಆರೋಪಿಸಿದರು.

ಜಿಲ್ಲೆಯಾದ್ಯಂತ ಫಸಲ್ ಭೀಮಾ ಹಣ ಕಟ್ಟಿರುವ ರೈತರಿಗೆ ನಷ್ಟ ಪರಿಹಾರದ ಹಣ ಪಾವತಿಯಾಗಿಲ್ಲ. ಹೆಸರು, ಉದ್ದು, ಅಲಸಂದೆ ಮತ್ತಿತರ ಬೆಳೆಗಳಿಗೆ ರೈತರಿಗೆ ಎರಡು ವರ್ಷವಾದರೂ ನಷ್ಟ ಪರಿಹಾರ ಪಾವತಿಸಿಲ್ಲ. ಕೂಡಲೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

See also  ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಅತ್ತಹಳ್ಳಿ ದೇವರಾಜ್, ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು