News Kannada
Monday, October 03 2022

ಮೈಸೂರು

ದಸರಾ ಜಂಬೂ ಸವಾರಿ ವೇಳೆ ಮೈಸೂರು ಡಿಸಿ ಶಿಷ್ಟಾಚಾರ ಉಲ್ಲಂಘನೆ ಆರೋಪ - 1 min read

Photo Credit :

ದಸರಾ ಜಂಬೂ ಸವಾರಿ ವೇಳೆ ಮೈಸೂರು ಡಿಸಿ ಶಿಷ್ಟಾಚಾರ ಉಲ್ಲಂಘನೆ ಆರೋಪ

ಮೈಸೂರು: ದಸರಾ ಜಂಬೂ ಸವಾರಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಶಿಷ್ಟಾಚಾರ ಉಲ್ಲಂಘಿಸಿದ್ದಾರೆಂದು ಶಾಸಕ ಸಾ.ರಾ.ಮಹೇಶ್ ಆರೋಪಿಸಿದ್ದಾರೆ.

ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು ಪತ್ರದಲ್ಲಿ ಜಂಬೂ ಸವಾರಿಯ ಪುಷ್ಪಾರ್ಚನೆ ಸಮಯದಲ್ಲಿ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಮೇಯರ್ ಮತ್ತು ರಾಜವಂಶಸ್ಥರ ಬಳಿಕ ಜಿಲ್ಲಾಧಿಕಾರಿ ನಿಲ್ಲಬೇಕು. ಆದರೆ ಈ ಬಾರಿ ಜಿಲ್ಲಾಧಿಕಾರಿ ಅವರು ರಾಜವಂಶಸ್ಥರಿಗೆ ಸ್ಥಳಾವಕಾಶ ನೀಡದೆ ಅವರನ್ನು ಕೊನೆಯಲ್ಲಿ ನಿಲ್ಲುವಂತೆ ಮಾಡಿದ್ದಾರೆ. ಇದು ಶಿಷ್ಟಾಚಾರ ಮತ್ತು ಸಂಪ್ರದಾಯದ ಉಲ್ಲಂಘನೆ ಎಂದು ಉಲ್ಲೇಖಿಸಿದ್ದಾರೆ.

ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಾಲ್ಗೊಂಡಿಲ್ಲ. ಈ ಮೂಲಕ ಮಹಾಪುರುಷರೆಡೆಗೆ ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ ಎಂದು ಪತ್ರದಲ್ಲಿ ದೂರಿದ್ದಾರೆ. ಜಿಲ್ಲಾಧಿಕಾರಿಗೆ ಶಿಷ್ಟಾಚಾರ, ನಾಡಿನ ಸಂಪ್ರದಾಯ ಮತ್ತು ಪರಂಪರೆಯ ಕುರಿತು ಸೂಕ್ತ ತಿಳುವಳಿಕೆ ನೀಡುವಂತೆ ಸಂಬಂಧಿಸಿದವರಿಗೆ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

See also  ಮೈಸೂರಿನಲ್ಲಿ ನಿರ್ಮಾಣವಾಗಲಿರುವ ಚಿತ್ರ ನಗರಿಗೆ ಪುನಿತ್ ರಾಜ್‍ಕುಮಾರ್ ಹೆಸರಿಡಲು ಚಿಂತನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು