News Kannada
Monday, February 06 2023

ಮೈಸೂರು

ಪಾಪ ವಿಶ್ವನಾಥ್ ಗೆ ಈ ಗತಿ ಬಂತಲ್ಲ: ಸಾ.ರಾ. ಮಹೇಶ್‌ ವ್ಯಂಗ್ಯ

Photo Credit :

ಪಾಪ ವಿಶ್ವನಾಥ್ ಗೆ ಈ ಗತಿ ಬಂತಲ್ಲ: ಸಾ.ರಾ. ಮಹೇಶ್‌ ವ್ಯಂಗ್ಯ

ಮೈಸೂರು: ವಿಧಾನ ಪರಿಷತ್ ಸದಸ್ಯ ವಿಶ್ವನಾಥ್ ಸಚಿವರಾಗಲು ಅರ್ಹರಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದ್ದು, ಇದರ ಹಿಂದೆ ಬಾಂಬೆ ಟೀಂ ಕರಾಮತ್ತು ಇದೆ. ಬಾಂಬೆ ಟೀಂನಲ್ಲಿರುವ ಸಚಿವಾಕಾಂಕ್ಷಿಗಳು ಹೈಕೋರ್ಟ್ ನಲ್ಲಿ ಪಿಐಎಲ್ ಹಾಕಿಸಿ ವಿಶ್ವನಾಥ್ ಗೆ ಅತಂತ್ರ ಪರಿಸ್ಥಿತಿ ತಂದಿಟ್ಟಿದ್ದಾರೆ ಎಂದು ಶಾಸಕ ಸಾ.ರಾ.ಮಹೇಶ್ ಹೊಸ ಬಾಂಬ್ ಸಿಡಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಕಳೆದ ವರ್ಷ ಇದೇ ಸಮಯದಲ್ಲಿ ನಾನು ಚಾಮುಂಡಿಬೆಟ್ಟದಲ್ಲಿ ಆಣೆ ಪ್ರಮಾಣ ಮಾಡುವ ವಿಚಾರದಲ್ಲಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕುಳಿತು ಕಣ್ಣೀರು ಇಟ್ಟಿದ್ದೆ. ಗ್ರಾಮ ದೇವತೆ ತಾಯಿ ಚಾಮುಂಡೇಶ್ವರಿ ದೇವಿ ನ್ಯಾಯ ದೇವತೆಯಾಗಿ ಈಗ ವಿಶ್ವನಾಥ್ ಗೆ ಈ ರೀತಿಯ ಶಿಕ್ಷೆ ಕೊಡಿಸಿದ್ದಾಳೆ ಎಂದು ಸಾ.ರಾ.ಮಹೇಶ್ ತಿಳಿಸಿದರು.

ಈ ಕಾರಣದಿಂದ ಇಂದು ಮತ್ತೆ ಚಾಮುಂಡೇಶ್ವರಿ ಸನ್ನಿಧಿಗೆ ಹೋಗಿ 1001 ರೂಪಾಯಿ ತಪ್ಪು ಕಾಣಿಕೆಯನ್ನು ಹುಂಡಿಯಲ್ಲಿ ಹಾಕಿ ನನ್ನಿಂದ ಏನಾದರೂ ತಪ್ಪಾಗಿದ್ರೆ ಕ್ಷಮಿಸು ಎಂದು ದೇವರನ್ನು ಕೇಳಿಕೊಂಡಿದ್ದೇನೆ. ನಿನ್ನ ಕ್ಷೇತ್ರವನ್ನು ಸಾಕ್ಷಿಯಾಗಿಟ್ಟಿದ್ದಕ್ಕೆ ಕ್ಷಮಿಸು ತಾಯಿ ಎಂದು ಕೇಳಿಕೊಂಡು ಬಂದೆ. ವಿಶ್ವನಾಥ್ ಅವರನ್ನು ಮಂತ್ರಿ ಮಾಡುವ ಇರಾದೆ ಬಿಜೆಪಿಯವರಿಗೆ ಇರಲಿಲ್ಲ. ಈ ಕಾರಣದಿಂದಲೇ ನಾಮ ನಿರ್ದೇಶನ ಮಾಡಿದ್ದಾರೆ. ಈಗ ಈ ಇಳಿವಯಸ್ಸಲ್ಲಿ ಪಾಪ ವಿಶ್ವನಾಥ್ ಗೆ ಈ ಗತಿ ಬಂತಲ್ಲ ಅಂತ ಸಾ.ರಾ.ಮಹೇಶ್ ವ್ಯಂಗೋಕ್ತಿಯಲ್ಲಿ ಮರುಕ ಪಟ್ಟರು.

ವಾಹನದ ಇಂಜಿನ್ ಸೀಜ್ ಆಗಿ ಕಾಂಗ್ರೆಸ್ ಪಕ್ಷದಲ್ಲಿ ಓಡದೆ ನಿಂತಿದ್ದ ಗಾಡಿಯನ್ನು ನಾವು ಜೆಡಿಎಸ್ ಗೆ ತಂದು ರಿಪೇರಿ ಮಾಡಿಸಿ ಬಣ್ಣ ಹೊಡೆಸಿ ಹೊಸದಾಗಿ ರೂಪಿಸಿದ್ದೇವು. ವಿಶ್ವನಾಥ್ ಕಾಗೆ ಅಲ್ಲ ಕೋಗಿಲೆ ಎಂದು ನಂಬಿಸಿದ್ದೇವು. ಈ ಎಲ್ಲಾ ಬೆಳವಣಿಗೆಗಳಿಂದ ವಿಶ್ವನಾಥ್ ರಾಜಕೀಯ ಭವಿಷ್ಯ ಮಂಕಾಗುತ್ತದೆ ಎಂದು ಸಾ.ರಾ.ಮಹೇಶ್ ಹೇಳಿದರು.

See also  ಮೈಸೂರಿನಲ್ಲಿ ಕೊರೋನಾ ಜಾಗೃತಿ ಮೂಡಿಸುವ ಭಿತ್ತಿಪತ್ರ ಬಿಡುಗಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು