News Kannada
Monday, January 30 2023

ಮೈಸೂರು

ಪರಿಷತ್‌ ಗೂಂಡಾಗಿರಿ ಮಾಡಿದವರನ್ನು ಅಮಾನತು ಮಾಡಿ: ಸೋಮಶೇಖರ್‌

Photo Credit :

ಪರಿಷತ್‌ ಗೂಂಡಾಗಿರಿ ಮಾಡಿದವರನ್ನು ಅಮಾನತು ಮಾಡಿ: ಸೋಮಶೇಖರ್‌

ಮೈಸೂರು: ಸಭಾಪತಿಗಳ ಕುರ್ಚಿಗೆ ಅದರದ್ದೇ ಆದ ಗೌರವವಿದೆ. ಆದರೆ, ಮೊದಲ ಬಾರಿ ಎಂಎಲ್ ಸಿ ಆದವರೂ ಸಹ ಆ ಕುರ್ಚಿಯಲ್ಲಿ ಕೂರುತ್ತಾರೆಂದರೆ ಏನರ್ಥ? ಸಭಾಪತಿಗಳ ಮೇಲೆ ಅವಿಶ್ವಾಸ ನಿರ್ಣಯವನ್ನು ನಮ್ಮ ಪಕ್ಷದ ಸದಸ್ಯರು ಮಂಡಿಸಿದ್ದು ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೇ? ಎಲ್ಲರಿಗೂ ನೀತಿ, ಕಾನೂನು ಹೇಳುವ ಅವರು ತಮ್ಮ ಪಕ್ಷದ ನಾಯಕರಿಗೆ ಬುದ್ಧಿ ಹೇಳಲಿ, ಗೂಂಡಾಗಿರಿ ಮಾಡಿದವರನ್ನು ಅಮಾನತು ಮಾಡಲಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೌರವಾನ್ವಿತ ಹಿರಿಯ ಸದಸ್ಯರೂ ಉಪ ಸಭಾಪತಿಗಳಾದ ಧರ್ಮೇಗೌಡರನ್ನು ಎಳೆದಾಡಿ ಗೂಂಡಾಗಿರಿ ಮಾಡಿದ ಹಾಗೆ ಬಲತ್ಕಾರವಾಗಿ ಕುರ್ಚಿಯಿಂದ ಎಳೆದಾಡಿದ್ದು ಖಂಡನೀಯ. ಇದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ನವರಿಗೆ ಮರ್ಯಾದೆ ಉಳಿಸಿಕೊಳ್ಳಬೇಕೆಂದಿದ್ದರೆ ಹೀಗೆ ಗೂಂಡಾಗಿರಿ ಮಾಡಿದವರನ್ನು ಅಮಾನತು ಮಾಡಬೇಕು. ಚಿಂತಕರ, ಬುದ್ದಿವಂತರ ಚಾವಡಿ ಎಂದೇ ಹೆಸರಾಗಿದ್ದ ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಇಂತಹ ಒಂದು ಕೀಳುಮಟ್ಟದ ರಾಜಕೀಯಕ್ಕೆ ಇಳಿಯುತ್ತದೆ ಎಂದರೆ ಹೇಗೆ ಎಂದು ಸಚಿವರು ಪ್ರಶ್ನಿಸಿದರು.

ಸಭಾಪತಿಗಳ ಮೇಲೆ ಆರೋಪ ಬಂದ ಮೇಲೆ ಅವರು ಆ ಕುರ್ಚಿಯಲ್ಲಿ ಕೂರುವಂತಿಲ್ಲ. ಅವಿಶ್ವಾಸ ನಿರ್ಣಯ ಗೊತ್ತುವಳಿಯಾದ ಮೇಲೆ ಸಭಾಪತಿಗಳಾದವರು ಖುರ್ಚಿಯನ್ನು ಬಿಟ್ಟುಕೊಡಬೇಕು. 14 ದಿನದ ಅವಧಿಯಲ್ಲಿ ಅವಕಾಶ ಕಲ್ಪಿಸಿ ಸರಿಯಾದ ರೀತಿಯಲ್ಲಿ ನಡೆದುಕೊಳ್ಳಬೇಕು. ಆದರೆ, ಅದಕ್ಕೆ ಅವಕಾಶ ಕೊಡದ ಸಭಾಪತಿಗಳ ನಡೆ ಸರಿಯಲ್ಲ ಎಂದು ಸಚಿವರು ಖಂಡಿಸಿದರು.

ಇದು ನೂರಕ್ಕೆ ನೂರು ಕಾಂಗ್ರೆಸ್ ನವರ ಪೂರ್ವನಿಯೋಜಿತ ಸಂಚು. ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿಯೇ ಗೂಂಡಾಗಿರಿ ಮಾಡುವ ಹಾಗೂ ದಾಂಧಲೆ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ. ಇದು ಅವರ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಕಾಂಗ್ರೆಸ್ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ್ದೇವೆ ಎಂದು ಸಚಿವರಾದ ಸೋಮಶೇಖರ್ ಹೇಳಿದರು.

ಚಾಮರಾಜ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ. 23ರ ಸ್ವಾತಂತ್ರ್ಯ ಉದ್ಯಾನವನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಪಾಲಿಕೆ ಆಯುಕ್ತರಾದ ಗುರುದತ್ತ ಹೆಗಡೆ ಸೇರಿದಂತೆ ಅಧಿಕಾರಿಗಳು ಹಾಗೂ ಮುಖಂಡರು ಹಾಜರಿದ್ದರು.

ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರ ಭವನಕ್ಕೆ ಭೇಟಿ ನೀಡಿದ ಸಚಿವರಾದ ಸೋಮಶೇಖರ್ ಅವರು, ಸ್ವಾತಂತ್ರ್ಯ ಹೋರಾಟಗಾರರಾದ ವೈ.ಸಿ.ರೇವಣ್ಣ ಅವರು ಸಚಿವರ ಬಳಿ ಸಮಸ್ಯೆಗಳನ್ನು ಹೇಳಿ ಮನವಿ ಪತ್ರ ಸಲ್ಲಿಸಿದರು. ಅವರಿಂದ ಅಹವಾಲನ್ನು ಆಲಿಸಿದ ಸಚಿವರು, ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು

See also  ಮೈಸೂರಿಗೆ ಬರುವ ಪ್ರವಾಸಿಗರಿಗೆ ಸಂತಸದ ಸುದ್ದಿ, ಇನ್ಮುಂದೆ ಐದು ಪ್ರವಾಸಿತಾಣಗಳಿಗೆ ಒಂದೇ ಟಿಕೆಟ್!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು