ಮೈಸೂರು: ನಗರದ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗಳಿಗೆ ಖಡಕ್ ಎಚ್ಚರಿಕೆ ನೀಡಲಾಯಿತು.
ನರಸಿಂಹರಾಜ ವಿಭಾಗದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಅಪರಾಧ ತಡೆ ಮಾಸಾಚರಣೆ ಸಂಬಂಧ ರೌಡಿ ಪರೇಡ್ ನಡೆಸಿದ್ದು, ಈ ವೇಳೆ ಎ.ಸಿ.ಪಿ ಶಿವಶಂಕರ್ ಹಾಗೂ ಮೇಟಗಳ್ಳಿ ಪೊಲೀಸ್ ಇನ್ಸ್ ಪೆಕ್ಟರ್ ಎ.ಮಲ್ಲೇಶ್ ರವರು ರೌಡಿಗಳಿಗೆ ಯಾವುದೇ ರೀತಿಯ ಅಕ್ರಮ ರಿಯಲ್ ಎಸ್ಟೇಟ್ ದಂಧೆಯಲ್ಲಿ ಭಾಗವಹಿಸುವುದು, ಸಾರ್ವಜನಿಕರಿಗೆ ಕಿರುಕುಳ ನೀಡುವುದು ಸೇರಿದಂತೆ ಇನ್ನಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಅತ್ಯಂತ ಕಠಿಣ ಕ್ರಮ ಜರುಗಿಸಲಾಗುವುದೆಂದು ಖಡಕ್ ಎಚ್ಚರಿಕೆಯನ್ನು ನೀಡಿದರು.
ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಆಸಾಮಿಗಳ ಮೇಲೆ ಕಣ್ಗಾವಲಿರಿಸಿದ್ದು, ರೌಡಿ ಆಸಾಮಿಗಳು ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗವಹಿಸಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ಉಪ ಪೊಲೀಸ್ ಆಯುಕ್ತರಾದ ಡಾ. ಎ.ಎನ್ ಪ್ರಕಾಶ್ಗೌಡ ಹೇಳಿದ್ದಾರೆ.