ಮೈಸೂರು: ಭಾನುವಾರ ರಾತ್ರಿ ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿಗೆ ಸಮೀಪದ ತಿ. ನರಸೀಪುರ ತಾಲೂಕಿನ ಸೋಸಲೆ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ರಾಜು (19)ವರ್ಷ ಎಂದು ಗುರುತಿಸಲಾಗಿದೆ. ತಮಿಳುನಾಡಿಗೆ ಸೇರಿದ ಲಾರಿಗೆ ರಾಜು ಎಂಬಾತ ಚಾಲಿಸುತಿದ್ದ ಬೈಕ್ ಢಿಕ್ಕಿ ಆಗಿದ್ದು , ಲಾರಿಯ ಚಕ್ರ ಆತನ ತಲೆ ಮೇಲೆ ಹತ್ತಿ ತಲೆ ಛಿದ್ರವಾಗಿದೆ. ಹಿಂಬದಿಯಲ್ಲಿ ಕುಳಿತಿದ್ದ ತರುಣ್ ಗೆ ತೀವ್ರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜು ಸ್ನೇಹಿತನ ಮನೆಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ. ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲೀಸರು ತನಿಖೆ ನಡೆಸುತಿದ್ದಾರೆ.