News Kannada
Tuesday, October 04 2022

ಮೈಸೂರು

ಅಪರಾಧ ರಹಿತ ಕಾನೂನು ಸುವ್ಯವಸ್ಥೆ ಸರ್ಕಾರದ ಜವಾಬ್ದಾರಿ: ಸಿಎಂ - 1 min read

Photo Credit :

ಅಪರಾಧ ರಹಿತ ಕಾನೂನು ಸುವ್ಯವಸ್ಥೆ ಸರ್ಕಾರದ ಜವಾಬ್ದಾರಿ: ಸಿಎಂ

ಮೈಸೂರು: ಸಮಾಜದಲ್ಲಿ ಸಾರ್ವಜನಿಕರು ಯಾವುದೇ ಭೀತಿಯಿಲ್ಲದೆ ಶಾಂತಿಯಿಂದ ನೆಲೆಸುವುದಕ್ಕೆ ಅಪರಾಧರಹಿತವಾದ, ಉತ್ತಮ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಲ್ಪಿಸುವಂಥದ್ದು ಸರ್ಕಾರದ ಜವಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಮಂಗಳವಾರ ಮೈಸೂರು ನಗರದ ಪೊಲೀಸ್ ಆಯುಕ್ತರ ನೂತನಕಚೇರಿ ಹಾಗೂ ಪೊಲೀಸ್ ಗೃಹ-2020 ಯೋಜನೆಯಡಿ ನಿರ್ಮಿಸಿರುವ 108 ವಸತಿ ಗೃಹಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿ, ಶಾಂತಿಕಾಪಾಡಲು ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ತರವಾಗಿದೆ. ಮೈಸೂರು ನಗರದ ಪೊಲೀಸರಿಂದ ಅತ್ಯಂತ ಜನಪರವಾದ, ಗುಣಾತ್ಮಕ, ವೃತ್ತಿಪರ, ಪಾರದರ್ಶಕ ಹಾಗೂ ಜವಬ್ದಾರಿಯುತವಾದ ಕೆಲಸವನ್ನು ಸರ್ಕಾರ ನಿರೀಕ್ಷಿಸುತ್ತಿದೆ ಎಂದರು.

ಮೈಸೂರು ನಗರ ಪೊಲೀಸರ ಕಾರ್ಯಕ್ಷಮತೆಯನ್ನು ವೃದ್ಧಿಸುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರವು ಮೂಲಭೂತ ಸೌಲಭ್ಯಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಪೊಲೀಸರು ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಸುಸಜ್ಜಿತ ಹಾಗೂ ಮೂಲಭೂತ ಸೌಕರ್ಯದಿಂದ ಕೂಡಿದ ಪೊಲೀಸ್ ಠಾಣೆ ಹಾಗೂ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

ಕರ್ನಾಟಕ ಪೊಲೀಸ್ ವಸತಿ ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ನಿಗಮ ಮೂಲಕ ನೂತನವಾದ ಆಧುನಿಕ ವಿನ್ಯಾಸದ ವಸತಿಗೃಹವನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಲಾಗುತ್ತಿದೆ. ಮೈಸೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜ್ಯೋತಿ ನಗರದಲ್ಲಿ 36 ಹಾಗೂ ಜಾಕಿ ಕ್ವ್ಯಾಟ್ರಾಸ್‍ನ 72 ವಸತಿ ಗೃಹಗಳು ಎಲ್ಲಾ ಮೂಲಭೂತ ಸೌಕರ್ಯದಿಂದ ಕೂಡಿದೆ. ಪೊಲೀಸ್ ಗೃಹ 2020 ಯೋಜನೆಯಡಿ ಈ ವಸತಿ ಸಮುಚ್ಚಯ ನಿರ್ಮಾಣಕ್ಕೆ 20.31 ಕೋಟಿರೂ. ವೆಚ್ಚವನ್ನು ಮಾಡಲಾಗಿದೆ ಎಂದರು.

ಪೊಲೀಸ್ ಗೃಹ-2025ನೇ ಯೋಜನೆಯಡಿ 184 ವಸತಿಗೃಹಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಪ್ರಸ್ತುತ ಕಾಲದಲ್ಲಿ ಪೊಲೀಸ್ ಸಿಬ್ಬಂಧಿ ಅಧಿಕಾರಿಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಪೊಲೀಸ್ ವಸತಿಗೃಹಗಳಲ್ಲಿ ಸ್ಥಳಾವಕಾಶದ ಕೊರತೆ ಇರುವುದನ್ನು ಸರ್ಕಾರ ಮನಗಂಡು ಈ ಕ್ರಮಕೈಗೊಂಡಿದೆ ಎಂದು ತಿಳಿಸಿದರು.

See also  ಮೂರು ದಿನಗಳ 'ಕನ್ನಡ ಕಾವ್ಯ ಕಮ್ಮಟ' ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರೊ.ಗಿರಡ್ಡಿ ಗೋವಿಂದರಾಜ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು